ಮಣಿಪುರ ಹಿಂಸಾಚಾರ, ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಮಣಿಪುರ ಹಿಂಸಾಚಾರ ಖಂಡಿಸಿ ದೆಹಲಿಯಲ್ಲಿ, ಜಂತರ್ ಮಂತರ್ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಕ್ಷದ ಉನ್ನತ ನಾಯಕರು ಭಾಗವಹಿಸಲಿದ್ದಾರೆ. ಮಣಿಪುರ ವಿಷಯದ ಕುರ...
ಮಹಿಳೆಯರ ಸುರಕ್ಷತೆಯ ಬಗ್ಗೆ ತಮ್ಮದೇ ಪಕ್ಷದ ಸರ್ಕಾರವನ್ನು ಟೀಕಿಸಿದ್ದ ರಾಜಸ್ಥಾನದ ಮಾಜಿ ಸಚಿವ ರಾಜೇಂದ್ರ ಸಿಂಗ್ ಗೂಢಾ ಅವರನ್ನು ರಾಜ್ಯ ವಿಧಾನಸಭೆ ಪ್ರವೇಶಿಸದಂತೆ ಕಾಂಗ್ರೆಸ್ ನಾಯಕರು ತಡೆದ ಘಟನೆ ನಡೆದಿದೆ. ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಗಂಭೀರ ಆರೋಪ ಮಾಡಿದ ಅವರು, ಕಾಂಗ್ರೆಸ್ ನಾಯಕರು ನನ್ನನ್ನು ಒದ್ದು, ಸಭೆಯಿಂದ ಹೊರಗೆ ಎಳ...
ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಗೆ ಪೊಲೀಸ್ ಪೇದೆಯೋರ್ವ ಶೂನಿಂದ ಥಳಿಸಿದ ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸ್ ಪೇದೆ ವ್ಯಕ್ತಿಗೆ ಶೂನಿಂದ ಕ್ರೂರವಾಗಿ ಥಳಿಸಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಪೊಲೀಸ್ ಪೇದೆಯನ್ನು ಅಮಾನತು ಮಾಡಲಾಗಿದೆ. ಘಟನೆಯ ವಿವರ: ದಿನೇಶ್ ಅತ್...
ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂಕೋರ್ಟ್ ಇಂದು ತಾತ್ಕಾಲಿಕ ತಡೆ ನೀಡಿದೆ. ಜುಲೈ 26ರವರೆಗೆ ಸಮೀಕ್ಷೆ ನಡೆಸದಂತೆ ಭಾರತೀಯ ಪುರಾತತ್ವ ಇಲಾಖೆಗೆ ಸೂಚನೆ ನೀಡಲಾಗಿದೆ. ಅಲಹಾಬಾದ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಮಸೀದಿ ಕಮಿಟಿಗೆ ಸೂಚನೆ ನೀಡಲಾಗಿದೆ. ಯಾವುದೇ ಉತ್ಖನನವಿಲ್ಲದೆ ಜ್ಞಾನವಾಪಿ ಮಸೀದಿಯ ಸಮೀಕ್ಷ...
ರೇಡಿಯೊ ಸಂವಹನದ ವ್ಯಾಪ್ತಿಯನ್ನು ಇನ್ನಷ್ಟು ಹೆಚ್ಚಿಸಲು ಸರ್ಕಾರವು 284 ನಗರಗಳಲ್ಲಿರುವ 808 ಎಫ್ಎಂ ರೇಡಿಯೊ ಕೇಂದ್ರಗಳ ಇ-ಹರಾಜನ್ನು ಶೀಘ್ರದಲ್ಲೇ ನಡೆಸಲಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಹೇಳಿಕೆ ನೀಡಿದ್ದಾರೆ. ರೇಡಿಯೊ ಕೇಂದ್ರಗಳನ್ನು ನಿರ್ವಹಿಸಲು ಪರವಾನಗಿ ಪಡೆಯುವ ಪ್ರಕ್ರಿಯೆಗಳನ್ನು ಸರ್ಕಾರವು ಸರಾಗಗೊಳಿ...
40 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕ ಶಿವಂ ಕುಮಾರ್ನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ಬಿಹಾರ ರಾಜ್ಯದ ನಳಂದಾ ಜಿಲ್ಲೆಯಲ್ಲಿ ನಡೆದಿದೆ. ಬೋರ್ವೆಲ್ನಿಂದ ಹೊರತೆಗೆಯುತ್ತಿದ್ದಂತೆ ವೈದ್ಯರ ತಂಡ ಶಿವಂನನ್ನು ತಪಾಸಣೆ ನಡೆಸಿ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದಿದ...
ಇದ್ದಕ್ಕಿದ್ದಂತೆ ಹಿಂದೋನ್ ನದಿ ನೀರಿನ ಹರಿವು ಹೆಚ್ಚಾದ ಕಾರಣ ಗೌತಮ್ ಬುದ್ಧ ನಗರ ಆಡಳಿತವು ತಗ್ಗು ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ ನೀಡಿದೆ. ಎಚ್ಚರಿಕೆ ನೀಡಿದ ನಂತರ ಐದು ಗ್ರಾಮಗಳ ಸುಮಾರು 200 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶ ಹಾಗೂ ದೆಹಲಿಯ ಗಡಿಯಲ್ಲಿರುವ ಜಿಲ್ಲೆಯಲ್ಲಿ ನದಿಯು 2...
ಉತ್ತರಾಖಂಡ್ನ ಪಿಥೋರಗಢದಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.2ರಷ್ಟು ಕಂಪನದ ತೀವ್ರತೆ ದಾಖಲು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ ಸಂಜೆ 6.34 ರ ಸುಮಾರಿಗೆ ಭೂಕಂಪನದ ಅನುಭವ ಆಗಿದೆ. ತಕ್ಷಣ ಜನರು ಮನೆಯಿಂದ ...
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ತಮ್ಮ ರಾಜಕೀಯ ಜೀವನದಲ್ಲಿ ಒಂದು ಮೈಲಿಗಲ್ಲನ್ನು ಸಾಧಿಸಿದ್ದಾರೆ. ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸು ಅವರ ದಾಖಲೆಯನ್ನು ಇವರು ಮುರಿದಿದ್ದಾರೆ. ಐದು ಬಾರಿ ಒಡಿಶಾದ ಮುಖ್ಯಮಂತ್ರಿಯಾಗಿದ್ದ ನವೀನ್ ಪಟ್ನಾಯಕ್ ಅವರು ಮಾರ್ಚ್ 5, 2000 ರಂದು ಅಧಿಕಾರ ವಹಿಸಿಕೊಂಡರು. ಕಳೆದ 23 ವರ್...
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿಯವ್ರು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. 'ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರು ಕರ್ನಾಟಕ, ರಾಜಸ್ಥಾನ ಮತ್ತು ಇತರ ಸ್ಥಳಗಳಿಗೆ ಚುನಾವಣೆಗಾಗಿ ಭೇಟಿ ನೀಡುತ್ತಿರುವುದನ...