ಬೆಂಗಳೂರು: ಹಾಡಹಗಲೇ ಜ್ಯೋತಿಷಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ 5 ಲಕ್ಷ ರೂಪಾಯಿ ದೋಚಿದ ಘಟನೆ ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದಲ್ಲಿ ನಡೆದಿದೆ. ವರದಿಗಳ ಪ್ರಕಾರ, ಜ್ಯೋತಿಷ್ಯ ಕೇಳುವ ನೆಪದಲ್ಲಿ ಕಳ್ಳರ ತಂಡ ಬಂದಿದ್ದು, ಬಳಿಕ ಜ್ಯೋತಿಷಿ ಪ್ರಮೋದ್ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದಾರೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ...
ಮೈಸೂರು: ಮಂಗಗಳಿಗೆ ಪುನರ್ವಸತಿ ಕಲ್ಪಿಸಲು ಕರ್ನಾಟಕ ಸರ್ಕಾರ ಎರಡು ಕೋಟಿ ವೆಚ್ಚದಲ್ಲಿ ವಿಶೇಷ ಉದ್ಯಾನವನ ನಿರ್ಮಿಸಲು ನಿರ್ಧರಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಂಗಗಳ ಕಾಟಕ್ಕೆ ಪರಿಹಾರ ಕಂಡುಕೊಳ್ಳುವುದು ಹಾಗೂ ಪ್ರವಾಸಿಗರನ್ನು ಸೆಳೆಯುವುದು ಇದರ ಉದ್ದೇಶವಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪಾರ್ಕ್ ನಿರ್ಮಾಣವಾಗುತ್ತಿದೆ....
ಮೈಸೂರು: ದೇವನೂರು ಮಹಾದೇವ ಅವರ ಆರೆಸ್ಸೆಸ್ ಆಳ ಮತ್ತು ಅಗಲ ಎಂಬ ಕೃತಿಯು ದಾಖಲೆ ಬರೆದಿದ್ದು, ಸದ್ಯದ ಮಾಹಿತಿಗಳ ಪ್ರಕಾರ 10 ಸಾವಿರಕ್ಕೂ ಅಧಿಕ ಪುಸ್ತಕಗಳು ಮಾರಾಟವಾಗಿವೆ ಎಂದು ತಿಳಿದು ಬಂದಿದೆ. ರಾಜ್ಯಾದ್ಯಂತ ಪುಸ್ತಕಕ್ಕೆ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಪುಸ್ತಕ ಭಾರೀ ಚರ್ಚೆಗಳಿಗೆ ಕಾರಣವಾಗಿದೆ. ...
ಬೆಳ್ತಂಗಡಿ: ತುಳುನಾಡಿನಲ್ಲಿ ಅಂಬೇಡ್ಕರ್ ವಾದವನ್ನು ಬಿತ್ತಿದ ಚಳುವಳಿಗಾರ, ಮನುವಾದದ ವಿರುದ್ಧದ ಗಟ್ಟಿ ಧ್ವನಿ ಪಿ.ಡೀಕಯ್ಯನವರು ನಿಧನರಾಗಿದ್ದು, ಇವರ ಅಂತಿಮ ದರ್ಶನವು ಜುಲೈ 9ರಂದು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಬೆಳಗ್ಗೆ 9:30ಕ್ಕೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ವಿವಿಧ ಸಂಘಟನೆಗಳ ಮುಖಂಡರು ಸಾಮಾಜ...
ಬೆಂಗಳೂರು: ನ್ಯಾಯ ಕೇಳಲು ಹೋದರೆ, ಗೃಹ ಸಚಿವರು ಬೈದು ಕಳಿಸಿದ್ದಾರೆ ಎನ್ನುವ ಹರ್ಷ ಸಹೋದರಿ ಆರೋಪಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅವರು ಏನೇನೋ ಮಾತನಾಡಿದ್ರು, ಆ ರೀತಿ ಮಾತನಾಡಿದ್ರೆ ನಾವೇನು ಮಾಡೋಣ ಎಂದು ಸಚಿವರು ಪ್ರಶ್ನಿಸಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅರಗ ಜ್ಞಾನೇಂದ್ರ, ರಾಜುನನ್ನ ಅತ್ಯಂತ...
ಮಂಗಳೂರು: ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯನವರು ನಿನ್ನೆ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಪಿ. ಡಿಕಯ್ಯನವರು, ತಮ್ಮ ಬಹು ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ...
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತ ಚಳುವಳಿಯನ್ನು ಕಟ್ಟಿ ಬೆಳೆಸಿದ ಪ್ರಮುಖರಲ್ಲಿ ಓರ್ವರಾದ ಪಿ. ಡೀಕಯ್ಯರವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರು ಮಣಿಪಾಲದ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯದ ಮಾಹಿತಿಗಳ ಪ್ರಕಾರ ಮನೆಯಲ್ಲಿ ಆಯತಪ್ಪಿ ಬಿದ್ದ ಪರಿಣಾಮ ಅವರಿಗೆ ಗಂಭೀರ...
ಹುಬ್ಬಳ್ಳಿ: ನಮ್ಮ ಪ್ರತಿ ಕೆಲಸಗಳಿಗೂ ಸ್ವಾಮೀಜಿ ಅಡ್ಡಗಾಲು ಹಾಕುತ್ತಿದ್ದರು. ನಮ್ಮನ್ನು ಬದುಕಲು ಬಿಡಲಿಲ್ಲ. ಹೀಗಾಗಿ ತಾಳ್ಮೆಗೆಟ್ಟು ಹತ್ಯೆ ಮಾಡಿದ್ದೇವೆ ಎಂದು ಚಂದ್ರಶೇಖರ್ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಆರೋಪಿಗಳನ್ನು ತೀವ್ರ ತನಿಖ...
ಪ್ಲಾಸ್ಟಿಕ್ ನಿಂದ ನಮ್ಮ ಪರಿಸರಕ್ಕೆ ನಾನಾ ರೀತಿಯ ತೊಂದರೆಗಳಿವೆ ಎನ್ನುವುದು ತಿಳಿದಿದ್ದರೂ, ಈವರೆಗೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಯಾವುದೇ ಸರ್ಕಾರಗಳಿಂದ ಸಾಧ್ಯವಾಗಿಲ್ಲ. ಪ್ರತಿ ಬಾರಿಯೂ ಪ್ಲಾಸ್ಟಿಕ್ ನಿಷೇಧ ಎಂಬ ಪ್ರಹಸನಗಳು ನಡೆದು ಬಳಿಕ ಎಂದಿನಂತೆಯೇ ಪ್ಲಾಸ್ಟಿಕ್ ಬಳಕೆ ಮುಂದುವರಿಯುತ್ತಿದೆ. ಮಳೆಗಾಲ ಆರಂಭವಾ...
ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್ ಗುರೂಜಿ ಹತ್ಯೆಯ ಬೆನ್ನಲ್ಲೇ ಆರೋಪಿಗಳಲ್ಲಿ ಓರ್ವನಾದ ಮಹಾಂತೇಶ್ ಶಿರೂರನ ಫೇಸ್ ಬುಕ್ ನಲ್ಲಿ ಶೇರ್ ಮಾಡಿಕೊಂಡಿರುವ ಪೋಸ್ಟ್ ಎಲ್ಲರ ಗಮನ ಸೆಳೆದಿದ್ದು, 5 ದಿನಗಳ ಹಿಂದೆಯೇ ಹತ್ಯೆಯ ಮುನ್ಸೂಚನೆಯನ್ನು ಆರೋಪಿ ನೀಡಿದ್ದ ಎನ್ನುವ ಚರ್ಚೆಗಳಿಗೆ ಕಾರಣವಾಗಿದೆ. ಅಧರ್ಮ ತಾಂಡವವಾಡುತ್ತಿರು...