ಕಾಲೇಜು ಮುಗಿಸಿ ಬೈಸಿಕಲ್ ನಲ್ಲಿ ಬರುತ್ತಿದ್ದ ಬಾಲಕಿಗೆ ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಿದ್ದು, ಇದೇ ವೇಳೆ ಎದುರಿನಿಂದ ಬಂದ ಬೈಕ್ ವೊಂದು ಬಾಲಕಿಯ ಬೈಸಿಕಲ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಬಾಲಕಿ ಮೃತಪಟ್ಟಿದ್ದಾಳೆ. ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಈ ಆಘಾತಕಾ...
ಕೇಂದ್ರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನಡೆ ಕುರಿತು ಕೇಂದ್ರ ಸರ್ಕಾರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ. ನಾವು ಅದನ್ನು ತಿರಸ್ಕರಿಸುತ್ತೇವೆ. ಇದು ಒಕ್ಕೂಟದ ಮೇಲಿನ ದಾಳಿ. ಇದಕ್ಕೆ ಕನಿಷ್ಠ ಐದು ಸಾಂವಿಧಾನಿಕ ತಿದ್ದುಪಡಿಗಳ ಅಗತ್ಯವಿದೆ. ಈ ಸಂವಿಧಾನ ತಿದ್ದುಪಡ...
ಪ್ರಧಾನಿಗೆ ಹುಟ್ಟುಹಬ್ಬದ ಸಂಭ್ರಮ. ಹೌದು. ಇದೇ ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ 73ನೇ ಜನ್ಮದಿನದ ಸಂಭ್ರಮ. ಈ ದಿನವನ್ನು ಸಂಭ್ರಮದಿಂದ ಆಚರಿಸಲು ಸಚಿವಾಲಯವು ವಿಶೇಷ ಕಾರ್ಯಗಳನ್ನು ಆಯೋಜಿಸಿದೆ. ಜೊತೆಗೆ ಬಿಜೆಪಿ ಪಕ್ಷವು ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಪ್ರಧಾನಿ ಮೋದಿ ತಮ್ಮ ಜನ್ಮದಿನವನ್ನು ಸೇವಾ ಮತ್ತು ಜನ ಕಲ...
ನಾನು ಪತ್ರಕರ್ತರ ಬೆಂಬಲಕ್ಕೆ ಇದ್ದೇನೆ. ಎಲ್ಲರಿಗೂ ಸಂಪೂರ್ಣ ಮುಕ್ತ ಸ್ವಾತಂತ್ರ್ಯ ಸಿಕ್ಕಾಗ ಪತ್ರಕರ್ತರು ತಮಗೆ ಬೇಕಾದ್ದನ್ನು ಬರೆಯುತ್ತಾರೆ. ಅವರನ್ನು ನಿಯಂತ್ರಿಸಲು ಆಗುತ್ತಾ..? ಅವರಿಗೆ ಹಕ್ಕುಗಳಿವೆ. ನಾನು ಯಾರ ವಿರುದ್ಧವೂ ಅಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. 14 ಟಿವಿ ಆ್ಯಂಕರ್ಗಳನ್ನು INDIA ಮೈತ್...
ಹೈದರಾಬಾದ್ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಈ ಸಭೆಯ ಮೊದಲ ದಿನ ತೆಗೆದುಕೊಂಡ ನಿರ್ಣಯಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಸಂವಿಧಾನದ ಮೇಲೆ ಮೋದಿ ಸರ್ಕಾರದ ದಾಳಿಯನ್ನು ಖಂಡಿಸಲು ಮತ್ತು ವಿರೋಧಿಸಲು ಎಲ್ಲಾ ಪ್ರಜಾಸತ್ತಾತ್ಮಕ ಶಕ್ತಿಗಳನ್ನು ಒತ್ತಾಯಿಸುವ ನಿರ್ಣಯವನ್ನು ಈ ಕಾರ್ಯಕಾರಿ ಸಮಿತಿ ಸಭೆಯು ಅಂಗೀಕರ...
ಲಕ್ನೋದಿಂದ ಅಬುಧಾಬಿಗೆ ಹೋಗುತ್ತಿದ್ದ ಇಂಡಿಗೊ ವಿಮಾನವು ಹೈಡ್ರಾಲಿಕ್ ವೈಫಲ್ಯದ ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 155 ಮಂದಿ ಪ್ರಯಾಣಿಕರನ್ನು ಹೊತ್ತ ವಿಮಾನ ರಾತ್ರಿ 10:42 ಕ್ಕೆ ದೆಹಲಿಗೆ ಬಂದಿಳಿಯಿತು. ಎರಡು ವಾರಗಳ ಹಿಂದೆ ದೆಹಲಿಗೆ ತೆರಳುತ್ತಿದ್ದ ಇಂಡಿಗೊ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ...
ಈ ವರ್ಷದ ಅಂತ್ಯದಲ್ಲಿ ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ಬಿಜೆಪಿ ತಾಲೀಮು ಜೋರಾಗಿದೆ. ರಾಜಸ್ಥಾನ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿಯು ಅಲ್ಲಿನ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿ ತೀವ್ರ ವಾಗ್ದಾಳ...
ನಿಫಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಕೋಯಿಕ್ಕೋಡ್ ನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಂದಿನ ಭಾನುವಾರ ಸೆಪ್ಟೆಂಬರ್ 24 ರವರೆಗೆ ಒಂದು ವಾರದವರೆಗೆ ಮುಚ್ಚಲು ತೀರ್ಮಾನಿಸಲಾಗಿದೆ. ಇದರಲ್ಲಿ ಶಾಲೆಗಳು, ವೃತ್ತಿಪರ ಕಾಲೇಜುಗಳು ಮತ್ತು ಬೋಧನಾ ಕೇಂದ್ರಗಳು ಸೇರಿವೆ. ಏತನ್ಮಧ್ಯೆ, ವಾರವಿಡೀ ಆನ್ಲೈನ್ ತರಗತಿಗಳನ್ನು ಮಾಡಲಾಗುವುದು ಎ...
ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಅವರು ಪ್ರಮಾಣವಚನ ಸ್ವೀಕರಿಸಿದರು. ಅಧ್ಯಕ್ಷರಾಗಿದ್ದ ಹಲೀಮಾ ಯಾಕೂಬ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 13 ರಂದು ಕೊನೆಗೊಂಡಿತ್ತು. ಈಗ ಥರ್ಮನ್ ಸಿಂಗಾಪುರದ 9ನೇ ಅಧ್ಯಕ್ಷರಾಗಿದ್ದಾರೆ. ಇವರಿಗೆ 66 ವರ್ಷ. ಇದಕ್ಕೂ ಮುನ್ನ ಷಣ್ಮುಗರತ್ನಂ ಅವರು ಸಿಂಗಾಪುರ ಅಧ್ಯಕ್ಷೀಯ ಚುನ...
ಹೈದರಾಬಾದ್ ಪೊಲೀಸರು ಕುಖ್ಯಾತ ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಸಂಜಯ್ ದೀಪಕ್ ನನ್ನು ಬಂಧಿಸಿದ್ದಾರೆ. ಮಾವೋವಾದಿ ಕೇಂದ್ರ ಸಮಿತಿ ಸದಸ್ಯ ಸಂಜಯ್ ದೀಪಕ್ ರಾವ್ ಅವರನ್ನು ಬಂಧಿಸಲಾಗಿದೆ. ಸಂಜಯ್ ದೀಪಕ್ ರಾವ್ ಮೇಲೆ ತಮಿಳುನಾಡು, ಕರ್ನಾಟಕ, ಕೇರಳ, ಮಹಾರಾಷ್ಟ್ರ ಪೊಲೀಸರ ಜೊತೆಗೆ ಎನ್ಐಎಗೂ ದೀಪಕ್ ರಾವ್ ಮೋಸ್ಟ್ ವಾಂಟೆಡ್ ಆಗಿದ್ದರು. ಮಹಾರ...