ಮೊಬೈಲ್ ಫೋನಿನ ಟಾರ್ಚ್ ಉಪಯೋಗಿಸಿ ಸಿಜೇರಿಯನ್ ನಡೆಸಲಾದ ಘಟನೆ ಮುಂಬೈಯಲ್ಲಿ ನಡೆದಿದ್ದು ಗರ್ಭಿಣಿ ಮಹಿಳೆ ಮತ್ತು ಮಗು ಮೃತಪಟ್ಟಿದೆ. ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅಧೀನದಲ್ಲಿರುವ ಆಸ್ಪತ್ರೆಯಲ್ಲಿ ಈ ದಾರುಣ ಘಟನೆ ನಡೆದಿದೆ. ವಿಶೇಷ ಚೇತನ ವ್ಯಕ್ತಿಯಾಗಿರುವ ಕುಶ್ರುದ್ದೀನ್ ಅವರ 26 ವರ್ಷದ ಪತ್ನಿಯನ್ನು ಸುಷ್ಮಾ ಸ್ವರಾಜ್ ಮೆಟರ...
ಪ್ರಧಾನಿ ನರೇಂದ್ರ ಮೋದಿಯವರು ತನ್ನ ಮುಸ್ಲಿಂ ವಿರೋಧಿ ಮನಸ್ಸನ್ನು ಮತ್ತೊಮ್ಮೆ ಗುಜರಾತಿನಲ್ಲಿ ಬಹಿರಂಗಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಸರಕಾರಿ ಟೆಂಡರ್ ಗಳಲ್ಲಿ ಮುಸ್ಲಿಮರಿಗೆ ವಿಶೇಷ ಕೋಟ ಸೃಷ್ಟಿಸುವುದಾಗಿ ಭರವಸೆ ನೀಡಿದೆ ಎಂಬ ಸುಳ್ಳು ಆರೋಪವನ್ನು ಮಾಡಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯೊಂದು ಅಂಶವು ತ...
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ಮಗನಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಬೆಳವಣಿಗೆಯನ್ನು ಪ್ರಬಲವಾಗಿ ಖಂಡಿಸಿರುವ ಕುಸ್ತಿಪಟುಗಳು ಭಾರತದ ಪುತ್ರಿಯರು ಸೋತಿದ್ದಾರೆ.ಬ್ರಿಜ್ ಬೂಶನ್ ಗೆದ್ದಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಭೂಷಣ್ ಅವರ ಕಿರಿಯ ಪುತ್ರ...
ಮಮತಾ ಬ್ಯಾನರ್ಜಿ ಅವರ ಆಡಳಿತವು ಪಶ್ಚಿಮ ಬಂಗಾಳದಲ್ಲಿ ಹಿಂದೂಗಳನ್ನು ದ್ವಿತೀಯ ದರ್ಜೆಯ ನಾಗರಿಕರನ್ನಾಗಿ ಮಾರ್ಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಈ ಮೂಲಕ ಮತ್ತೆ ಹಿಂದೂಗಳು, ಹಿಂದೂ ಧರ್ಮ ಹಿಂದೂಗಳ ಮೇಲೆ ದೌರ್ಜನ್ಯ ಇತ್ಯಾದಿ ಧರ್ಮ ಕೇಂದ್ರಿತ ವಿಷಯಗಳ ಮೇಲೆಯೇ ತನ್ನ ಚುನಾವಣಾ ಪ್ರಚಾರ ಭಾಷಣವನ್ನು ಮುಂದುವರಿಸಿದ್ದಾರೆ...
ದೇವಾಲಯದ ಒಳಗೆ ಪ್ರವೇಶಿಸುವ ವಿಚಾರವಾಗಿ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಎರಡು ಜಾತಿ ಗುಂಪುಗಳ ನಡುವೆ ಘರ್ಷಣೆಗಳು ನಡೆದ ಘಟನೆ ನಡೆದಿದೆ. ದೀವಟ್ಟಿಪಟ್ಟಿಯ ಅಮ್ಮನ್ ದೇವಸ್ಥಾನದಲ್ಲಿ ಚಿತ್ತಿರೈ ಉತ್ಸವಕ್ಕೆ ಸಿದ್ಧತೆಗಳು ನಡೆದಿದ್ದವು. ದೇವಾಲಯಕ್ಕೆ ಪ್ರವೇಶಿಸಲು ಮತ್ತು ಪ್ರಾರ್ಥಿಸಲು ಅವಕಾಶ ನೀಡಬೇಕು ಎಂದು ಒಂದು ಸಮುದಾಯದ ಜನರು ಒತ್ತಾ...
ಮಣಿಪುರದ ಚುರಾಚಂದ್ ಪುರ ಜಿಲ್ಲೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಐವರು ಶಸ್ತ್ರಸಜ್ಜಿತ ವ್ಯಕ್ತಿಗಳು ದರೋಡೆ ಮಾಡಿದ ಘಟನೆ ನಡೆದಿದೆ. ದರೋಡೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬ್ಯಾಂಕಿಗೆ ಧಾವಿಸಿದರು. ಆದರೆ ಶಂಕಿತರು ಈಗಾಗಲೇ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದರು. ಈ ವಿಷಯದಲ್ಲಿ ದಾಖಲಾದ ಎಫ್ಐಆರ್ ಪ್ರಕಾರ, ...
ಆಂಧ್ರಪ್ರದೇಶದ ಖಮ್ಮಂನಲ್ಲಿ ವ್ಯಕ್ತಿಯೊಬ್ಬನನ್ನು ತೆಲಂಗಾಣ ಪೊಲೀಸರು ಗುರುವಾರ ಬಂಧಿಸಿದ್ದು, ಆತನಿಂದ ಭಾರೀ ಪ್ರಮಾಣದ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಕೂಲಂಕುಷವಾಗಿ ಪರಿಶೀಲಿಸಿದ ಪೊಲೀಸರು 20 ಲಕ್ಷ ನಗದು ಮತ್ತು 275 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಶಂಕಿತನನ್ನು ಆಂಧ್ರಪ್ರದೇಶದ ಜಗ್ಗಯ...
ಮೇ 19, 2023 ರ ವೇಳೆಗೆ ಚಲಾವಣೆಯಲ್ಲಿದ್ದ 2,000 ರೂ.ಗಳ ನೋಟುಗಳಲ್ಲಿ ಶೇಕಡಾ 97.76 ರಷ್ಟು ವಾಪಸ್ಸಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) ತಿಳಿಸಿದೆ. 2023 ರ ಮೇ 19 ರಂದು 2000 ರೂ.ಗಳ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದಾಗ ವ್ಯವಹಾರದ ಕೊನೆಯಲ್ಲಿ 3.56 ಲಕ್ಷ ಕೋಟಿ ರೂ.ಗಳಷ್ಟಿದ್ದ ಚಲಾವಣೆಯಲ್ಲಿರುವ...
ರಾಹುಲ್ ಗಾಂಧಿ ಅವರ ಉಮೇದುವಾರಿಕೆ ಕುರಿತು ದೀರ್ಘಕಾಲದಿಂದ ಇದ್ದ ಸಸ್ಪೆನ್ಸ್ ಗೆ ಕಾಂಗ್ರೆಸ್ ಇಂದು ತೆರೆ ಎಳೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಅಮೇಥಿ ಮತ್ತು ರಾಯ್ ಬರೇಲಿಯ ನಾಮನಿರ್ದೇಶನ ಪ್ರಕ್ರಿಯೆ ಇಂದು ಕೊನೆಗೊಳ್ಳುತ್ತಿದ್ದಂತೆ ಈ ಪ್ರಕಟಣೆ ಹೊರಬಿದ್ದಿದೆ. ಸ್ಮೃತಿ ಇರಾ...
ಬೆಂಗಳೂರು: ಪೆನ್ ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಇನ್ನಷ್ಟು ಸಂಕಷ್ಟ ಎದುರಾಗಿದ್ದು, ಇದೀಗ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ ಎರಡನೇ ಪ್ರಕರಣವಾಗಿದೆ. ಪ್ರಜ್ವಲ್ ರೇವಣ್ಣ ಅವರದ್ದೆನ್ನ...