ದಾವಣಗೆರೆ: ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಮೇಲೆ ಕೋತಿಯೊಂದು ದಾಳಿ ಮಾಡಲು ಯತ್ನಿಸಿದ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದ್ದು, ಸ್ವಲ್ಪದರಲ್ಲೇ ಅವರು ಪಾರಾಗಿದ್ದಾರೆ. ತಮ್ಮ ಬೆಂಬಲಿಗರ ಜೊತೆಗೆ ಹೊನ್ನಾಳಿ ಪಟ್ಟಣದ ತಾಲೂಕು ಕಚೇರಿ ಸಮೀಪ ನಿಂತುಕೊಂಡು ಮಾತನಾಡುತ್ತಿದ್ದ ವೇಳೆ ಕೋತಿಯೊಂದು ರೇಣುಕಾಚಾರ್ಯ ಅವರನ್ನು ನೋಡಿ ಆಕ್ರೋಶ...
ಬಾಗಲಕೋಟೆ: ಸಾವಿರಾರು ಹಾವುಗಳನ್ನು ರಕ್ಷಣೆ ಮಾಡಿದ್ದ ಉರಗ ತಜ್ಞ ಡೇನಿಯಲ್ ನ್ಯೂಟನ್ ಅವರು ಹಾವೊಂದು ಕಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ನಿಧನರಾಗಿದ್ದಾರೆ. ಇಲ್ಲಿನ ಸಿಕ್ಕೇರಿ ಕ್ರಾಸ್ ನಲ್ಲಿ ಹಾವು ಹಿಡಿಯಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ಹಾವು ಕಡಿಸಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವ...
ಬೆಳಗಾವಿ: ಹುಲಿ ಉಗುರು ಹಾಗೂ ಆನೆಯ ದಂತದಿಂದ ಮಾಡಲಾಗಿದ್ದ ಕಡಗಳನ್ನು ಹೊಂದಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಸಂಚಾರಿ ದಳ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಶಹಾಪುರದ ಕಾಕೇರಿ ಚೌಕ್ ನಿವಾಸಿ ಶ್ರೀರಾಮ ಅರ್ಜುನಸಾ ಬಾಕಳೆ (46) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ ಆನೆಯ ದಂತದಿಂದ ಮಾಡಲಾಗಿರುವ 2 ಕಡಗ ಹಾಗೂ 5 ಹುಲಿ ಉಗ...
ಹುಬ್ಬಳ್ಳಿ: ಡಿಸೆಂಬರ್ 22 ಹಾಗೂ 25 ರಂದು ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪ್ರತಿಯೊಬ್ಬ ನಾಗರಿಕರು ಮತಗಟ್ಟೆಗಳಿಗೆ ಬಂದು ತಮ್ಮ ಮತ ಚಲಾಯಿಸಬೇಕು ಎಂದು ಬೀದಿ ನಾಟಕ ಮತ್ತು ಜನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಜನಜಾಗೃತಿ ಮೂಡಿಸಲಾಯಿತು. ಕೊರೊನಾ ಮತ್ತು ಮತದಾನದ ಜಾಗೃತಿಗಾಗಿ ವಾರ್ತಾ ಮತ್ತು ಸಾರ್ವಜನ...
ಬೆಂಗಳೂರು: ರಾಜ್ಯ ವಿಧಾನಮಂಡಲದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಸದಸ್ಯರು ಪರಸ್ಪರ ಕೈ ಮಿಲಾಯಿಸಿಕೊಂಡ ಘಟನೆ ನಡೆದಿದ್ದು, ವಿಧಾನ ಪರಿಷತ್ ಗೊಂದಲದ ಗೂಡಾಗಿ ಪರಿವರ್ತನೆಯಾಗಿತ್ತು. ವಿಧಾನ ಪರಿಷತ್ ಸಭಾಪತಿ ವಿರುದ್ಧ ಹಕ್ಕು ಚ್ಯುತಿಯ ವೇಳೆ, ನಡಾವಳಿ ಮೀರಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಕಿತ್ತಾಟ ನಡೆಸಿದ್ದಾರೆ.ಸಭಾಪತಿ ಸ್ಥಾನದಲ...
ಹಾಸನ: ಮೀಸಲಾತಿ ನಿಯಮದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸಿಗಬೇಕಾದ ಸವಲತ್ತುಗಳನ್ನು ಜಾರಿಗೊಳಿಸದಿದ್ದರೆ, ಉಗ್ರ ಹೋರಾಟ ಮಾಡುವುದಾಗಿ ದ್ರಾವಿಡ ಭೀಮ್ ಆರ್ಮಿ ಸಂಘಟನೆಯ ರಾಜ್ಯಾಧ್ಯಕ್ಷ ಸಂಪತ್ ಸುಬ್ಬಯ್ಯ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ದೇ...
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಈ ಮಸೂದೆ ಮಂಡನೆ ಮಾಡಿದೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ. 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿತ್ತು. ಅಂದು ಕೂಡ ಜೆಡಿಎಸ್ ವಿರೋಧ ವ್ಯಕ್ತಪಡಿಸಿತ್ತು. ಈಗಲ...
ಬಂಟ್ವಾಳ: ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿಯಾಗಿ ಆರೆಸ್ಸೆಸ್ ಮುಖಂಡರೋರ್ವರು ಮೃತಪಟ್ಟ ಘಟನೆ ಮಂಗಳವಾರ ನಸುಕಿನ ಜಾವ ಪುತ್ತೂರು ಸಂಚಾರಿ ಠಾಣಾ ವ್ಯಾಪ್ತಿಯ ಕಬಕ ಸಮೀಪದ ಪೋಳ್ಯದಲ್ಲಿ ನಡೆದಿದೆ. ಬಿ.ಸಿ.ರೋಡಿನ ಅಗ್ರಬೈಲ್ ನಿವಾಸಿ, ಆರೆಸ್ಸೆಸ್ ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖ ವೆಂಕಟರಮಣ ಹೊಳ್ಳ (60) ಮೃತಪಟ್ಟವರಾಗಿದ್ದಾರೆ. ಸೋಮವಾರ ...
ಬೆಂಗಳೂರು: ನಟಿ ಸಂಜನಾ ಅವರು ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಇದೀಗ ಮತ್ತೆ ಸುದ್ದಿಯಾಗುತ್ತಿದ್ದು, ಸಂಜನಾ ಅವರನ್ನು ಬಲವಂತವಾಗಿ ಧರ್ಮಾಂತರ ಮಾಡಲಾಗಿದೆ ಎಂಬ ದೂರೊಂದು ದಾಖಲಾಗಿದೆ. ವಕೀಲ ಅಮೃತೇಶ್ ಎಂಬವರು ಈ ದೂರನ್ನು ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ. ಡ್ರಗ್ಸ್ ಪ್ರಕರಣದ ಹಿನ್ನೆಲೆಯಲ್ಲಿ ಜೈಲು ಸೇರಿದ್...
ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದು, ಈ ಬಗ್ಗೆ ತನಗೆ ಮಾಹಿತಿ ಬಂದಿದೆ ಎಂದು ಹೇಳಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಮೂಲಕ ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್ ಬಗ್ಗೆ ಮಾಹಿತಿ ಗೊತ್ತ...