ರಾಜಸ್ಥಾನದ ಕೋಟಾ ಎಂಬಲ್ಲಿ ಎಂಬಿಬಿಎಸ್ ಆಕಾಂಕ್ಷಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲ ಘಟನೆಯಲ್ಲಿ ಉದಯಪುರದ 18 ವರ್ಷದ ವೈದ್ಯಕೀಯ ವಿದ್ಯಾರ್ಥಿಯೋರ್ವ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಮೆಹುಲ್ ವೈಷ್ಣವ್ ಎಂದು ಗುರುತಿಸಲಾಗಿದ್ದು, ರಾಷ್ಟ್ರೀಯ...
ಚಿಕ್ಕಮಗಳೂರು: ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಅಕ್ರಮ ಆಸ್ತಿ ಸಂಪಾದನೆಯ ದೂರಿನ ಹಿನ್ನೆಲೆ ಲೋಕಾಯುಕ್ತ ದಾಳಿ ನಡೆದಿದೆ. ಏಕಕಾಲದಲ್ಲಿ ಗಂಗಾಧರ್ ಅವರ ಮನೆ, ಪೆಟ್ರೋಲ್ ಬಂಕ್, ನಿರ್ಮಾಣ ಹಂತದ ರೆಸಾರ್ಟ್ ಮೇಲೆ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ...
ಶಿವರಾತ್ರಿ, ನಾಗಪಂಚಮಿ, ರಕ್ಷಾಬಂಧನ, ಬಕ್ರೀದ್ ಮತ್ತು ಮೊಹರಂನಂತಹ ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೇ ಸಾರ್ವಜನಿಕ ಹಿತದೃಷ್ಟಿಯಿಂದ ಭಕ್ತರಿಗೆ ಅಗತ್ಯ ನಿರ್ದೇಶನಗಳನ್ನು ಮತ್ತು ಸೌಲಭ್ಯಗಳನ್ನು ನೀಡಿದ್ದಾರೆ. ಅಧಿಕೃತ ಪ್ರಕಟ...
ಮುಂಬರುವ ಅಮರನಾಥ ಯಾತ್ರೆಯ ಹಿನ್ನೆಲೆಯಲ್ಲಿ ಸುರಕ್ಷತೆಯನ್ನು ಪರಿಶೀಲಿಸಲು ಜಮ್ಮು ಮತ್ತು ಕಾಶ್ಮೀರ ಆಡಳಿತ ಮತ್ತು ಪೊಲೀಸರು ಅಣಕು ಕಾರ್ಯಾಚರಣೆ ನಡೆಸಿದರು. 62 ದಿನಗಳ ಕಾಲ ನಡೆಯುವ ವಾರ್ಷಿಕ ಅಮರನಾಥ ಯಾತ್ರೆ 2023 ರ ಜುಲೈ 1 ರಂದು ಪ್ರಾರಂಭವಾಗಲಿದ್ದು, 2023 ರ ಆಗಸ್ಟ್ 31 ರಂದು ಕೊನೆಗೊಳ್ಳಲಿದೆ. ವರದಿಗಳ ಪ್ರಕಾರ, ಅಮರನಾಥ ಯಾತ್ರೆಗೆ...
ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆ ಕೇಳಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಅಮೆರಿಕದ ಪತ್ರಕರ್ತೆಗೆ ಕಿರುಕುಳ ನೀಡಿರುವುದು ಸ್ವೀಕಾರಾರ್ಹವಲ್ಲ ಎಂದು ಶ್ವೇತಭವನ ಖಂಡಿಸಿದೆ. ಮೊನ್ನೆ ದಿ ವಾಲ್ ಸ್ಟ್ರೀಟ್ ಜರ್ನಲ್ ವರದಿಗಾರ್ತಿ ಸಬ್ರಿನಾ ಸಿದ್ದಿಕಿ ಅವರು ಭಾ...
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರವು ದೊಡ್ಡ ಅಪರಾಧಗಳಿಗೆ ಕಾರಣವಾದ ಅಪರಾಧಿಗಳ ತ್ವರಿತ ಶಿಕ್ಷೆಯನ್ನು ಖಾತರಿಪಡಿಸಲು ಆಪರೇಷನ್ ಕನ್ವಿಕ್ಷನ್ ಎಂಬ ಹೊಸ ಅಭಿಯಾನವನ್ನು ಪ್ರಾರಂಭಿಸಿದೆ. ಈ ಮೂಲಕ ಅತ್ಯಾಚಾರ, ಕೊಲೆ, ಅನ್ಯ ಧರ್ಮಕ್ಕೆ ಮತಾಂತರ, ಗೋಹತ್ಯೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು....
ದೇಶದ ಹಲವು ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಮುಂಗಾರು ಋತುವು ಮುಂದಿನ ಕೆಲವು ದಿನಗಳವರೆಗೆ ಬಿರುಸಿನ ಮಳೆಯೊಂದಿಗೆ ಮುಂದುವರಿಯಲಿದೆ. ಮುಂದಿನ ಐದು ದಿನಗಳಲ್ಲಿ ಉತ್ತರ ಪ್ರದೇಶ, ರಾಜಸ್ಥಾನ, ಉತ್ತರಾಖಂಡ, ಹಿಮಾಚಲ ಪ್ರದೇಶ, ಕೊಂಕಣ, ಗೋವಾ, ಗುಜರಾತ್ ಮತ್ತು ಮಹಾರಾಷ್ಟ್ರದ ಘಾಟ್ ಪ್ರದೇಶಗಳಲ್ಲಿ ...
ಈಗಾಗಲೇ ಗ್ಯಾಸ್, ಪೆಟ್ರೋಲ್ ಹಾಗೂ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿದ ಜನರಿಗೆ ಇದೀಗ ಟೊಮೆಟೊ ದರ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ಯಾಕೆಂದರೆ ದೇಶದ ಹಲವಾರು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಹೆಚ್ಚಾಗಿದೆ. ಚಿಲ್ಲರೆ ಮಾರುಕಟ್ಟೆಗಳಲ್ಲಿ 100 ರೂಪಾಯಿ ಗಡಿಯನ್ನು ದಾಟಿದೆ. ಕಿಲೋಗ್ರಾಂಗೆ 20ರಿಂದ 30 ರೂಪಾಯಿ ಧಾ...
ಚಿಕ್ಕಮಗಳೂರು: ರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ವೈದ್ಯರು ಚಿಕಿತ್ಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಮೂಲತಃ ಅಜ್ಜಂಪುರ ತಾಲೂಕಿನ ಗಡಿರಂಗಾಪುರ ಗ್ರಾಮದ ಯಶೋಧಾ ಎಂಬ ಮಹಿಳೆಗೆ 9 ತಿಂಗಳು ತುಂಬಿತ್ತು. ಬಿ ನೆಗೆಟಿವ್ ರಕ್ತದ ಗುಂಪು ಹೊಂದಿರು...
ಚಾಮರಾಜನಗರ: ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಮನೆಯ ಮುಂಭಾಗ ಆಟವಾಡುತ್ತಿದ್ದ ಬಾಲಕಿ ಮೇಲೆ ಚಿರತೆ ದಾಳಿ ನಡೆಸಿದೆ. ತೀವ್ರ ಗಾಯಗೊಂಡ ಬಾಲಕಿಯನ್ನು ಕಾಮಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ...