ರಾಯಚೂರು: ಬೀದಿ ನಾಯಿಗಳ ದಾಳಿಗೆ ನಾಲ್ಕು ವರ್ಷ ವಯಸ್ಸಿನ ಬಾಲಕಿಯೊಬ್ಬಳು ಸಾವಿಗೀಡಾದ ದಾರುಣ ಘಟನೆ ರಾಯಚೂರು ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ ನಡೆದಿದೆ. ಕೀರಲಿಂಗ ಅನ್ನೋರ ಮಗಳು ಲಾವಣ್ಯ (4) ಬೀದಿ ನಾಯಿ ದಾಳಿಯಿಂದ ಮೃತಪಟ್ಟ ಬಾಲಕಿಯಾಗಿದ್ದಾಳೆ. ಮನೆಯ ಬಳಿಯಲ್ಲಿ ಆಟವಾಡುತ್ತಿದ್ದ ವೇಳೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿವೆ. ಬಾಲ...
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದೆ. ಭಾರೀ ಗಾಳಿ, ಗುಡುಗು ಮಳೆಗೆ ಜನ ಕಂಗಾಲಾಗಿದ್ದಾರೆ. ಇನ್ನೊಂದೆಡೆ ತುಂತುರು ಮಳೆಗೆ ಶಾಲೆಯ ಕಾಂಪೌಂಡ್ ಕುಸಿದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆ ಉಳ್ಳಾಲ ತಾಲೂಕಿ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. 7 ವರ್ಷದ ಶಾಜಿಯಾ ಎಂಬ ವಿದ್ಯಾರ್ಥಿನಿ ಶಾಲೆಯ ಗೇಟಿನ...
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ...
ಬೆಂಗಳೂರು: ವಿಧಾನಸೌಧ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಶಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಬ್ಬನ್ ಪಾರ್ಕ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾಸಕರ ಭವನದಿಂದ ಬರುವಾಗ, ಅತಿವೇಗವಾಗಿ ಬಂದ ಪೊಲೋ ಕಾರು ಶಾಸಕ ಮಹಾಂತೇಶ ಕೌಜಲಗಿಯವರ ಕಾರಿಗೆ ಡಿಕ್ಕಿ ಹೊಡೆದಿದೆ....
ಬೆಂಗಳೂರು: ಲೈಂಗಿಕ ಕಿರುಕುಳದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಹೆಚ್ಚಿದೆ. ಪ್ರಜ್ವಲ್ ರೇವಣ್ಣ ವಿರುದ್ಧ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯ ಅರೆಸ್ಟ್ ವಾರೆಂಟ್ ಹೊರಡಿಸಿದೆ. ಲೈಂಗಿಕ ಕಿರುಕುಳ ಆರೋಪದ ಬಗ್ಗೆ ತನಿಖೆ ನಡೆಸುತ್ತಿರ...
ರಾಯಚೂರು: ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣಕಳೆದುಕೊಂಡ ಯುವಕನೊಬ್ಬ ಸಾವಿಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಮುದಿಬಸವ (24) ಸಾವನ್ನಪ್ಪಿದ ಯುವಕನಾಗಿದ್ದು, ಲಾಡ್ಜ್ ವೊಂದರಲ್ಲಿ ರೂಮ್ ಪಡೆದು ನೇಣಿಗೆ ಶರಣಾಗಿದ್ದಾನೆ. ಐಪಿಎಲ್ ಬೆಟ್ಟಿಂಗ್ ನಿಂದ ಹೆಚ್ಚು ಹಣ ಮಾಡಬಹುದು ಎಂದು ಭಾವಿಸಿ, ಬೆಟ್ಟಿಂಗ್ ನಲ್ಲಿ ನ...
ದೇವನಹಳ್ಳಿ: ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದ ಕಾರಣ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ರಾತ್ರಿ 11:20ರ ಸುಮಾರಿಗೆ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಕೊಚ್ಚಿಯತ್ತ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ...
ಮೈಸೂರು: ಟ್ರ್ಯಾಕ್ಟರ್ ನ ಅಡಿಗೆ ಸಿಲುಕಿ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದೆ. ಭವಿಷ್ (8) ಮೃತಪಟ್ಟ ಬಾಲಕನಾಗಿದ್ದಾನೆ. ಟ್ರ್ಯಾಕ್ಟರ್ ನ ಅಡಿಗೆ ಸಿಲುಕಿದ ಬಾಲಕನ ದೇಹ ಛಿದ್ರ ಛಿದ್ರಗೊಂಡಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಭವಿಷ...
ತುಮಕೂರು: ನಾನು ಜೈಲಿನಿಂದ ಹೊರಗೆ ಬಂದ ನಂತರ ಸರಕಾರ ಪತನ ಆಗಲಿದೆ ಎಂದು ವಕೀಲ ದೇವರಾಜೇಗೌಡ ನೀಡಿರುವ ಹೇಳಿಕೆಗೆ ಪತ್ರಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್, ಹಾಗಾದರೆ ದೇವರಾಜೇಗೌಡ ಜೈಲಿನಲ್ಲಿಯೇ ಇರಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎಸ್ ಐಟಿಯವರು ವಕೀಲ ದೇವರಾಜ...
ಬೆಂಗಳೂರು: ದೇವರಾಜೇಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು. ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ವಶದಲ...