ಮೂಡಿಗೆರೆ (ಕೊಟ್ಟಿಗೆಹಾರ): ಮಲೆನಾಡಿನ ಕಾಡು ಪ್ರದೇಶದಲ್ಲಿ ಸದ್ದಿಲ್ಲದೆ ನಡೆಯುತ್ತಿದ್ದ ಕಾಟಿ (ಕಾಡುಕೋಣ) ಶಿಕಾರಿ ಹಾಗೂ ಮಾಂಸ ಸರಬರಾಜು ಜಾಲವನ್ನು ಮೂಡಿಗೆರೆ ಅರಣ್ಯ ಅಧಿಕಾರಿಗಳು ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಶುಕ್ರವಾರ ರಾತ್ರಿ ಉಪ ವಲಯ ಅರಣ್ಯಾಧಿಕಾರಿ ಸುಹಾಸ್ ಅವರ ನೇತೃತ್ವದ ತಂಡವು ದಾಳಿ ನಡೆಸಿ, ಬಾಳೂರು ಹೊರಟ್ಟಿ ಗ್ರಾ...
ಉಡುಪಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದೊಯ್ದಿದ್ದ ಬಿಜೆಪಿ ಮುಖಂಡನ ಪುತ್ರನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಕಟಪಾಡಿಯ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ(20) ಎಂಬಾತ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ ಈತ ಅಪ್ರಾಪ್ತ ವಯಸ್ಸಿನ ಬಾ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ದಾನಿಗಳ ನೆರವಿನಿಂದ ಎರಡು ಕಂಪ್ಯೂಟರ್ ಕೊಡುವ ಮೂಲಕ ವಿದ್ಯಾರ್ಥಿ ಸಂಘಟನೆಯಾದ ಎಸ್ ಐಓನ ಪದಾಧಿಕಾರಿಗಳು ಮಾದರಿಯಾಗಿದ್ದಾರೆ. ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಎಸ್ ಐಓ ಕರ್ನಾಟಕ ಘಟಕದ ವತಿಯಿಂದ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಪ...
ಮಂಗಳೂರು: ಐದು ಸಾವಿರ ವರ್ಷಗಳ ಇತಿಹಾಸವಿರುವ ಸನಾತನ ಧರ್ಮಕ್ಕೆ ಆರ್ ಎಸ್ ಎಸ್ ನಿಂದ ಅಪಾಯವಿದೆ ಎಂದು ವಿಧಾನ ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ಏನು ಅನ್ನುವುದು ಕೇರಳದಲ್ಲಿ ಗೊತ್ತಾಗಿದೆ. ಮಕ್ಕಳ ಮೇಲೆ ಅತ್ಯಾಚಾರ ನಡೆದಿದೆ. ಕಾಶ...
ಬಜ್ಪೆ: ಮದ್ರಸಕ್ಕೆ ಹೋಗಿ ಮನೆಗೆ ಬರುತ್ತಿದ್ದ 6 ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಬಜ್ಪೆಯ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ ನಡೆದಿದೆ. ಅಹಿಲ್(6) ಗಾಯಗೊಂಡ ಬಾಲಕ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಬಾಲಕ ಮದ್ರಸಕ್ಕೆ ತೆರಳಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಬಾಲಕ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಮತ್ತಿಕಟ್ಟೆ ಸಮೀಪ ನಾಯಿ ಅಟ್ಟಾಡಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಯು, ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳೀಯರು ರಕ್ಷಿಸಿದರೂ, ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಘಟನೆಯ ನಂತರ ಸಮಾಜಸೇವಕ ಅರೀಫ್ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಮತ್ತು ಅರಣ್ಯ ಇ...
ಮೂಡಿಗೆರೆ: ತಾಲ್ಲೂಕಿನ ಕೊಟ್ಟಿಗೆಹಾರ ಗ್ರಾಮದ ರೈತ ರಿಚರ್ಡ್ ಲೋಬೊ ಅವರ ತೋಟಕ್ಕೆ ಕಳೆದ ಕೆಲವು ದಿನಗಳಿಂದ ಕಾಡಾನೆಗಳು ಹಗಲು--ರಾತ್ರಿ ದಾಳಿ ನಡೆಸುತ್ತಿವೆ. ಇತ್ತೀಚೆಗೆ ಮತ್ತೊಮ್ಮೆ ಬಂದು ತೋಟದಲ್ಲಿದ್ದ ಅಡಿಕೆ, ಕಾಫಿ ಹಾಗೂ ಏಲಕ್ಕಿ ಗಿಡಗಳನ್ನು ಪುಡಿ ಮಾಡಿದ್ದು, ಅಪಾರ ಮೌಲ್ಯದ ಬೆಳೆ ನಾಶವಾಗಿದೆ. ವರ್ಷಪೂರ್ತಿ ಶ್ರಮಿಸಿ ಬೆಳೆ ಬೆಳೆದ ರ...
ಚಿಕ್ಕಮಗಳೂರು: ವಿದ್ಯುತ್ ಸ್ಪರ್ಶದಿಂದ ಮೂರು ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕೆಳಮಲ್ಲಂದೂರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಕೆಳಮಲ್ಲಂದೂರು ಗ್ರಾಮದ ಕೃಷಿಕ ಸಿ.ಎಸ್. ಗೋಪಾಲಗೌಡ ಎಂಬುವವರಿಗೆ ಸೇರಿದ ಮೂರು ಜರ್ಸಿ ಹಸುಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿವೆ. ವಿದ್ಯುತ್ ತಂತಿ ತುಂಡಾಗಿ ಬಿದ್...
ಕೊಟ್ಟಿಗೆಹಾರ: ನಿವೃತ್ತ ಪ್ರಥಮ ದರ್ಜೆ ಸಹಾಯಕರು ಮತ್ತು ಚುನಾವಣಾ ಅಧಿಕಾರಿಗಳಾಗಿದ್ದ ಬಾಳೂರು ಗಜೇಂದ್ರ ಗೌಡ (72)ವರ್ಷ ಅವರು ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಸೋಮವಾರ ಸಂಜೆ 4.30ಕ್ಕೆ ಕೊಟ್ಟಿಗೆಹಾರ ಪಟ್ಟಣದ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಮೃತರು ಇಬ್ಬರು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಗಂಗಮೂಲಕ್ಕೆ ಸಾಗುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸಂಚಾರವೇ ಸಾಹಸದಂತಾಗಿದೆ. ರಸ್ತೆಯಾದ್ಯಂತ ಉಂಟಾದ ದೊಡ್ಡ ದೊಡ್ಡ ಗುಂಡಿಗಳಿಂದಾಗಿ ವಾಹನಗಳು ಓಡಿಸುವುದು ಕಷ್ಟವಾಗಿದ್ದು, ಹಲವು ಸ್ಥಳಗಳಲ್ಲಿ ಅಪಘಾತ ಸಂಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ...