ಮಂಗಳೂರು: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನಿಂದ ಆಗಸ್ಟ್ 19ರಿಂದ 21ರವರೆಗೆ ಬೆಂಗಳೂರಿನಲ್ಲಿ ನಡೆದಿದ್ದ ರಾಜ್ಯ ಮಟ್ಟದ ಮುಕ್ತ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ 14-17 ವರ್ಷದ ಬಾಲಕರ ಇನ್ ಲೆನ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಹೈ-ಫ್ಲೈಯರ್ಸ್(ಆರ್) ಸ್ಕೇಟಿಂಗ್ ಕ್ಲಬ್ ನ ಸ್ಕೇಟರ್ ಮುಹಮ್ಮದ್ ಶಾಮೀ...
ಮಂಗಳೂರು: ಕಮೀಷನರೇಟ್ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಬಂಧಿಸಲ್ಪಟ್ಟು ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಕಸಬಾ ಬೆಂಗರೆಯ ಅಬ್ದುಲ್ ಕಬೀರ್ ಯಾನೆ ಪಾರಿವಾಳ ಕಬೀರ್ ಎಂಬಾತನನ್ನು ಬಂಧಿಸಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣ...
ಸರಕಾರಿ ಸಂಸ್ಥೆಯಾದ ಕೆಎಂಎಫ್ ಡೈರಿನಲ್ಲಿ ಉದ್ಯೋಗ ದೊರಕಿಸಿ ಕೊಡುವುದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಯಿಂದ 1.84 ಕೋಟಿಗಿಂತ ಅಧಿಕ ಹಣ ಪಡೆದು ವಂಚಿಸಿದ ಆರೋಪದಡಿಯಲ್ಲಿ ಮಹಿಳೆ ಸಹಿತ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಪುತ್ತೂರು ತಾಲೂಕಿನ ಬಳ್ನಾಡು ಗ್ರಾಮದ ರಮೇಶ್ ಪೂಜಾರಿ ಬಿ.(41), ಮಂಗಳೂರಿನ ಅಳಪೆ ಪಡೀಲ್ ನ ಚಂದ್ರ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಲಾಯಿಲ ಗ್ರಾಮದ ಲಾಯಿಲಬೈಲು ಎಂಬಲ್ಲಿ ಸಾಕು ನಾಯಿಗಳನ್ನು ಚಿರತೆ ದಾಳಿ ನಡೆಸಿ ಕೊಂಡೊಯ್ದಿರುವ ಘಟನೆ ನಡೆದಿದೆ. ಕಳೆದ ಎರಡು ವಾರಗಳಿಂದ ಚಿರತೆ ಕಾಟ ಹೆಚ್ಚಿದೆ ಎಂದು ನಾಗರಿಕರು ಮಾಹಿತಿ ನೀಡಿದ್ದಾರೆ. ವಾರಗಳ ಹಿಂದೆ ಗಾಣದಕೊಟ್ಯ ಎಂಬಲ್ಲಿಂದ ಕಟ್ಟಿ ಹಾಕಿದ ನಾಯಿಯೊಂದನ್ನು , ದಡ್ಡು ಲಿಂಬ...
“ಇಂಗ್ಲೆಂಡ್ ನ ಬಾವುಟ ಕಿತ್ತೆಸೆದು ಭಾರತದ ಬಾವುಟ ಹಾರಿಸಿದ್ದ ಕೆದಂಬಾಡಿ ರಾಮಯ್ಯ ಗೌಡ” ಬೆಳ್ತಂಗಡಿ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಇಂಗ್ಲೆಂಡ್ ನ ಬಾವುಟವನ್ನು ಕಿತ್ತೆಸೆದು ನಮ್ಮ ನೆಲದ ಬಾವುಟವನ್ನು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಹಾರಿಸಿ, 13 ದಿವಸಗಳ ಕಾಲ ಮಂಗಳೂರನ್ನು ಬ್ರಿಟಿಷರ ಆಳ್ವಿಕೆಯಿಂದ ಮುಕ್ತಿಗೊಳಿಸಿದ ಸಂಘಟನಕಾರ ಸ್ವಾತ...
ಉಡುಪಿ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಸಂಕಷ್ಟ ಆರಂಭವಾಗಿದ್ದು, ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದರೂ ಈಶ್ವರಪ್ಪ ಅವರಿಗೆ ಸಂಕಷ್ಟ ತಪ್ಪಿಲ್ಲ. ಸಂತೋಷ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆದರೆ ಸಂತೋಷ್ ಸಹೋದರ ಜನಪ...
ಮುಂಬೈ: ಮೊಸರು ಕುಡಿಕೆ ಸ್ಪರ್ಧೆ ವೇಳೆ ಮಾನವ ಪಿರಮಿಡ್ ನಿಂದ ಕೆಳಗೆ ಬಿದ್ದು 24 ವರ್ಷ ವಯಸ್ಸಿನ ಯುವಕ ದಾರುಣವಾಗಿ ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ. ಮುಂಬೈಯ ವಿಲೆ ಪಾರ್ಲೆಯ ಭಾಮನ್ ವಾಡಿ ಪ್ರದೇಶದಲ್ಲಿ ಈ ಘಟನೆ ಶುಕ್ರವಾರ ನಡೆದಿತ್ತು. ನಡೆದ ಶ್ರೀ...
ಚಿತ್ರದುರ್ಗ: ಕೊಡಗಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೆ ಹೆಣ ಬೀಳುತ್ತದೆ. ಅದಕ್ಕೆ ಅವಕಾಶ ಕೊಡಲ್ಲ ಎಂಬಂತಹ ಹೇಳಿಕೆ ನೀಡಿದ್ದ ರಾಜ್ಯ ಸಭಾ ಸದಸ್ಯ ಜಗ್ಗೇಶ್ ವಿರುದ್ಧ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದು, ‘ಜಗ್ಗೇಶ್ ಒಬ್ಬ ಅಯೋಗ್ಯ’ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜಗ್ಗೇಶ್ ಹೆಣ ಬೀಳುತ್...
ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಮತ್ತೋರ್ವ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬೆಂಗಳೂರಿನ ರಸ್ತೆಯ ಗುಂಡಿಗೆ 44 ವರ್ಷದ ಯುವಕ ಬಲಿಯಾಗಿದ್ದಾನೆ. ಸುಪ್ರೀತ್ ಎಂಬವರು ರಸ್ತೆ ಗುಂಡಿಗೆ ಬಲಿಯಾದ ಬೈಕ್ ಸವಾರನಾಗಿದ್ದು, ಯಶವಂತಪುರ ಕ್ಷೇತ್ರದ ಹೇರೋಹಳ್ಳಿ ಅಂಧ್ರ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೈಕ್...
ಬೆಂಗಳೂರು: ಕೊಡಗು ಚಲೋ ಸದ್ಯಕ್ಕೆ ರದ್ದು ಪಡಿಸಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದು, ಕೊಡಗು ಚಲೋ ನನ್ನ ನಿರ್ಧಾರವಲ್ಲ ಪಕ್ಷದ ನಿರ್ಧಾರ ಎಂದು ಸ್ಪಷ್ಟಪಡಿಸಿದ್ದಾರೆ. ವಿಪಕ್ಷ ನಾಯಕನಾಗಿ ನಾನು ಪ್ರತಿಭಟನೆ ಮಾಡುವುದಿಲ್ಲ, ಮಾಜಿ ಸಿಎಂ ಆಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುತ್ತೇನೆ. ಯಾವುದೇ ಕಾರಣಕ್ಕೂ ಪಕ್ಷ ಮೀರಿ ಕ...