ಕಳೆದ ಹಲವು ದಿನಗಳಿಂದ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಕಾಮಗಾರಿಯಿಂದಾಗಿ ಜನ ಕಂಗಾಲಾಗಿದ್ದಾರೆ. ಇದಕ್ಕೆ ಸಂಬಂಧಪಟ್ಟವರು ಇನ್ನಾದರೂ ಸೂಕ್ತ ಕ್ರಮ ಕೈಗೊಂಡು ಇಲ್ಲಿನ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಕೂಳೂರಿನಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯು ಬೃಹತ್ ಪ್ರತಿಭಟನೆ ನಡೆಸಿತು. ರಸ್ತೆ ದುರವಸ...
ಮಂಗಳೂರು ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರರೊಬ್ಬರು ಬಲಿಯಾಗಿದ್ದಾರೆ. ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದಿದ್ದು, ಈ ಸಂದರ್ಭದಲ್ಲಿ ಸವಾರನೂ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂಬದಿಯಿಂದ ಬಂದ ಸರಕು ತುಂಬಿದ ಲಾರಿ ರಸ್ತೆಯಲ...
ಬೆಂಗಳೂರು, ಜು 18: ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ...
ಮುಂದಿನ ಲೋಕಸಭಾ ಚುನಾವಣೆಗೆ ವಿವಿಧ ಪಕ್ಷಗಳ ಭರದಿಂದ ಸಿದ್ಧತೆ ನಡೆಸುತ್ತಿವೆ. ಇದೇ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಜಾರಕಿಹೊಳಿ ಕುಟುಂಬದಿಂದ ಹೊಸ ಮುಖ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನುವ ವಿಚಾರ ಚರ್ಚೆಗೀಡಾಗುತ್ತಿದೆ. ಸತೀಶ್ ಜಾರಕಿಹೊಳಿ ಅವರ ಪುತ್ರಿ 25 ವರ್ಷದ ಪ್ರಿಯಾಂಕಾ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಭಾಷೆಯ ಪರಿಜ್ಞಾನ ಇದೆ ಎಂದು ಭಾವಿಸಿದ್ದೆ. ಆದರೆ, ಅದು ಸುಳ್ಳು ಎನ್ನುವುದು ಈಚೆಗೆ ವಿಧಾನ ಪರಿಷತ್ ನಲ್ಲಿ ಅವರು ರಾಜ್ಯಪಾಲರ ಭಾಷಣದ ಮೇಲೆ ಉತ್ತರ ಕೊಟ್ಟಾಗ ನನಗೆ ಗೊತ್ತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಕಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತ...
ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಸರ್ಕಾರ ಖಚಿತ ತೀರ್ಮಾನ ತೆಗೆದುಕೊಳ್ಳಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರ ಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಾಸಕರಾದ ಬಿ.ಆರ್.ಪಾಟೀಲ್ ಹಾಗೂ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ರೈತ ...
ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯಲ್ಲಿ ನಿಮ್ಮ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ವರಿಷ್ಠ ನಾಯಕರನ್ನು ಮನವಿ ಮಾಡಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾನು ಬಿಜೆಪಿ ವರಿಷ್ಠರಿಗೆ ಸಲಹೆ ಕೊಡುವಷ್ಟು ದೊಡ್ಡವನಲ್ಲ. ಆದರೆ, ಈ ಸರಕಾರದ ವಿರುದ್ಧ ಸದ...
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ. ಬಿಜೆಪಿ ಮಿತ್ರ ಪಕ್ಷಗಳು ಸೋಲನ್ನು ಅನುಭವಿಸಲಿದ್ದು , ವಿಪಕ್ಷಗಳ ಒಕ್ಕೂಟ ಗೆಲುವು ಸಾಧಿಸಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಇಂದು ನಡೆ...
ಉಡುಪಿ: ಯುವ ಜನತೆ ತಮ್ಮ ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡಲು ಸ್ಪಷ್ಟ ಗುರಿ ಇಟ್ಟುಕೊಂಡು, ಗುರಿ ತಲುಪಲು ನಿರಂತರವಾಗಿ ಪರಿಶ್ರಮ ಪಡಬೇಕು ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಹೇಳಿದರು.ಅವರು ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನಡೆದ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಗೆ ಚಾಲನೆ ...
ಚಾಮರಾಜನಗರ: ಟಾಟಾ ಏಸ್ ವಾಹನ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶಿವಪುರ-ಹುಂಡಿಮನೆ ಮಾರ್ಗ ಮಧ್ಯೆ ನಡೆದಿದೆ. ಭೀಮನ ಅಮಾವಾಸ್ಯೆ ಪ್ರಯುಕ್ತ ಟಾಟಾ ಏಸ್ ವಾಹನದಲ್ಲಿ ಮಹದೇಶ್ವರ ದೇವಸ್ಥಾನಕ್ಕೆ 20 ಕ್ಕೂ ಹೆಚ್ಚು ಮಂದಿ ಹೊರಟಿದ್ದರು. ಚಾಲಕನ ಅಜಾಗರೋಕತೆಯಿಂದ ವಾಹನ ಮಗುಚಿ ಬಿದ್ದಿದ್ದು, ಪರಿಣಾಮವಾಗಿ ವಾಹನದಲ್ಲಿದ್ದವರಿಗೆ ಕ...