ಹಾಸನ: ಮೈಮೇಲೆ ದುಬಾರಿ ಚಿನ್ನಾಭರಣಗಳನ್ನು ಹಾಕಿಕೊಂಡು ಬರುತ್ತಿದ್ದ ಗುತ್ತಿಗೆದಾರನ ಮೇಲೆ ಕಣ್ಣಿಟ್ಟಿದ್ದ ಬಿಹಾರ ಮೂಲದ ಇಬ್ಬರು ಕಾರ್ಮಿಕರು, ಗುತ್ತಿಗೆದಾರನನ್ನು ಬರ್ಬರವಾಗಿ ಹತ್ಯೆ ಮಾಡಿ ಚಿನ್ನಾಭರಣ ದೋಚಿರುವ ಘಟನೆ ಹಾಸನದ ಅರಸೀಕೆರೆ ಪಟ್ಟಣದ KSRTC ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ವಿಜಯಕುಮಾರ್ (46) ಹತ್ಯೆಗೀಡಾದ ಗುತ್ತಿಗೆದಾ...
ಬೆಂಗಳೂರು: ಕರ್ನಾಟಕದಲ್ಲಿ ಕೊವಿಡ್ ಪ್ರಕರಣಗಳ ಏರಿಕೆಯ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ವಿದ್ಯಾರ್ಥಿಗಳಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಗುಡ್ಡಕುಸಿತ ಪ್ರಕರಣದಲ್ಲಿ ಇಬ್ಬರು ಮಕ್ಕಳ ಸಹಿತ ಮೂವರು ಸಾವನ್ನಪ್ಪಿದ್ದಾರೆ. ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ಭಾರೀ ಮಳೆಯ ಹಿನ್ನೆಲೆ ಗುಡ್ಡ ಕುಸಿದು ಬಿದ್ದು, ಮನೆ ಕುಸಿದು ಬಿದ್ದಿದ್ದು, ಮನೆ ಮಾಲಿಕ ಕಾಂತಪ್ಪ ಪೂಜಾರಿ ಅವರ ಪತ್ನ...
ಮೂಡಿಗೆರೆ (ಚಿಕ್ಕಮಗಳೂರು ಜಿಲ್ಲೆ): ಚಾರ್ಮಾಡಿ ಘಾಟಿಯ 22 ಕಿ.ಮೀ. ಹಾವುಬಳುಕಿನ ರಸ್ತೆಯಲ್ಲಿ ಇತ್ತೀಚೆಗೆ ಮಂಜಿನದ್ದೇ ಆಟ. ಪ್ರತಿನಿತ್ಯವೂ ಇದು ಹೊಸ ಲೋಕವೊಂದು ಸೃಷ್ಟಿಸುತ್ತಿದೆ—ಒಮ್ಮೆ ದಟ್ಟ ಮಂಜಿನಲ್ಲಿ ರಸ್ತೆ ಕಾಣದೇ ಹೋಗುತ್ತದೆ, ಇನ್ನೊಮ್ಮೆ ಪ್ರಕೃತಿಯ ವಿಸ್ಮಯದ ನೋಟ! ಮಂಜಿನ ಸಾಲುಗಳು ಮರಗಿಡಗಳ ಮೇಲೆ ಕುಳಿತುಕೊಂಡಿರುವಂತಾಗಿದ್ದು,...
ಬೆಂಗಳೂರು: ಸಂಚಾರಿ ಪೊಲೀಸರ ತಪಾಸಣೆ ವೇಳೆ ಅವಘಡಗಳನ್ನು ತಪ್ಪಿಸುವ ಹಿನ್ನೆಲೆ ರಾಜ್ಯದ ಎರಡನೇ ಹಂತದ ನಗರಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಂ (ಐಟಿಎಂಎಸ್) ಜಾರಿಗೆ ತರಲು ರಾಜ್ಯ ಪೊಲೀಸ್ ಇಲಾಖೆ ಮುಂದಾಗಿದೆ. ಈ ಮೂಲಕ ಸಾರ್ವಜನಿಕರೊಂದಿಗೆ ಪೊಲೀಸ್ ಸಿಬ್ಬಂದಿಯ ಅತಿರೇಕದ ವರ್ತನೆಗಳಿಗೆ ಮುಕ್ತ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆ ಇರುವ ಹಿನ್ನೆಲೆ ಮೇ 31ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ &...
ಭಾರತೀಯ ಪ್ರವಾಸಿಗರೊಬ್ಬರು ಹುಲಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ವೇಳೆ ಹುಲಿ ದಾಳಿ ನಡೆಸಿರುವ ಘಟನೆ ಥೈಲ್ಯಾಂಡ್(Thailand) ನ ಫುಕೆಟ್ ನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಫುಕೆಟ್(Phuket) ನಲ್ಲಿ ಹುಲಿಗಳನ್ನು ಸಾಕು ಪ್ರಾಣಿಗಳಂತೆ ಸಾಕುತ್ತಾರೆ. ಅಲ್ಲಿಗೆ ವಿವಿಧ ದೇಶಗಳಿಂದ ಪ್ರವಾಸಿಗರು ಬರುತ್ತಾರೆ ಮತ್ತು...
ಚಾಮರಾಜನಗರ: ಗ್ಯಾಸ್ ಡೆಲಿವರಿ ನೆಪದಲ್ಲಿ ಡೆಲಿವರಿ ಬಾಯ್ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ನಡೆದಿದೆ. ಗ್ಯಾಸ್ ಏಜೆನ್ಸಿಯ ಡೆಲಿವರಿ ಬಾಯ್ ಮಹೇಶ್ ಎಂಬಾತನ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿರುವ ಗಂಭೀರ ಆರೋಪ ಕೇಳಿ ಬಂದಿದೆ. ಸದ್ಯ ನೊಂದ ಮಹಿಳೆ ನೀಡಿರುವ ದೂರಿನಂತೆ ಎಫ್ ಐಆರ್ ದ...
ಹುಬ್ಬಳ್ಳಿ: ಮಕ್ಕಳ ಜಗಳ ನಿಲ್ಲಿಸಲು ಬಂದ ತಾಯಿಯನ್ನು ಮಗನೇ ಗಾಜಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪದ್ಮಾ ಚಲೂರಿ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ತಾಯಿಯ ಸಾವಿಗೆ ಕಾರಣವಾದ ಇಬ್ಬರು ಮಕ್ಕಳನ್ನು ಲಕ್ಷ್ಮಣ್ ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ನಗರದ ತೊರವಿಹಕ್ಕಲ್ ಬ...
ಬೆಂಗಳೂರು: ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಕಮಲ್ ಹಾಸನ್ ಮತ್ತೆ ತಮ್ಮ ಮೊಂಡುವಾದವನ್ನು ಮುಂದಿರಿಸಿದ್ದು, ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ ನಂತರ ವ್ಯಾಪಕ ವಿರೋಧ ವ್ಯಕ್ತವಾದರೂ ಕಮಲ್ ಹಾಸನ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಥಗ್ ಲೈಫ್ ಚಿತ್ರ ಪ್ರಮೋಷನ್ ವೇಳೆ ತಮಿಳಿನಿಂದ...