ಬಾಲಕನೊಬ್ಬನ ಪಾಲಿಗೆ ವೈದ್ಯರು ದೇವರಾಗಿರುವ ಘಟನೆ ಇಸ್ರೇಲ್ ದೇಶದಲ್ಲಿ ನಡೆದಿದೆ. ಇಸ್ರೇಲ್ನ ವೈದ್ಯರು 12 ವರ್ಷದ ಬಾಲಕನಿಗೆ ಅಸಾಮಾನ್ಯವಾದ ಮತ್ತು ತೀರಾ ಸಂಕೀರ್ಣವಾಗಿದ್ದ ಆಪರೇಷನ್ ನಡೆಸಿ ಯಶಸ್ವಿಯಾಗಿದ್ದಾರೆ. ನಡೆದದ್ದೇನು..? ಬೈಸಿಕಲ್ ಓಡಿಸುತ್ತಿದ್ದ ಸುಲೇಮಾನ್ ಹಸನ್ ಎಂಬ ಬಾಲಕ ಕಾರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ. ...
ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವು ಸಂಪೂರ್ಣ ಕೃಷಿ ಮನ್ನಾ ಸೇರಿದಂತೆ ಚುನಾವಣಾ ಪೂರ್ವ ಭರವಸೆಗಳನ್ನು ಈಡೇರಿಸಿಲ್ಲ ಎಂದು ರಾಜಸ್ಥಾನದ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಮುಂಬರುವ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದಿಂದ ಗೆಲ್ಲುತ್ತದೆ ಎಂದಿದ್ದಾರೆ. ಬಿಜೆಪಿ ಈ ಬಾರಿ ರಾಜಸ್ಥ...
ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದ್ದ ಯಮುನಾ ನದಿಯ ನೀರಿನ ಮಟ್ಟವು ನಿಧಾನವಾಗಿ ಕಡಿಮೆಯಾಗುತ್ತಿದ್ದರೂ ದೆಹಲಿಯ ಹಲವಾರು ಪ್ರದೇಶಗಳು ಜಲಾವೃತಗೊಂಡಿದೆ. ಪ್ರವಾಹದ ಪರಿಸ್ಥಿತಿಯಿಂದಾಗಿ ನೀರು ಶುದ್ಧೀಕರಣ ಘಟಕಗಳನ್ನು ಬಂದ್ ಮಾಡಲಾಗಿದೆ. ಹೀಗಾಗಿ ಬಹುತೇಕ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದೆ. ನೀರಿನ ಸಂಸ್ಕರಣಾ ಘಟಕಗ...
ಬೆಂಗಳೂರು: ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್ಎಲ್ವಿ ಮಾರ್ಕ್ 3 'ಬಾಹುಬಲ...
ಪ್ರಧಾನಿ ನರೇಂದ್ರ ಮೋದಿಯವರ ಐತಿಹಾಸಿಕ ಅಮೆರಿಕ ಭೇಟಿಯ ಒಂದು ತಿಂಗಳೊಳಗೆ ಕಾಂಗ್ರೆಸ್ ಸೆನೆಟೋರಿಯಲ್ ಸಮಿತಿಯು ಅರುಣಾಚಲ ಪ್ರದೇಶವನ್ನು ಭಾರತದ ಅವಿಭಾಜ್ಯ ಅಂಗವೆಂದು ಗುರುತಿಸುವ ನಿರ್ಣಯವನ್ನು ಅಂಗೀಕರಿಸಿದೆ. ಸೆನೆಟರ್ ಗಳಾದ ಜೆಫ್ ಮೆರ್ಕ್ಲಿ, ಬಿಲ್ ಹ್ಯಾಗರ್ಟಿ, ಟಿಮ್ ಕೈನೆ ಮತ್ತು ಕ್ರಿಸ್ ವ್ಯಾನ್ ಹೊಲೆನ್ ಗುರುವಾರ ಈ ನಿರ್ಣಯವನ್ನು ಮಂಡಿ...
ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಪಾವತಿ ಕಾರ್ಯವಿಧಾನವನ್ನು ಬಳಸಲು ಭಾರತ ಮತ್ತು ಫ್ರಾನ್ಸ್ ಒಪ್ಪಿಕೊಂಡಿವೆ. ಇದು ಐಫೆಲ್ ಟವರ್ನಿಂದ ಪ್ರಾರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಫ್ರಾನ್ಸ್ನಲ್ಲಿರುವ ಭಾರತೀಯ ಪ್ರವಾಸಿಗರು ಈಗ ರೂಪಾಯಿಗಳಲ್ಲಿ ಪಾವತಿ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ...
ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು ಮನೆಯೊಡತಿ ಮನೆಯೊಳಗೆ ಸಿಲುಕಿ ಹಾಕಿಕೊಂಡ ಘಟನೆಯು ದಕ್ಷಿಣ ಕನ್ನಡ ಜಿಲ್ಲೆಯ ಪರಿಯಲ್ತಡ್ಕ -- ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ. ಕೂರೇಲು ಮದ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿರುವ ಮನೆ ಸಂಪೂರ್ಣ ಹಾನಿಯಾಗಿದೆ. ಘಟನೆ ವೇಳೆ ಮನೆಯೊಳಗೆ ಮಹಿಳೆ ಮಲಗಿದ್ದರು. ಇವ...
ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ತಂತ್ರಾಂಶದ ಲೋಪದೋಷ, ಸಿಬ್ಬಂದಿಗಳ ವೇತನ ವಿಳಂಬ, ಸಿಬ್ಬಂದಿ ಕೊರತೆ, ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಾಹ ನೋಂದಣಿ, ಜನನ ಮರಣ ಪ್ರಮಾಣ ಪತ್ರ ನೀಡುವ ಕುರಿತಂತೆ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರು ನಿಯಮ 330 ಅಡಿ ಮಂಡಿಸಿದ ಸೂಚನೆಗೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ...
ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಗಗ್ರಾನ್ ಪ್ರದೇಶದಲ್ಲಿ ಗುರುವಾರ ಸಂಜೆ ಅಪರಿಚಿತ ಬಂದೂಕುಧಾರಿಗಳು ಮೂವರು ವಲಸೆ ಕಾರ್ಮಿಕರ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಕಾರ್ಮಿಕರು ಗಾಯಗೊಂಡಿದ್ದಾರೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಇದೊಂದು ಭಯೋತ್ಪಾದಕ ದಾಳಿಯಾಗಿದೆ. ಗಾಯಗೊಂಡ ಕಾರ್ಮಿಕ...