ಬೆಂಗಳೂರು: ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಹೆಚ್ಳವಾಗುತ್ತಿದ್ದಂತೆಯೇ ಸಂಸದೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಸಲಹೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರ ಪಡೆದುಕೊಳ್ಳಬೇಕು ಸೇರಿದಂತೆ ವಿವಿಧ ಒತ...
ಬೆಂಗಳೂರು: ವೀಕೆಂಡ್ ಕರ್ಫ್ಯೂ ಮುಂದುವರಿಸುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಸಚಿವರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ. ರಾಜ್ಯದಲ್ಲಿ ಅಗತ್ಯ ಬಿದ್ದರೆ, ಕರ್ಫ್ಯೂ ಮುಂದುವರಿಸುವ ಸಾಧ್ಯತೆ ಇದೆ ಎಂದು ಸದಾನಂದ ಗೌಡ ಹೇಳಿದ್ದು, 15 ದಿನಗಳ ಬಳಿಕ ಸೋಂಕು ಹರಡುತ್ತಿರು...
ಬೆಂಗಳೂರು: ಭಾರತದಲ್ಲಿ ಈಗ ರೂಪಾಂತರಗೊಂಡಿರುವ ಕೊರೊನಾ ಹಿಂದಿನ ಕೊರೊನಾದ ಮಾದರಿಯಲ್ಲ, ಈ ವೈರಾಣುವಿನ ಸ್ವಭಾವ ಬೇರೆಯೇ ಆಗಿದ್ದು, ಬಹಳ ವೇಗವಾಗಿ ಈ ಕೊರೊನಾ ಹರಡುತ್ತದೆ ಎಂದು ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಈಗ ರೂಪಾಂತರಗೊಂಡಿರುವ ಕೊರೊನಾ, ಯುಕೆ ವೈರಸ್,...
ಹುಬ್ಬಳ್ಳಿ: ಲಾಕ್ ಡೌನ್ ನಡುವೆಯೇ ಪೊಲೀಸರು ಕುಡುಕನೋರ್ವನಿಂದ ಟಾರ್ಚರ್ ಅನುಭವಿದ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಲಾಕ್ ಡೌನ್ ಇದ್ದರೂ ಕಂಠಮಟ್ಟ ಕುಡಿದು ಕಿರಿಕ್ ಮಾಡುತ್ತಿದ್ದ ಕುಡುಕನನ್ನು ಪೊಲೀಸರು ಹೇಗೋ ಎತ್ತಿಕೊಂಡು ಬಂದು ಒಂದು ಅಂಗಡಿಯ ಬದಿಯಲ್ಲಿ ಮಲಗಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ...
ಬೆಂಗಳೂರು: ಕೊರೊನಾ ಬಾಧಿತರಿಗೆ ಸಹಾಯಹಸ್ತ ಚಾಚುವಂತೆ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನಿರ್ದೇಶನ ನೀಡಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿಯು ಕಾರ್ಯಪ್ರವೃತ್ತವಾಗ್ಇದ್ದು, ಕೊವಿಡ್ ನಿಭಾಯಿಸುವ ನಿಟ್ಟಿನಲ್ಲಿ ವೈದ್ಯಕೀಯ ತಂಡ ರಚನೆಗೆ ಸಿದ್ಧವಾಗಿದೆ. ಕೋವಿಡ್ ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಗಮನ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ ಐಟಿ) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸೋಂಕಿತರ ಚಿಕಿತ್ಸೆಗೆ ಪ್ರತೀ ದಿನ 1,471 ಟನ್ ಆಕ್ಸಿಜನ್ ಪೂರೈಸುವಂತೆ ಸಿಎಂ ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮುಂದಿನ 10 ದಿನಗಳಿಗೆ ಎರಡು ಲಕ್ಷ ಡೋಸ್ಗಳಷ್ಟು ರೆಮ್ಡೆಸಿವಿರ್ ಔಷಧವನ್ನು ರಾಜ್ಯಕ್ಕೆ ನೀಡಬೇಕೆಂದು ಕೇಳಿಕೊಂಡಿದ್ದಾರೆ....
ಚನ್ನಪಟ್ಟಣ: ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಕೊರೊನಾ ಮಾರ್ಗದರ್ಶಿ ಬಿಜೆಪಿ ನಾಯಕರಿಗೆ ಅನ್ವಯವಾಗುವುದಿಲ್ಲವೇ? ಬಿಜೆಪಿ ನಾಯಕರಿಗೇನಾದರೂ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಜಾರಿ ಮಾಡಿದೆಯೇ ಎನ್ನುವ ಅನುಮಾನಗಳು ಇದೀಗ ಕೇಳಿ ಬಂದಿದೆ. ಮೊನ್ನೆಯಷ್ಟೇ ಸಚಿವ ಶ್ರೀರಾಮುಲು ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಸ್ಕ್ ಧರಿಸದೇ, ದೈಹಿಕ ಅಂತರ...
ಉಡುಪಿ: ಬಸ್ ನಲ್ಲಿ ಕೊವಿಡ್ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ವಿದ್ಯಾರ್ಥಿನಿಯರನ್ನು ಬಸ್ ನಿಂದ ಇಳಿಸಿದ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಕಾರ್ಯಕ್ರಮವೊಂದರಲ್ಲಿ ಮಾಸ್ಕ್ ಧರಿಸದೇ ಫೋಟೋಗೆ ಪೋಸ್ ನೀಡಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸ್ ಅಧಿಕಾರಿಯೊಬ್ಬರ ಮಗಳ ಮೆಹೆಂದಿ ಕಾರ್ಯಕ್ರಮ ಎನ್ನಲಾಗಿರುವ ಕಾರ್ಯ...
ಬೆಂಗಳೂರು: ಕೊರೊನಾ ಪಾಸಿಟಿವ್ ವರದಿ ಬಂದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ 61 ವರ್ಷ ವಯಸ್ಸಿನ ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕೆಲವು ದಿನಗಳ ಹಿಂದೆಯಷ್ಟೇ ವಿಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನ...