ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಭೀಕರ ಪಟಾಕಿ ದುರಂತದಲ್ಲಿ ಮೃತಪಟ್ಟ ತಮಿಳುನಾಡು ಮೂಲದ 14 ಮಂದಿ ಕಾರ್ಮಿಕರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ 3 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ. ತಮಿಳುನಾಡಿನ ಆರೋಗ್ಯ ಮತ್ತು ಆಹಾರ ಸಚಿವರು ಹಾಗೂ ಜನಪ್ರತಿನಿಧಿಗಳು ಅತ್ತಿಬೆಲೆ ಆಕ್ಸ್ ಫರ್ಡ್ ಆಸ್ಪತ್ರೆಗೆ ಆಗಮಿಸುತ್ತಿದ...
ಅಕ್ಟೋಬರ್ 14ರಂದು ಅಹಮದಾಬಾದ್ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 14,000 ಟಿಕೆಟ್ಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರವಿವಾರ ಬಿಡುಗಡೆ ಮಾಡಿದೆ. ವಿಶ್ವದ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡ...
ಇಡೀ ದೇಶದಲ್ಲಿ ಬಿಹಾರ ಮಾದರಿಯಲ್ಲಿ ಜಾತಿ ಗಣತಿ ನಡೆಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಿರುವ ಬಿಹಾರ ಡಿಸಿಎಂ ತೇಜಸ್ವಿ ಪ್ರಸಾದ್ ಯಾದವ್, ಜನಸಂಖ್ಯೆಯಲ್ಲಿನ ನಿಜವಾದ ಪ್ರಾತಿನಿಧ್ಯ ತಿಳಿದಾಗ ಮಾತ್ರ ಸಮಾಜದ ಎಲ್ಲಾ ವರ್ಗಗಳಿಗೆ ನೆರವಾಗುವ ನೀತಿಗಳನ್ನು ರೂಪಿಸಲು ಸಾಧ್ಯ ಎಂದಿದ್ದಾರೆ. 'ಬಿಹಾರ ಸರ್ಕಾರವು ಮಾನವೀಯ ಕಾರ್ಯವನ್ನು ಕೈಗೊಂಡು ಜಾತ...
ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದುರಂತದಲ್ಲಿ ಮೃತಪಟ್ಟ ಕಾರ್ಮಿಕರೆಲ್ಲರೂ ಪದವೀಧರರು ಎಂದು ಹೇಳಲಾಗಿದ್ದು, ಪಟಾಕಿ ಅಂಗಡಿಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ದುರಂತದಲ್ಲಿ ಕಾರ್ಮಿಕರು ಸುಟ್ಟು ಸಜೀವ ದಹನವಾಗಿದ್ದಾರೆ. ಪಟಾಕಿ ದುರಂತದಲ್ಲಿ ಮಡಿದ 7 ಮಂದಿ...
ಸಿಕ್ಕಿಂನಲ್ಲಿ ಉಂಟಾದ ಹಠಾತ್ ಪ್ರವಾಹದ ವೇಳೆ ಪ್ರವಾಸಕ್ಕೆ ತೆರಳಿದ್ದ ಟಾಲಿವುಡ್ನ ಹಿರಿಯ ನಟಿ ಸರಳಾ ಕುಮಾರಿ ನಾಪತ್ತೆಯಾಗಿದ್ದಾರೆ. ಪ್ರವಾಹದಲ್ಲಿ ಸೇನಾ ಸಿಬ್ಬಂದಿ ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಯುನೈಟೆಡ್ ಸ್ಟೇಟ್ಸ್ನಲ್ಲಿ ನೆಲೆಸಿರುವ ಅವರ ಮಗಳು ನಬಿತಾ ಅವರು ಈಶಾನ್ಯ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದಿಂದಾಗಿ...
ಅಕ್ಟೋಬರ್ 4 ರಂದು ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಉಂಟಾದ ಹಠಾತ್ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದ ನಂತರ ಎಂಟು ಸೇನಾ ಸಿಬ್ಬಂದಿ ಸೇರಿದಂತೆ ಕನಿಷ್ಠ 56 ಜನರು ಸಾವನ್ನಪ್ಪಿದ್ದಾರೆ. ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿದ್ದರಿಂದ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿತು. ಇದರಿಂದಾಗಿ ನೀರಿನ ...
ಫೆಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್ ಶನಿವಾರ ಬೆಳಿಗ್ಗೆಯಿಂದ ಪ್ರಾರಂಭಿಸಿದ ದಾಳಿಯಲ್ಲಿ ಇಸ್ರೇಲ್ ನಲ್ಲಿ ಕನಿಷ್ಠ 300 ಮಂದಿ ಸಾವನ್ನಪ್ಪಿದ್ದಾರೆ. ಪ್ರತೀಕಾರದ ಮಿಲಿಟರಿ ಕಾರ್ಯಾಚರಣೆ, ಆಪರೇಷನ್ ಐರನ್ ಸ್ವೋರ್ಡ್ಸ್ ಮೂಲಕ ಇಸ್ರೇಲ್ ರಕ್ಷಣಾ ಪಡೆ ಪ್ರತಿದಾಳಿಯನ್ನು ಆರಂಭಿಸಿತು. ಇದೇ ವೇಳೆ ಗಾಜಾ ಮತ್ತು ವೆಸ್ಟ್ ಬ್ಯಾಂಕ್ನಲ್ಲಿ 230 ಕ್ಕೂ ಹ...
ಚಾಮರಾಜನಗರದಲ್ಲಿ ಅಧಿಕಾರಕ್ಕೆ ಬಂದ ಕೇವಲ ನಾಲ್ಕು ತಿಂಗಳಲ್ಲಿ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಕೋರ್ಟ್ ಆದೇಶಕ್ಕೆ ಮೊದಲೇ ಕಾವೇರಿ ನೀರು ಬಿಟ್ಟು ನಮ್ಮ ರೈತರು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿಕೆ ನೀಡಿದರು. ಚಾಮರಾಜನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾನೂನು ...
ಲಕ್ನೋ: ಆಟವಾಡುತ್ತಿದ್ದ ಬಾಲಕಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ ವೃದ್ಧನೋರ್ವ ಪೊಲೀಸರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಫರೀದ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 60 ವರ್ಷ ವಯಸ್ಸಿನ ಶೇಕ್ ಮೊಹಮ್ಮದ್ ಎಂಬಾತ ಕೃತ್ಯ ಎಸಗಿದ ...
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯದಲ್ಲಿ ಇನ್ನೂ ಮೂರು ಜಿಲ್ಲೆಗಳನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ನಲ್ಲಿ ಗೆಹ್ಲೋಟ್ ಅವರು, "ಸಾರ್ವಜನಿಕ ಬೇಡಿಕೆ ಮತ್ತು ಸಮಿತಿಯ ಶಿಫಾರಸಿನ ಮೇರೆಗೆ, ರಾಜಸ್ಥಾನದಲ್ಲಿ ಮೂರು ಹೊಸ ಜಿಲ್ಲೆಗಳನ್ನು ರಚಿಸಲಾಗುವು...