ಬೆಳ್ತಂಗಡಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿ ಇಲ್ಲಿನ ನಿವಾಸಿ ಸುಂದರ (40) ಎಂಬವರಾಗಿದ್ದಾರೆ. ಇವರು ವಿಪರೀತ ಮದ್ಯದ ಚಟ ಹೊಂದಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಇವರಿಗಾಗಿ ಮನೆಯವರು ಎಲ್ಲೆಡೆ ...
ಕೊಟ್ಟಿಗೆಹಾರ: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಲೆನಾಡಿಗೆ ಕರಾವಳಿಯ ಹುಲಿವೇಷದ ತಂಡ ಆಗಮಿಸಿದ್ದು, ಮನೆ ಮನೆಗೆ ತೆರಳಿ ನೃತ್ಯ ಮಾಡುತ್ತಿರುವುದು ಕಂಡು ಬರುತ್ತಿದೆ. ಹತ್ತು ಹದಿನೈದು ದಿನಗಳ ಹಿಂದಿನಿಂದಲೇ ಪಟ್ಟಣದ ಸುತ್ತಮುತ್ತ ದೀಪಾವಳಿ ಸಂಭ್ರಮ ಇಮ್ಮಡಿಗೊಳಸಲು ಪ್ರತಿ ವರ್ಷದಂತೆ ದಕ್ಷಿಣ ಕನ್ನಡ ಜ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಗ್ರಾಮದಲ್ಲಿ ಇಬ್ಬರು ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ ತಿಳಿಸಿದ್ದಾರೆ. ಬಂಧಿತರನ್ನು ಪುನಿತ್, ರಾಜು, ಪ್ರಸಾದ್, ಕಿ...
ಮಲ್ಪೆ: ಕರಾವಳಿಯನ್ನು ದೈವಗಳ ನಾಡು ಎನ್ನುತ್ತಾರೆ. ಈ ದೈವಗಳ ರಾಜ ದಲಿತರ ಆರಾದ್ಯದೈವ ಬಬ್ಬುಸ್ವಾಮಿ ಎನ್ನುತ್ತಾರೆ. ಆದರೆ ಈ ಬಬ್ಬುಸ್ವಾಮಿ ವ್ಯವಸ್ಥೆಯ ವಿರುದ್ಧ ಬಂಡೆದ್ದ ಜನಪರ ಹೋರಾಟಗಾರನೂ ಹೌದು ಎಂದು ದಲಿತ ಚಿಂತಕ ಜಯನ್ ಮಲ್ಪೆ ಹೇಳಿದ್ದಾರೆ. ಅವರು ಭಾನುವಾರ ಬಡನಿಡಿಯೂರು ಬಬ್ಬುಸ್ವಾಮಿ ವಠಾರದಲ್ಲಿ ಆಯೋಜಿಸಿದ ಕದಿಕೆ ಅಂಬೇಡ್ಕರ್ ಯು...
ಕಲಬುರಗಿ: ಬಿಜೆಪಿ ಜನಸಂಕಲ್ಪ ಸಮಾವೇಶಗೆ ಮತ್ತೆ ವಿಘ್ನ ಎದುರಾಗಿದ್ದು, ವಿಧಾನ ಸಭೆ ಡಿಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ನಡೆಯಬೇಕಿದ್ದ ಜನಸಂಕಲ್ಪ ಸಮಾವೇಶ ರದ್ದಾಗಿದೆ. ಆಳಂದ ಹಾಗೂ ಚಿತ್ತಾಪುರ ಪಟ್ಟಣಗಳಲ್ಲಿ ಇಂದು ಜನಸಂಕಲ್ಪ ಯಾತ್ರೆ ನಡೆಯಬೇಕಿತ್ತು. ಈಗಾಗಲೇ ವೇದಿಕೆ ಸೇರಿದಂತೆ ಎಲ್ಲ ಸಿದ್ಧತೆ...
ಅಯೋಧ್ಯೆ: ದೀಪಾವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ದೀಪೋತ್ಸವ ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಪ್ರತೀ ವರ್ಷದಂತೆ ಪ್ರಧಾನಿ ಮೋದಿ ನಾಳೆ ದೇಶದ ಸೈನಿಕರ ಜ...
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಮಾನಸಿಕ ಖಿನ್ನತೆ ಹೊಂದಿರುವ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಿರುವ ಘಟನೆ ಸಂಭವಿಸಿದ್ದು ಯುವಕನ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಆರೋಪಿ ದಯಾನಂದ ಎಂಬಾತ ತಲೆಮರೆಸಿಕೊಂಡಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬಾಲಕಿಯನ್ನು ಇನ್ ಸ್ಟ್ರಾಗ್...
ದೈವಾರಾಧನೆ ವಿಚಾರವಾಗಿ ನಟ ಚೇತನ್ ಅವರು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂಬ ವಾದ ಇದೀಗ ಬಲವಾಗಿ ಕೇಳಿ ಬರುತ್ತಿದ್ದು, ನಟ ಚೇತನ್ ದೈವರಾಧನೆಯ ವಿರುದ್ಧವಾಗಿ ಯಾವುದೇ ಹೇಳಿಕೆ ನೀಡಿಲ್ಲವಾದರೂ, ಅವರು ದೈವಾರಾಧನೆ ವಿರುದ್ಧ ಮಾತನಾಡಿದ್ದಾರೆ ಎಂಬಂತೆ ಬಿಂಬಿಸುತ್ತಿರುವ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಚೇತನ್ ...
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸವದತ್ತಿ ಕ್ಷೇತ್ರದ ಶಾಸಕ, ಕರ್ನಾಟಕ ವಿಧಾನ ಸಭೆಯ ಉಪ ಸ್ಪೀಕರ್ ಆನಂದ ಮಾಮನಿ ಅವರು ಬೆಂಗಳೂರಿನ ಹಳೆಯ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾತ್ರಿ 12 ಗಂಟೆ 2 ನಿಮಿಷಕ್ಕೆ ಕೊನೆಯುಸಿರೆಳೆದಿದ್ದಾರೆ. 56 ವರ್ಷದ ಆನಂದ್ ಮಾಮನಿ ಅವರು , ಲಿವರ್ ಕ್ಯಾನ್ಸರ್ ನಿಂದ ಕಳೆದ ಹಲವು ದಿನಗಳಿಂದ ಬಳ...
ದಕ್ಷಿಣ ಕನ್ನಡ ಜಿಲ್ಲೆಯ ಕಣಿಯೂರಿನಲ್ಲಿ ಇಬ್ಬರು ಯುವಕರ ಕೊಲೆ ಯತ್ನ ಪ್ರಕರಣ ನಡೆದಿದೆ. ಇದು ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಹೇಳಿದ್ದಾರೆ. ಅವರು ಇಂದು ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಇಬ್ಬರು ವ್ಯಕ್ತಿಗಳು ವ್ಯಾಪಾರಿ ...