ಬೆಂಗಳೂರು: ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಎಸ್.ಪಿ.ಎಸ್.ಪಿ. / ಟಿ.ಎಸ್.ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ...
ಮೈಸೂರು: ಶಾಲೆಯ ಶೌಚಾಲಯಕ್ಕೆ ತೆರಳಿದ್ದ 2ನೇ ತರಗತಿಯ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಿಸಲು ಯತ್ನಿಸಿದ ಆಘಾತಕಾರಿ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಾಲಕಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಇಬ್ಬರು ಅಪರಿಚಿತರು ಈ ಕೃತ್ಯ ಎಸಗಿದ್ದು, ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದ್ದಾರೆ. ಇದರಿಂದ ಭ...
ಮಂಡ್ಯ: ನಾಯಿಯ ದಾಳಿಗೆ ಐದು ಪ್ರವಾಸಿಗರು ಗಾಯಗೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಉತ್ತರ ಬೃಂದಾವನದಲ್ಲಿ ನಡೆದಿದೆ. ಕಳೆದ ರಾತ್ರಿ ಉತ್ತರ ಬೃಂದಾವನದಲ್ಲಿ ನಾಯಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ ಕಂಡ ಕಂಡ ಪ್ರವಾಸಿಗರ ಮೇಲೆ ದಾಳಿ ನಡೆಸಿದೆ. ಏಕಾಏಕಿ ನಡೆದ ದಾಳಿಯಿಂದ ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಇದೇ ವೇಳ...
ಚಾಮರಾಜನಗರ. ಎಚ್. ಸಿ. ಮಹದೇವಪ್ಪ, ಸಿದ್ದರಾಮಯ್ಯ ,ಸತೀಶ್ ಜಾರಕಿಹೊಳಿ ಇರುವವರಗೆ ಎಸ್ ಸಿ ಪಿ ಹಾಗೂ ಟಿ ಎಸ್ ಪಿ ಹಣದಲ್ಲಿ ಒಂದು ರೂಪಾಯಿಯೂ ದುರುಪಯೋಗವಾಗಲು ಬಿಡಲ್ಲ ಎಂದು ಚಾಮರಾಜನಗರ ಭೀಮ ಸಂಕಲ್ಪ ಸಮಾವೇಶದಲ್ಲಿ ಸಚಿವ ಎಚ್. ಸಿ. ಮಹದೇವಪ್ಪ ಹೇಳಿಕೆ ನೀಡಿದ್ದಾರೆ. ಎಸ್ಸಿ ಎಸ್ಟಿ ಹುಡುಗರಿಗೆ ಸುಮ್ಸುಮ್ನೆ ಕಂಟ್ರಾಕ್ಟರ್ ಲೈಸೆನ್ಸ್ ಕ...
"ಕಾವೇರಿ, ಮಹದಾಯಿ, ಕೃಷ್ಣಾ ಮತ್ತಿತರ ಜಲವಿವಾದ, ರಾಜ್ಯದ ಅಣೆಕಟ್ಟೆಗಳಲ್ಲಿ ನೀರು ಪರಿಸ್ಥಿತಿ, ಕುರಿತು ಚರ್ಚಿಸಲು ಬುಧವಾರ ಸರ್ವಪಕ್ಷಗಳ ಸಭೆ ಕರೆದಿದ್ದೇವೆ. ಈ ಸಭೆಗೆ ಕೆಲವು ಸಂಸದರಿಗೂ ಆಹ್ವಾನ ನೀಡಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಅವರು ಭಾನುವಾರ ಮಾಧ್ಯಮ ಪ್ರತಿಕ್ರಿಯೆ ನೀಡಿದರು. ಅವ...
ಬೆಂಗಳೂರು: ಕೃಷಿ ಸಚಿವ ಚಲುವಾರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರಿನ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆಯುವ ಮೂಲಕ, ಈ ಸರಕಾರದಲ್ಲಿ ವರ್ಗಾವಣೆ ದಂಧೆ ಹಾಗೂ ಮಂತ್ರಿಗಳಿಂದ ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿ...
ಸಂವಿಧಾನದ ಮಹತ್ವ ಪ್ರತಿ ಮನೆಮನೆಗೆ ಮುಟ್ಟಬೇಕು. ಹಬ್ಬ, ಮದುವೆಯಲ್ಲಿ ಸಂವಿಧಾನ ಪೀಠಿಕೆ ಓದುವ ಪರಿಪಾಠ ಆಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಭೀಮ ಸಂಕಲ್ಪ ಸಮಾವೇಶದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಸತತ ಪ್ರಯತ್...
ಅನಾರೋಗ್ಯದಿಂದ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು 3 ದಿನಗಳಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಎಸ್.ಎಂ.ನೌಫಲ್(32) ಬಂಧಿತ ಆರೋಪಿ. ಡ್ರಗ್ಸ್ ಪ್ರಕರಣಕ್ಕೆ ಧರ್ಮಸ್ಥಳ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ...
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಖಾಸಗಿ ಮೀನು ಅಂಗಡಿಗೆ ಮಂಗಳೂರಿನಿಂದ ಬಂದ 340 ಕೆ.ಜಿ. ತೂಕದ ಬೃಹತ್ ಮೀನನ್ನು ನೋಡಿ ಗ್ರಾಹಕರು ಮುಗಿಬಿದ್ದ ಘಟನೆ ನಡೆದಿದೆ. ನಗರದ ಉಪ್ಪಳ್ಳಿ ಬಡಾವಣೆಯ ಮೀನಿನ ಅಂಗಡಿಯಲ್ಲಿ ಬೃಹತ್ ಮೀನನ್ನು ಕಂಡು ಸಾರ್ವಜನಿಕರು ಅಚ್ಚರಿಗೀಡಾಗಿದ್ದರು. ಮೀನನ್ನು ನೋಡುತ್ತಿದ್ದಂತೆಯೇ ಸಾರ್ವಜನಿಕರು ಮೊಬೈಲ್ ತೆಗೆದು ...
ಉಡುಪಿ: ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ವ್ಯಾಪ್ತಿಯ ಅಧಿಕಾರಿಗಳೇ ಜವಾಬ್ದಾರರಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಎಚ್ಚರಿಕೆ ನೀಡಿದರು. ...