ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲೇ ಪೆನ್ ಡ್ರೈವ್ ಟ್ರಾನ್ಸ್ ಫರ್ ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸರಿಯಾದ ತನಿಖೆ ನಡೆಸದೇ ಇದ್ರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದ...
ಬೆಳ್ತಂಗಡಿ: ಪೊಲೀಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ನಡೆಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಮನೆಗೆ ಪೊಲೀಸ್ ಅಧಿಕಾರಿಗಳ ತಂಡ ಆಗಮಿಸಿದೆ. ...
ಮೈಸೂರು: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದ್ದು, ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಎರಡು ದಿನಗಳ ಹಿಂದೆಯೇ ಮೃತಪಟ್...
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡುವಂತೆ ಮು...
ರಾಮದುರ್ಗ: ಗೃಹಲಕ್ಷ್ಮೀ ಯೋಜನೆಯ 10 ತಿಂಗಳ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದು, ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಜನಸಾಮಾನ್ಯರಿಗೆ ಲಾಭದಾಯಕವಾಗಿದೆ. ರಾಮದುರ್ಗದ ಮನಿಹಾಳ ಗ್ರಾಮದ ಸಕ್ಕುಬಾಯಿ ಈರಣ್ಣ ಕರದಿನ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದರು. ಬಲಗಣ್ಣಿನಲ್ಲಿ ಪೊರೆ ಬಂದಿದ್ದ ಕಾ...
ಚಿಕ್ಕಮಗಳೂರು: ಕೊಟ್ಟಿಗೆಹಾರ ಸಮೀಪ ಬೆಳ್ಳಂಬೆಳಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಕಾಡಾನೆ ಓಡಾಟದಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದ ಆಜಾದ್ ನಗರ ಹಾಗೂ ತರುವೆಯಲ್ಲಿ ಒಂಟಿ ಸಲಗ ರೌಂಡ್ಸ್ ಹಾಕಿದ್ದು, ಚಾರ್ಮಾಡಿ ಘಾಟ್ ಅಥವಾ ಬೇರೆಡೆಯಿಂದ ಕಾಡಾನೆ ಆಗಮಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ...
ಅಮೆರಿಕದ ಜಾರ್ಜಿಯಾದಲ್ಲಿ ನಡೆದ ಕಾರು ಅಪಘಾತದಲ್ಲಿ ಮೂವರು ಭಾರತೀಯ ಮೂಲದ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. 18 ವರ್ಷ ವಯಸ್ಸಿನ ಐವರು ವಿದ್ಯಾರ್ಥಿಗಳು ಆಲ್ಫಾರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು. ಜಾರ್ಜಿಯಾದ ಆಲ್ಫಾರೆಟ್ಟಾದಲ್ಲಿ ಸಂಭವಿಸಿದ ಭೀಕರ ಅಪಘಾತ...
ಲಂಡನ್ ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ತೀವ್ರ ಪ್ರಕ್ಷುಬ್ಧತೆಯಿಂದಾಗಿ ಉಂಟಾದ ಅಪಘಾತದಿಂದ ಓರ್ವ ಪ್ರಯಾಣಿಕ ಸಾವನ್ನಪ್ಪಿದ ಮತ್ತು ಸುಮಾರು 70 ಜನರು ಗಾಯಗೊಂಡ ನಂತರ ಸಿಂಗಾಪುರ್ ಏರ್ ಲೈನ್ಸ್ ಸಿಇಒ ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ. ಈ ವೀಡಿಯೊ ಸಂದೇಶದಲ್ಲಿ ಗೋಹ್ ಚೂನ್ ಫೋಂಗ್ ಅವರು ಮಂಗಳವಾರ ಎಸ್ಕ್ಯೂ 321 ವಿಮಾನದಲ್...
ಮೈಟಿ ಸಮುದಾಯದ ಪ್ರಾಬಲ್ಯವಿರುವ ಕಣಿವೆಯ ಪವಿತ್ರ ಬೆಟ್ಟವನ್ನು ಮರುನಾಮಕರಣ ಮಾಡಿದ ನಂತರ ಮತ್ತು ಈ ಪ್ರದೇಶವನ್ನು ತನ್ನ "ಸೇನಾ ಶಿಬಿರ" ಎಂದು ಹೇಳಿಕೊಂಡ ನಂತರ ಮಣಿಪುರ ಸರ್ಕಾರವು ಕುಕಿ ದಂಗೆಕೋರ ಗುಂಪಿನ ವಿರುದ್ಧ ಎಫ್ಐಆರ್ ದಾಖಲಿಸಿದೆ. ಕುಕಿ ನ್ಯಾಷನಲ್ ಫ್ರಂಟ್ (ಮಿಲಿಟರಿ ಕೌನ್ಸಿಲ್) ಎಂಬ ಉಗ್ರಗಾಮಿ ಸಂಘಟನೆಯು ಥಂಗ್ಜಿಂಗ್ ಚಿಂಗ್ ಬೆಟ...
ಇನ್ಸ್ಟಾಗ್ರಾಮ್ ರೀಲ್ ಮಾಡಲು ಎತ್ತರದಿಂದ ಆಳವಾದ ನೀರಿಗೆ ಹಾರಿದ 18 ವರ್ಷದ ಯುವಕ ಮುಳುಗಿ ಸಾವನ್ನಪ್ಪಿದ ಘಟನೆ ಜಾರ್ಖಂಡ್ ನ ಸಾಹಿಬ್ ಗಂಜ್ ಜಿಲ್ಲೆಯಲ್ಲಿ ನಡೆದಿದೆ. ತೌಸಿಫ್ ಎಂಬ ವ್ಯಕ್ತಿ ಸೋಮವಾರ ಸಂಜೆ ಸುಮಾರು 100 ಅಡಿ ಎತ್ತರದಿಂದ ಕ್ವಾರಿ ಸರೋವರಕ್ಕೆ ಹಾರಿದ್ದಾನೆ. ಸರೋವರದಲ್ಲಿ ಸ್ನಾನ ಮಾಡುತ್ತಿದ್ದ ಅವನ ಸ್ನೇಹಿತರು ಅವನನ್ನು ಉಳ...