ಬೆಂಗಳೂರು: ಮದ್ಯದ ಅಮಲಿನಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕವಾಗಿ ಓಡಾಡಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿರುವ ಘಟನೆ ನಡೆದಿದೆ. ಓಕಾವೋ ಲಿಯೋಸ್ ಬಂಧಿತ ಆರೋಪಿ. ಐವರಿಕೋಸ್ಟ್ ಪ್ರಜೆಯಾಗಿರುವ ಓಕಾವೋ ಲಿಯೋಸ್, ಮದ್ಯದ ಅಮಲಿನಲ್ಲಿ ಹೆಣ್ಣೂರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತ ಸಾರ್ವಜನಿಕರಿಗೆ ಹೆದರಿಸುತ್ತ...
ಕಲಬುರಗಿ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಜಿಲ್ಲೆಯ ಶಹಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚೈತ್ರಾ ಮಂಗಳವಾರ ನಡೆಯಲಿರುವ ಆಳಂದ ಚಲೋ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಲಬುರಗಿಗೆ ಆಗಮಿಸುತ್ತಿದ್ದರು. ಈ ವೇಳೆ ಯಾದಗಿರಿ ಮಾರ್ಗವಾಗಿ ಕಲಬುರಗಿಗೆ ಆಗಮಿಸುತ್ತಿರುವ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಂತಿ ...
ಬೆಂಗಳೂರು: ನ್ಯಾಯಾಧೀಶರ ವಿರುದ್ಧ ಟ್ವೀಟ್ ಮಾಡಿದ ಆರೋಪದಲ್ಲಿ ಬಂಧನವಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಇಂದು ಬಿಡುಗಡೆಯಾಗಿದ್ದಾರೆ. ಶುಕ್ರವಾರವೇ ಜಾಮೀನು ಮಂಜೂರಾಗಿದ್ದರೂ, ಆದೇಶ ಪ್ರತಿ ಲಭ್ಯವಾಗುವುದು ತಡವಾದ ಹಿನ್ನೆಲೆಯಲ್ಲಿ ಅವರು ಇಂದು ಸಂಜೆ ಬಿಡುಗಡೆಯಾಗಿದ್ದು, ಒಂದು ವಾರದ ನ್ಯಾಯಾಂಗ ಬಂಧನದ ಬಳಿಕ ಅವರು ಇಂದು ಬ...
ಚಿಕ್ಕಬಳ್ಳಾಪುರ: ಖಾಸಗಿ ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರು ಮೂಲದ ನಿವಾಸಿಗಳಾದ ಗೌಸ್ (35), ಅವರ ಪತ್ನಿ ಅಮ್ಮಾಜಾನ್ (25) ಮತ್ತು ಪುತ್ರ ರಿಯಾಜ್ (13...
ಬೆಂಗಳೂರು: ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸ್ ಬಂಧಿಸಿರುವ ಬಗ್ಗೆ ವರದಿಯಾಗಿದೆ. ಆಂಧ್ರಪ್ರದೇಶ ಮೂಲದ ವಂತಲ ಕೇಶವ ರಾವ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ನಗರದ ಲಾರಿ ಡ್ರೈವರ್ಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರ...
ಬೆಂಗಳೂರು: ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮುಂದುವರಿಸಲಿದ್ದು, ಬಿಬಿಎಂಪಿ ಕೇಂದ್ರ ಕಚೇರಿಯ ಹಲವು ವಿಭಾಗಗಳಲ್ಲಿ ಇಂದು ಕೂಡ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕಳೆದ ಶುಕ್ರವಾರ ಬಿಬಿಎಂಪಿಗೆ ಸೇರಿದ 27 ಕಡೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಕೋಟ್ಯಂತರ ರೂ. ಅಕ್ರಮ ವ್ಯವಹಾರ ಪತ್ತೆ ಹಚ್ಚಿದ್ದಾರೆ ಹಾಗೂ ಅವ್ಯವಹಾರ ಸಂ...
ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಮಕ್ಕಳಿಲ್ಲದ ದಂಪತಿಯನ್ನೇ ಟಾರ್ಗೆಟ್ ಮಾಡಿ ನಿಮಗೆ ಮಕ್ಕಳಾಗುತ್ತದೆ ಎಂದು ನಂಬಿಸಿ ಲಕ್ಷ ಲಕ್ಷ ವಂಚಿಸುತ್ತಿದ್ದ ನಕಲಿ ವೈದ್ಯರ ತಂಡವನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ವಾಣಿ ಹಾಗೂ ಮಂಜುನಾಥ್ ಎಂಬವರು ಮಕ್ಕಳಿಲ್ಲದ ದಂಪತಿಗೆ ಮೋಸ ಮಾಡಿರುವ ನಕಲಿ ವೈದ್ಯರು. ಆರೋಪಿಗಳು ನಿಮಗೆ ಮ...
ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಲ್ ವೀರಸ್ವಾಮಿ ಇಂದು ಬೆಳಗ್ಗೆ 6.30ರ ಸುಮಾರಿಗೆ ಮೃತಪಟ್ಟಿದ್ದಾರೆ. ಪಟ್ಟಮ್ಮಲ್ ವೀರಸ್ವಾಮಿ (83) ಹಲವು ದಿನಗಳಿಂದ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ...
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲೂಡಿ ಗ್ರಾಮದ ಮನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಇಡೀ ಮನೆ ಸಂಪೂರ್ಣ ಛಿದ್ರಗೊಂಡಿದ್ದು, ದಂಪತಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗ್ಗಿನ ಜಾವ ನಡೆದಿದೆ. ವಿನಯ್ ಹಾಗೂ ನಂದಿನಿ ಗಂಭೀರ ಗಾಯಗೊಂಡವರು. ಅವರು ಶಾಂತರಾಜು ಅವರ ಬಾಡಿಗೆ ಮನೆಯಲ್ಲಿ ವಿನಯ್ ಹಾಗೂ ನಂ...
ತುಮಕೂರು: ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಐಡಿ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲೆ ರಂಗಪ್ಪ(57) ಕರಡಿ ದಾಳಿಗೆ ಸಿಲುಕಿರುವ ರೈತ. ಅವರು ಕರಡಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಕರಡಿ ಮಲ್ಲೆ ರಂಗಪ್ಪ ಮೇಲೆ ಭೀಕರ ದಾಳಿ ನಡೆಸಿದೆ. ಗಾಯಾಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದ...