ಮುಂಬೈ: ಮಾತುಬಾರದ 13 ವರ್ಷದ ಬಾಲಕನನ್ನು ಕೊಲೆಗೈದು ಗೋಣಿ ಚೀಲದೊಳಗೆ ತುಂಬಿ ಎಸೆದಿರುವ ಘಟನೆ ಪುಣೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬಾಲಕನಿಗೆ ಮಾತು ಬರುತ್ತಿರಲಿಲ್ಲ. ಬಾಲಕನನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ಎಸೆದಿದ್ದು, ಕೊತ್ರುದ್ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಇದೊಂದು ಕೊಲೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದು...
ನವದೆಹಲಿ: 1990ರಲ್ಲಿ ನಡೆದ ಕಾಶ್ಮೀರ ಪಂಡಿತರ ಹತ್ಯಾಕಾಂಡದ ಕುರಿತು ಮರು ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕಾಶ್ಮೀರ ಪಂಡಿತರ ಸಂಘಟನೆ 'ರೂಟ್ ಇನ್ ಕಾಶ್ಮೀರ್' ಸುಪ್ರೀಂ ಕೋರ್ಟ್ಗೆ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿದೆ. ಕೇವಲ ಊಹೆಯ ಆಧಾರದಲ್ಲಿ ಆರಂಭಿಕ ಹಂತದಲ್ಲಿ ರಿಟ್ ಅರ್ಜಿಯನ್ನು ...
ಸಮುದ್ರ ಗಡಿ ಉಲ್ಲಂಘಿಸಿದ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆಯು 16 ತಮಿಳುನಾಡು ಮೀನುಗಾರರನ್ನು ಬಂಧಿಸಿ, ಎರಡು ದೋಣಿಗಳನ್ನು ವಶಪಡಿಸಿಕೊಂಡಿದೆ. ಎರಡು ಪ್ರತ್ಯೇಕ ಘಟನೆಗಳಲ್ಲಿ 16 ಮೀನುಗಾರರನ್ನು ಬಂಧಿಸಲಾಗಿದೆ. ಈ ಪೈಕಿ 12 ಕಾರ್ಮಿಕರನ್ನು ಕಚ್ಚಿತೀವು ಬಳಿ ಮತ್ತು ಉಳಿದವರನ್ನು ಮನ್ನಾರ್ ಕೊಲ್ಲಿಯಲ್ಲಿ ಸೆರೆಹಿಡಿಯಲಾಗಿದೆ. ಕಳೆದ ಒಂದು ತ...
ರಾಜಸ್ಥಾನ: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಟೀಕಿಸಿದಕ್ಕಾಗಿ ದಲಿತ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಲ್ಲದೇ ದೇವಸ್ಥಾನದ ಪ್ರಾಂಗಣದಲ್ಲಿ ಮೂಗಿನಿಂದ ಬರೆದು ಕ್ಷಮೆ ಕೇಳಿಸಿದ ವಿಲಕ್ಷಣ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಅಲ್ವಾರ್ ನಲ್ಲಿ ಈ ಘಟನೆ ನಡೆದಿದ್ದು, ‘ದಿ ಕಾಶ್ಮೀರ್ ಫೈಲ್ಸ್’ ಸಂಬಂಧಿಸಿದಂತೆ ರಾಜೇಶ್ ಎಂಬ ದಲ...
ನವದೆಹಲಿ: 2020ರಲ್ಲಿ ನಡೆದಿದ್ದ ದೆಹಲಿ ಗಲಭೆಗೆ ಪ್ರಕರಣದ ಆರೋಪಿಯಾಗಿರುವ ಜೈಲಿನಲ್ಲಿರುವ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ಗೆ ದೆಹಲಿ ನ್ಯಾಯಾಲಯವು ಜಾಮೀನು ನಿರಾಕರಿಸಿದೆ. ಹೆಚ್ಚುವರಿ ಸೆಷನ್ಸ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಖಾಲಿದ್ ಮತ್ತು ಪ್ರಾಸಿಕ್ಯೂಷನ್ ಪರ ವಕೀಲರ ವಾದವನ್ನು ಆಲಿಸಿದ ನಂತರ ಮಾ.3ರಂದು ಆದೇಶವನ್ನು ...
ಮುಂಬೈ: ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅಭಿನಯದ ‘ಗಲ್ಲಿ ಬಾಯ್’ ಚಿತ್ರದ ರಾಪರ್ ಎಂಸಿ ಟಾಡ್ ಫೋಡ್ ಅಕಾ ಧರ್ಮೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜೋಯಾ ಅಖ್ತರ್ ನಿರ್ದೇಶನದ ‘ಗಲ್ಲಿ ಬಾಯ್’ ಸಿನಿಮಾದ ಹಾಡಿನ ಮೂಲಕ ಖ್ಯಾತರಾಗಿದ್ದ ರಾಪರ್ ಧರ್ಮೇಶ್ ಪರ್ಮಾರ್ (24) ನಾಲ್ಕು ತಿಂಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಲಡಾಖ್ನಲ್ಲಿದ್ದಾಗ...
ನವದೆಹಲಿ: ಕೋವಿಡ್-19 ರೋಗದ ಕಾರಣದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ನಿಲ್ಲಿಸಲಾಗಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪುನರಾರಂಭಿಸುವಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಲೋಕಸಭೆಯ ಚರ್ಚೆ ವೇಳೆ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ಶಾಲೆಗಳನ್ನು ಮುಚ್ಚುವುದರ ಜೊತೆಗೆ ...
ಬೆಂಗಳೂರು: ಹಿಂದೂ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಸದನದಲ್ಲಿ ಭಾರೀ ಚರ್ಚೆ ನಡೆಯಿತು. ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅವರು ಈ ವಿಚಾರವನ್ನೆತ್ತಿಕೊಂಡು ಮಾತನಾಡಿ, ಈ ಘಟನೆಗಳ ಹಿಂದೆ ಬಿಜೆಪಿಯ ಕೈವಾಡ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ...
ಉತ್ತರ ಪ್ರದೇಶ ಖುಷಿ ನಗರದಲ್ಲಿ ವಿಷಪೂರಿತ ಮಿಠಾಯಿ ತಿಂದು ಇಬ್ಬರು ಬಾಲಕಿಯರು ಮತ್ತು ಇಬ್ಬರು ಬಾಲಕರು ಸೇರಿದಂತೆ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಕ್ಕಳ ಮನೆಯ ಮುಂದೆ ಯಾರೋ ಮಿಠಾಯಿಗಳನ್ನು ಎಸೆದು ಹೋಗಿದ್ದು, ಮಕ್ಕಳು ಇದನ್ನು ತಿಂದು ದುರಂತ ಅಂತ್ಯ ಕಂಡಿದ್ದಾರೆ. ಮೃತರ ಪೈಕಿ ಮೂವರು ಮಕ್ಕಳು ಒಂದೇ ಕುಟುಂಬದವರಾಗಿದ್...
ನವದೆಹಲಿ: ಕೋವಿಡ್-19 ಲಸಿಕೆಗಳನ್ನು ಕಡ್ಡಾಯಗೊಳಿಸಿಲ್ಲ. ಆದರೆ ಶೇ.100ರಷ್ಟು ಲಸಿಕೆ ನೀಡಬೇಕೆಂದು ಹೇಳಲಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಶೇ.100ರಷ್ಟು ಜನರು ಕೋವಿಡ್ ಲಸಿಕೆಯನ್ನು ಪಡೆಯಲೇಬೇಕು ಎಂದು ಕೇಂದ್ರ ಸರ್ಕಾರವು ಆದೇಶ ನೀಡಿದೆ ಎಂದು ತಮಿಳುನಾಡು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂ...