ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 228 ರನ್ ಗಳ ಭರ್ಜರಿ ಜಯ ಗಳಿಸಿದೆ. ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 357 ರನ್ ಗಳ ಗುರಿ ಬೆನ್ನು ಹತ್ತಿದ ಪಾಕಿಸ್ತಾನ 32 ಓವರ್ ನಲ್ಲಿ 128 ರನ್ ಗಳಿಸಿ 228 ರನ್ ಗಳ ಅಂತರದಲ್ಲಿ ಹೀನ...
ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಭುಗಿಲೆದ್ದ ಕೋಮು ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 10 ಮಂದಿ ಗಾಯಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ನಿಂದಾಗಿ ಘರ್ಷಣೆ ಭುಗಿಲೆದ್ದಿತು. ಮೃತರನ್ನು ಹಸನ್ ಶಿಕಲ್ಗಾರ್ (30) ಮತ್ತು ಸಮೀರ್ ಬಾಗವಾನ್ (53) ಎಂದು ಗುರುತಿಸಲಾಗಿದೆ. ಪೋಸ್ಟ್ ಅಪ್ಲೋಡ್ ಮಾಡಿದ ವ್ಯಕ್ತ...
ಜಿ 20 ಶೃಂಗಸಭೆಯನ್ನು ಭಾರತ ಯಶಸ್ವಿಯಾಗಿ ಆಯೋಜಿಸಿದ ಬಗ್ಗೆ ಸಂಕುಚಿತ ಮನಸ್ಥಿತಿ ಮತ್ತು ಅಸೂಯೆಯಿಂದಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ವಿದೇಶದಲ್ಲಿ ಭಾರತ ಅಥವಾ "ಭಾರತ ಮಾತೆ" ಯನ್ನು ಟೀಕಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...
ಉತ್ತರ ಪ್ರದೇಶದ ಗಾಜಿಪುರ ಸೇರಿದಂತೆ ಖಾಲಿ ಇರುವ ನಾಲ್ಕು ಲೋಕಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯುವ ಸಾಧ್ಯತೆಯಿಲ್ಲ ಎಂದು ಮೂಲಗಳು ಸೋಮವಾರ ತಿಳಿಸಿವೆ. ಚುನಾವಣಾ ಆಯೋಗ ಮತ್ತು ಕೇಂದ್ರ ಕಾನೂನು ಸಚಿವಾಲಯದ ಶಾಸಕಾಂಗ ಇಲಾಖೆಯು ಈ ವಿಷಯದ ಬಗ್ಗೆ ಪರಸ್ಪರ ಸಂಪರ್ಕದಲ್ಲಿದೆ ಎಂದು ತಿಳಿದುಬಂದಿದೆ. ಶಾಸನಬದ್ಧ ನಿಬಂಧನೆಗಳ ಪ್ರಕಾರ, ಚುನಾವಣೆ ಅ...
ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ಪರಿಚಯವಾದ ಮಹಿಳೆಯಿಂದ ಒಂದು ತಿಂಗಳಲ್ಲಿ 1 ಕೋಟಿ ರೂಪಾಯಿ ಕಳೆದುಕೊಂಡ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಕುಲದೀಪ್ ಪಟೇಲ್, ವಂಚನೆಗೊಳಗಾದ ವ್ಯಕ್ತಿ. ಕುಲದೀಪ್ ಪಟೇಲ್ ಪ್ರತಿಷ್ಠಿತ ಮ್ಯಾಟ್ರಿಮೋನಿವೊಂದರಲ್ಲಿ ಅದಿತಿ ಎಂಬ ಹೆಸ...
ಪಶ್ಚಿಮ ಬಂಗಾಳದ ವಿಶೇಷ ಕಾರ್ಯಪಡೆಯು ಹೌರಾದಲ್ಲಿ 30 ಲಕ್ಷ ರೂ.ಗಳ ಮಾರುಕಟ್ಟೆ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ಜಂಗಲ್ಪುರ ಬಳಿ ಈ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಎರಡು ಟ್ರಕ್ ಗಳನ್ನು ವಶಕ್ಕೆ ತೆಗೆದುಕೊಂಡು ದಿನೇಶ್ ಕುಮಾರ್ ಮತ್ತು ರಾಜೇಶ್ ರಾಯ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಮಾದಕವಸ್ತುಗಳನ್ನು...
ಗಗನಸಖಿ ರೂಪಲ್ ಒಗ್ರೆ ಹತ್ಯೆ ಪ್ರಕರಣದ ಆರೋಪಿಯೊಬ್ಬ ಮುಂಬೈನ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವಿಕ್ರಮ್ ಅಟ್ವಾಲ್ ತನ್ನ ಪ್ಯಾಂಟ್ ಬಳಸಿ ತಾನು ಇರಿಸಲಾಗಿದ್ದ ಸೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಛತ್ತೀಸ್ ಗಢ ಮೂಲದ ಒಗ್ರೆ ಸೆಪ್ಟೆಂಬರ್ 3 ರಂದು ಉಪನಗರ ಅಂ...
ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಮತ್ತು ಈ ಕೃತ್ಯದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಫತೇಪುರದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿದ್ಯಾರ್ಥಿನಿ ತನ್ನ ಕಾಲೇಜಿನಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಪೊಲೀಸರಿಗೆ ನೀಡಿದ ಹೇಳಿಕೆ...
ಜಾಗತಿಕ ಮಾಲಿನ್ಯ ನಿಯಂತ್ರಣ ಮತ್ತು ಹವಾಮಾನ ಬದಲಾವಣೆ ಪರಿಣಾಮಕ್ಕೀಡಾಗಿರುವ ಸಮುದಾಯಗಳ ನೆರವಿಗಾಗಿ ಹಸಿರು ಪರಿಸರ ನಿಧಿಗೆ ಎರಡು ಬಿಲಿಯನ್ ಡಾಲರ್ ಕೊಡುಗೆ ನೀಡುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಘೋಷಿಸಿದ್ದಾರೆ. ಅಭಿವೃದ್ಧಿ ಶೀಲ ರಾಷ್ಟ್ರಗಳ ಪರಿಸರ ರಕ್ಷಣೆಗೆ ಸಂಬಂಧಿಸಿದಂತೆ ಹಸಿರು ಪರಿಸರ ನಿಧಿ ಅತಿದೊಡ್ಡ ಜಾಗತಿಕ ನಿಧಿಯಾಗಿದ...
ರಾಜಸ್ಥಾನದ ಸಿಕಾರ್ ನಲ್ಲಿ 15 ವರ್ಷದ ಬಾಲಕನನ್ನು ಹಾಸ್ಟೆಲ್ ವಾರ್ಡನ್ ಥಳಿಸಿದ ಘಟನೆ ನಡೆದಿದೆ. ಭಾರತೀಯ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಹಾಸ್ಟೆಲ್ ಸಿಬ್ಬಂದಿ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಆಮ್ಲಜನಕದ ಮಟ್ಟ ಕುಸಿದ ಕಾರಣ ಚಿಕಿತ್ಸೆಗಾಗಿ ಜೈಪುರಕ್ಕೆ ಕಳುಹಿಸಲಾಯಿತು. ಇದಾದ ನಂತರ ವೈದ್ಯರೊಂದಿ ಹ...