ಕಾಸರಗೋಡು: ತೌಕ್ತೆ ಚಂಡಮಾರುತದ ಪರಿಣಾಮ ಕೇರಳದಲ್ಲಿ ಕಳೆದ ರಾತ್ರಿ ಸುರಿಯಲು ಆರಂಭಿಸಿದ ಭಾರೀ ಮಳೆ ಮುಂದುವರಿದಿದೆ. ಇನ್ನೊಂದೆಡೆ ಸಮುದ್ರದಿಂದ ತೀರ ಪ್ರದೇಶಕ್ಕೆ ಬೃಹತ್ ಅಲೆಗಳು ಅಪ್ಪಳಿಸುತ್ತಿದ್ದು, ಸಾರ್ವಜನಿಕರು ಆತಂಕದಲ್ಲಿದ್ದಾರೆ. ಕಾಸರಗೋಡು ತೀರ ಪ್ರದೇಶವೊಂದರಲ್ಲಿದ್ದ ಎರಡು ಅಂತಸ್ತಿನ ಕಟ್ಟಡಕ್ಕೆ ಬೃಹತ್ ಅಲೆಗಳು ಅಪ್ಪಳಿಸಿದ್ದ...
ಉಡುಪಿ: ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಕಾಪು, ಬೈಂದೂರು ಹಾಗೂ ಉಡುಪಿ ತಾಲೂಕಿನಲ್ಲಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ಬೃಹತ್ ಅಲೆಗಳ ಅಬ್ಬರಕ್ಕೆ ದಂಡೆಯಲ್ಲಿದ್ದ ನೂರಾರು ಬೃಹತ್ ಬಂಡೆಗಳು ಸಮುದ್ರಪಾಲಾಗಿವೆ. ಬೈಂದೂರು ತಾಲ್ಲೂಕಿನ ಮರವಂತೆ ತೀರದಲ್ಲಿರುವ ಕರಾವಳಿ ಮಾರ್ಗದ ಕಾಂಕ್ರಿಟ್ ರಸ್ತೆ ತುಂಡಾಗಿದೆ. ಸಮುದ್ರಕ್ಕೆ ತಾಗಿಕೊಂಡಿರುವ 5...
ಮಂಗಳೂರು: ತೌಕ್ತೆ ಚಂಡಮಾರುತಕ್ಕೆ ಕರಾವಳಿ ತತ್ತರಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾರವಾರದಲ್ಲಿ ನಿನ್ನೆ ರಾತ್ರಿ ಆರಂಭವಾಗಿದ್ದ ಮಳೆ ಮುಂದುವರಿದಿದ್ದು, ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಇನ್ನೂ ಮಳೆಗೆ ಕಾರವಾರದಲ್ಲಿ ಓರ್ವ ಮೀನುಗಾರ ಮೃತಪಟ್ಟಿದ್ದಾರೆ. ಜಾಲಿಕೋಡಿ ನಿವಾಸಿ ಲಕ್ಷ್ಮಣ ಈರಪ್ಪ ನಾಯ್ಕ ಎಂಬ 60 ವರ್ಷ ವಯಸ್ಸಿನ ಮೀ...
ಮಂಗಳೂರು: ರಾಜ್ಯದ ಕರಾವಳಿ ಭಾಗಗಳಿಗೆ ತೌಕ್ತೆ ಚಂಡಮಾರುತ ಅಪ್ಪಳಿಸಲಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್ ಅಲಾರ್ಟ್ ಘೋಷಿಸಲಾಗಿದೆ. ಈಗಾಗಲೇ ಕರಾವಳಿಯಲ್ಲಿ ಬಲವಾದ ಗಾಳಿ ಬೀಸುತ್ತಿದ್ದು, ಗಾಳಿ ಬಲಗೊಳ್ಳುವ ಸಾಧ್ಯತೆ ಇದೆ. ತೌಕ್ತೆ ಚಂಡಮಾರುತದ ಅಬ್ಬರದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮೇ 14ರಿಂದ 16ವರೆಗೆ ರೆಡ್ ಅಲಾರ್ಟ್ ಘೋಷ...
ಬೆಂಗಳೂರು: ರಾಜ್ಯದಲ್ಲಿ ಜನರು ಕೊರೊನಾದಿಂದ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಬಿಜೆಪಿ ಸರ್ಕಾರ ನಡೆಸುತ್ತಿರುವ ಕೊರೊನಾ ನಿರ್ವಹಣೆ ಸ್ವಪಕ್ಷೀಯ ಕಾರ್ಯಕರ್ತರಿಗೇ ತೃಪ್ತಿ ತಂದಿಲ್ಲ. ಈ ನಡುವೆ ಪಕ್ಷದ ಕಾರ್ಯಕರ್ತರೋರ್ವರು ಡಿ.ವಿ.ಸದಾನಂದ ಗೌಡರಿಗೆ ಕೇಳಿದ ಪ್ರಶ್ನೆ ಮತ್ತು ಅವರ ಉತ್ತರ ಸದ್ಯ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಕೇರಳ, ...
ಬೆಂಗಳೂರು: ಲಸಿಕೆ ಅಭಿಯಾನದಡಿಯಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿತ್ತು. ಇದರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆ ನೀಡಿದ್ದು, ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಹೈಕೋರ್ಟ್ ನ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಸಿ.ಟಿ.ರವಿ, ನ...
ಬೆಂಗಳೂರು: ಸಿಎಂ ಯಡಿಯೂರಪ್ಪನವರು ಇಂದು ಸಂಜೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಯಾವುದೇ ವಿಶೇಷ ಪ್ಯಾಕೇಜ್ ಘೋಷಿಸದೇ, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸರ್ಕಾರ ನೀಡಿದ ಹೇಳಿಕೆಗಳನ್ನೇ ಪುನರಾವರ್ತಿಸಿ ಪ್ರೆಸ್ ಮೀಟ್ ಮುಗಿಸಿದರು. ಇಂದು ಸಿಎಂ ಯಡಿಯೂರಪ್ಪ ಪತ್ರಿಕಾಗೋಷ್ಠಿ ಕರೆದಾಗ ರಾಜ್ಯದ ಜನತೆ ಹೊರ ನಿರೀಕ್ಷೆಯಲ್ಲಿದ್ದರು....
ದಾವಣಗೆರೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ್ದು, ಸುಮಾರು 20 ರೋಗಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊನ್ನಾಳಿ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ 1 ಗಂಟೆಯ ಸುಮಾರಿಗೆ ಆಕ್ಸಿಜನ್ ಕೊರತೆಯಾಗಿದೆ. ಈ ವಿಚಾರ ತಿಳಿದ ಕೂಡಲೇ ರೇಣುಕಾ...
ಬೆಂಗಳೂರು: ಕೋವಿಡ್ ವ್ಯಾಕ್ಸಿನ್ ಉತ್ಪಾದನೆಯಾದೇ ಹೋದರೆ ನಾವೇನು ನೇಣುಹಾಕಿಕೊಳ್ಳಲಾಗುತ್ತದೆಯೇ? ಎಂದು ಕೇಂದ್ರ ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅಗತ್ಯಕ್ಕನುಸಾರವಾಗಿ ಸಾಕಷ್ಟು ಪ್ರಮಾಣದಲ್ಲಿ ಕೋವಿಡ್ ವ್ಯಾಕ್ಸಿನ್...
ಹಾವೇರಿ: ಸಾಂಕ್ರಾಮಿಕ ರೋಗ ಕೊರೊನಾವನ್ನು ಗೆದ್ದು ಬಂದ ಆ ತಾಯಿ, ತನ್ನ ಮಗನ ಮುಂದೆ ಸೋತಿದ್ದಳು. ಕೊರೊನಾವನ್ನು ಗೆದ್ದ ಖುಷಿಯಲ್ಲಿ ಮನೆಗೆ ಬಂದಿದ್ದ ತಾಯಿಯನ್ನು ಮನೆಗೆ ಸೇರಿದ ಮಗನ ವರ್ತನೆಯಿಂದ ತೀವ್ರವಾಗಿ ನೊಂದ 80 ವರ್ಷದ ತಾಯಿ ಸಾವಿಗೆ ಶರಣಾಗಿದ್ದಾರೆ. ಹಾವೇರಿಯ ದೇವಿಹೊಸುರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 80 ವರ್ಷದ ಅಡಿವೆಕ್...