ರಾಮನಗರ: ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯ ಮೃತದೇಹ ನೇಣು ಬಿಗಿದು ಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲುರು ಗ್ರಾಮದ ಬಳಿ ಇರುವ ಚಿಲುಮೆ ಮಠದ 52 ವರ್ಷದ ವಯಸ್ಸಿನ ಬಸವಲಿಂಗ ಸ್ವಾಮೀಜಿಯ ಮೃತದೇಹ ಪತ್ತೆಯಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಕುದೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ...
ಹಾವೇರಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮುಂದಿನ ದಿನಗಳಲ್ಲಿ ಕೇಂದ್ರ ಸಚಿವರಾಗಲಿದ್ದಾರೆ ಎಂದು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದು, ಸಿಎಂ ಬದಲಾವಣೆಯ ಚರ್ಚೆಯ ನಡುವೆಯೇ ಈ ಹೇಳಿಕೆ ಅನುಮಾನಗಳನ್ನು ಮತ್ತಷ್ಟು ಬಲಗೊಳಿಸಿದೆ. ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಮಾತನಾಡಿದ ಗಣಿ ಸಚಿವ ಮುರುಗೇಶ್ ನಿರಾಣಿ ಈ ಹೇಳಿಕೆ ನೀಡಿದ್...
ಮುಂಬೈ: ಈ ವರ್ಷ ಭಾರತವು 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಮುಂಬೈನ ಸಾಂತಾಕ್ರೂಜ್ ಎಲೆಕ್ಟ್ರಾನಿಕ್ಸ್ ರಫ್ತು ಸಂಸ್ಕರಣಾ ವಲಯದಲ್ಲಿ ಮೆಗಾ ಕಾಮನ್ ಫೆಸಿಲಿಟಿ ಸೆಂಟರ್ಗೆ ಶಂಕುಸ್ಥಾಪನೆ ಮಾಡಿದ ಬಳಿಕ ಅವರು ಈ ಕುರಿತು ಮಾತನಾಡಿದರು. ಹೇಳ...
ನವದೆಹಲಿ: ಪತ್ರಕರ್ತರಿಗೆ ಕೆಲಸ ಮಾಡಲು ಭಾರತ ಅಪಾಯಕಾರಿ ದೇಶ ಎಂಬ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನೀವು ಒಬ್ಬ ವ್ಯಕ್ತಿಯದ್ದೇ ಮುಖ ತೋರಿಸುತ್ತೀರಿ ಆದರೆ, ಆ ವ್ಯಕ್ತಿ ಎಂದಾದರೂ ನಿಮ್ಮ ಪರವಾಗಿ ಮಾತನಾಡಿದ್ದಾರಾ? ಎಂದು ಪತ್ರಕರ್ತರನ್ನು ಪ್ರಶ್ನಿಸಿದ್ದಾರೆ. ಭಾರತದಲ್ಲಿ ಅನೇಕ ಮಾಧ್ಯಮಗಳು ಒಬ...
ಅಮೃತಸರ: ಕಪುರ್ತಲಾ ಜಿಲ್ಲೆಯ ಗುರುದ್ವಾರದಲ್ಲಿ ಧಾರ್ಮಿಕ ಧ್ವಜವನ್ನು ತೆಗೆಯಲು ಯತ್ನಿಸಿದ ಆರೋಪದ ಮೇಲೆ ಸಿಖ್ ಭಕ್ತರು ಓರ್ವ ವ್ಯಕ್ತಿಯನ್ನು ಹಿಡಿದು ಥಳಿಸಿರುವ ಘಟನೆ ಭಾನುವರ ಬೆಳಗ್ಗೆ ವರದಿಯಾಗಿದೆ. ಈ ವ್ಯಕ್ತಿ ನಿಜಾಂಪುರದ ಗುರುದ್ವಾರದಲ್ಲಿ ಸಿಖ್ಖರ ಧಾರ್ಮಿಕ ಧ್ವಜವಾದ ನಿಶಾನ್ ಸಾಹಿಬ್ನನ್ನು ತೆಗೆದುಹಾಕಲು ಪ್ರಯತ್ನಿಸಿದ್ದಾನೆ ಎಂ...
ಕೊಲಂಬೊ: ಶ್ರೀಲಂಕಾಕ್ಕೆ ಸೇರಿದ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ 43 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು, ಆರು ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಶ್ರೀಲಂಕಾ ನೌಕಪಡೆ ಭಾನುವಾರ ತಿಳಿಸಿದೆ. ಶನಿವಾರ ರಾತ್ರಿ ಜಾಫ್ನಾದಲ್ಲಿರುವ ಡೆಲ್ಫ್ಟ್ ದ್ವೀಪದ ಆಗ್ನೇಯ ಸಮುದ್ರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ನೌಕಪಡೆ, ಶ್ರೀ...
ನವದೆಹಲಿ: ಇತರರ ನಂಬಿಕೆ ಅಥವಾ ಭಾವನೆಗಳಿಗೆ ಧಕ್ಕೆಯಾಗದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಬಳಸಬೇಕು. ಲೇಖಕರು ಮತ್ತು ಚಿಂತಕರು ಬೌದ್ಧಿಕತೆಯನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಸಮಾಜದಲ್ಲಿ ಚರ್ಚೆ, ವಿವಾದಗಳನ್ನು ಪ್ರಚೋದಿಸುವುದಿಲ್ಲ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ. ನವದೆಹಲಿಯ ಸಾಹಿತ್ಯ...
ಬರ್ಧಮಾನ್: ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಮೂವರು ರೈತರು ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ. ಜವಾದ್ ಚಂಡಮಾರುತದಿಂದ ಸುರಿದ ಅಕಾಲಿಕ ಮಳೆಯಿಂದಾಗಿ ಆಲೂಗೆಡ್ಡೆ ಮತ್ತು ಭತ್ತದ ಬೆಳೆ ನಾಶವಾದ ನಂತರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ರೈತರ ಕುಟುಂಬಗಳ...
ಮೈಸೂರು: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಅಕ್ಷಮ್ಯ ಅಪರಾಧ. ಯಾವುದೇ ಮುಖಂಡರು, ದೇಶಭಕ್ತರ ಮೂರ್ತಿಗಳನ್ನು ಧ್ವಂಸ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಗಿಯಾದ ಕ್ರಮ ತೆಗೆದುಕೊಂಡು ಇನ್ನು ಮುಂದೆ ಇಂತ...
ಮುಂಬೈ: ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು ‘ಕನ್ನಡಿಗರ ವಿಕೃತ ಮನಸ್ಥಿತಿ’ ಎಂದು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಕಿಡಿಕಾರಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸ ಬೇಕು ಎಂದು ಒತ್ತಾಯಿಸಿದ್ದಾರೆ. ಈ ಘಟನೆಯನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಹಲವು ವರ್ಷಗಳಿಂದ ಕರ್ನಾಟಕದಲ್ಲಿ ಮರಾಠಿಗರು...