ತಿರುವನಂತಪುರಂ: ಕೋಳಿಯ ಅಂಗಾಂಗಗಳನ್ನು ಜೀವಂತವಾಗಿಯೇ ಮುರಿದು ಭೀಕರವಾಗಿ ಕೊಂದ ಕೋಳಿ ಅಂಗಡಿ ಮಾಲಿಕನನ್ನು ಕೊಲ್ಲಂಕೋಡು ಪೊಲೀಸರು ತಮಿಳುನಾಡಿನ ಕೊಲ್ಲಂಗೋಡಿನ ಕನ್ನನಕಂನಲ್ಲಿ ಬಂಧಿಸಿದ್ದಾರೆ. 36 ವರ್ಷ ವಯಸ್ಸಿನ ಮನು ಬಂಧಿತ ಆರೋಪಿಯಾಗಿದ್ದು, ಈತ ಕೋಳಿಯನ್ನು ಜೀವಂತವಾಗಿ ಅಂಗಾಂಗಗಳನ್ನು ಮುರಿದು ಭೀಕರವಾಗಿ ಹತ್ಯೆ ಮಾಡುತ್ತಿರುವ ದೃಶ...
ಹುಬ್ಬಳ್ಳಿ: ಲಾರಿಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿಗಳ ಚಾಲಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾರೋಬೆಳವಡಿ ಗ್ರಾಮ ಬಳಿಯ ಧಾರವಾಡ-ಸವದತ್ತಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ ಸವದತ್ತಿ ಕಡೆಗೆ ಹೋಗುತ್ತಿದ್ದ ಲಾರಿಗೆ ವೇಗವಾಗಿ ಬಂದ ಮತ್ತೊಂದು ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ...
ಮಹಾರಾಷ್ಟ್ರ: ವರನೊಬ್ಬ ತನ್ನ ಸ್ನೇಹಿತರ ಜೊತೆ ಕುಡಿದು ಚಿತ್ತಾಗಿ ಮುಹೂರ್ತಕ್ಕೆ ಸರಿಯಾಗಿ ಮಂಟಪಕ್ಕೆ ತಲುಪದ ಕಾರಣ ವಧುವೊಬ್ಬಳು ತನ್ನ ಸಂಬಂಧಿಯನ್ನು ವರಿಸಿದ ಘಟನೆ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ. ಏಪ್ರಿಲ್ 22ರಂದು ವಿವಾಹ ನಿಶ್ಚಯವಾಗಿತ್ತು. ಸಂಜೆ ನಾಲ್ಕು ಗಂಟೆಗೆ ವಿವಾಹ ಮುಹೂರ್ತ ಫಿಕ್ಸ್ ಆಗಿತ್ತು. ಅತ್ತ ವರ ತನ್...
ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದ ದಿವ್ಯಾ ರಾಜ್ಯ ಗೃಹ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದ್ದರು. ಇದೀಗ 18 ದಿನಗಳ ನಂತರ ಪೊಲೀಸರು ಈಕ...
ದಕ್ಷಿಣ ಕನ್ನಡ(ಮಂಗಳೂರು): ರೌಡಿಶೀಟರ್ ವೋರ್ವನನ್ನು ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ಮಂಗಳೂರಿನ ಎಮ್ಮೆಕೆರೆಯಲ್ಲಿ ನಡೆದಿದೆ. ನಗರದ ಹೊಯ್ಗೆ ಬಜಾರ್ ನಿವಾಸಿ 25 ವರ್ಷ ವಯಸ್ಸಿನ ರಾಹುಲ್ ಅಲಿಯಾಸ್ ಕಕ್ಕೆ ರಾಹುಲ್ ಹತ್ಯೆಯಾದ ಯುವಕ ಎಂದು ಗುರುತಿಸಲಾಗಿದೆ. ಈತನ ವಿರುದ್ಧವೂ ರೌಡಿಶೀಟರ್ ಸೇರಿದಂತ...
ಚಿಕ್ಕಮಗಳೂರು: ನಮಗೆ ನಮ್ಮ ಮಾತೃಭಾಷೆಯೇ ಶ್ರೇಷ್ಠವಾದದ್ದು, ಯಾವುದೇ ಕಾರಣಕ್ಕೂ ನಾವು ಕನ್ನಡಿಗರು ಇನ್ನೊಂದು ಭಾಷೆಯನ್ನು ಅತಿಕ್ರಮಿಸುವರಲ್ಲ,ಬದಲಾಗಿ ಅವರನ್ನ,ಅವರ ಭಾಷೆಯನ್ನ ಗೌರವಿಸುತ್ತೇವೆ ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಬಾಲಿವುಡ್ ನಟ ಅಜಯ್ ದೇವಗನ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ...
ವಿಜಯಪುರ: ಭ್ರಷ್ಟರು ಒಂದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಎಲ್ಲಾ ಕಡೆಗಳಲ್ಲೂ ಇದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ನೀಡಿದ್ದು, ಬಹಳ ನಿರ್ಭಯವಾಗಿ ಹಾಗೂ ನಿರ್ದಾಕ್ಷಿಣ್ಯವಾಗಿ ಇದನ್ನು ನಾನು ಹೇಳುತ್ತೇನೆ ಎಂದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಈ ಸಂಬಂಧ ಮಾತನಾಡಿದ ಅವರು, ಭ್ರಷ್ಟರನ್ನು ಯಾವುದೇ ಒಂದು ಪಕ್ಷಕ...
ಯಾದಗಿರಿ: ಕೆಲಸ ಮುಗಿಸಿ ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಮೇಳೆ ಹಾಡಹಗಲೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ತಾಲೂಕಿನ ಗ್ರಾಮವೊಂದರ ಯುವತಿ ಮನೆ ಕೆಲಸ ಮಾಡುತ್ತಿದ್ದು, ಏಪ್ರಿಲ್ 26ರಂದು ಕೆಲಸ ಮುಗಿಸಿ ಆಟೋದಲ್ಲಿ ಮನ...
ದೆಹಲಿ: ಕೊವಿಡ್ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಿಎಂಗಳ ವಿಡಿಯೋ ಸಂವಾದ ನಡೆಸುತ್ತಿದ್ದ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದುರ್ವತನೆ ತೋರಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಪ್ರಧಾನಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ, ಕೇಜ್ರಿವಾಲ್ ಜಡವಾಗಿ ಕುಳಿತು ಎರಡೂ ಕೈಗಳನ್ನು ಮೇಲಕ್ಕೆತ್ತಿ ಕುರ್ಚಿಯ ಮೇಲೆ ತಲೆ...
ಬೆಂಗಳೂರು: ಯುವಕನೋರ್ವ ಯುವತಿಗೆ ಆಸಿಡ್ ಎರಚಿದ ಘಟನೆ ನಗರದ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರೀತಿಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆಸಲಾಗಿದೆ ಎನ್ನಲಾಗಿದೆ. ವರದಿಗಳ ಪ್ರಕಾರ ಫೈನಾನ್ಸ್ ಕಂಪೆನಿ ಕಚೇರಿಯೊಂದರ ಬಳಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಯುವಕ ಪ್ರೀತಿಯ ವಿಚಾರವಾಗಿ ಯುವತಿಯ ಬೆನ್ನುಬ...