ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಪುಕ್ಕಲು ಸ್ವಭಾವ...
ಮಂಗಳೂರು: ನಗರದ ಕುದ್ರೋಳಿ ದೇವಸ್ಥಾನಕ್ಕೆ ಇಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಉತ್ತರ ಕೊಡಲ್ಲ. ಅವರು ಒಂಥರಾ ಜೋಕರ್ ಇದ್ದ ಹಾಗೆ, ಉತ್ತರ ಕೊಡಲ್ಲ. ಅವರು ಬಹಳ ಬಾಲಿಶವಾಗಿ ಮತ್ತು ಬೇಜವಾಬ್ದಾರಿಯಿಂದ ಮಾತನಾಡ್ತಾರೆ. ಬಿಜೆಪಿಯಲ್ಲಿ ಅವರೊಬ್ಬ ವಿದೂಷಕ ಇದ್ದ...
ನೀವು ರಸ್ತೆ, ಒಳಚರಂಡಿಯಂತಹ ಸಮಸ್ಯೆಗಳನ್ನು ಮಾತನಾಡುವ ಅಗತ್ಯವಿಲ್ಲ. ಬದಲಿಗೆ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ. ಲವ್ ಜಿಹಾದ್ ನಿಂದ ರಕ್ಷಿಸಿ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜಾಣತನದ ಹೇಳಿಕೆ ಇದೀಗ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಮಂಗಳೂರಲ್ಲಿ ಮಾತನಾಡಿರುವ ಅವರು, ಲವ್ ಜಿಹಾದ್ ನಿಲ್ಲಿಸಲು ಭ...
ಉಡುಪಿ: ಕರ್ನಾಟಕ ಸರ್ಕಾರ ದಲಿತರ ಸಬಲೀಕರಣಕ್ಕಾಗಿ ಮೀಸಲಿರಿಸಿದ್ದ ಎಸ್.ಸಿ.ಪಿ./ಟಿ.ಎಸ್.ಪಿ. ಅನುದಾನಗಳನ್ನು ದುರ್ಬಳಕೆ ಮಾಡುತ್ತಿರುವ ಬಗ್ಗೆ ಇತ್ತೀಚೆಗೆ ನಾನು ಪತ್ರಿಕಾ ಹೇಳಿಕೆ ನೀಡಿದ್ದು, ಈ ಬಗ್ಗೆ ಸಚಿವರು ಉತ್ತರಿಸಬೇಕೆಂದು ತಿಳಿಸಿದಾಗ ಹೇಳಿಕೆ ನೀಡಲು ವಿಫಲಾಗಿರುವ ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ತಮ್ಮ ಪರ ಚಮ...
ಬೆಂಗಳೂರು: ಎಸ್ಸಿ ಮತ್ತು ಎಸ್ ಟಿ ಭೂ ಪರಭಾರೆ ನಿಷೇಧ ಕಾಯ್ದೆ—1978—79(PTCL ACT) ಕಾಲಮಿತಿ ಅನ್ವಯಿಸುವುದಿಲ್ಲವೆಂದು ಸಮಗ್ರ ತಿದ್ದುಪಡಿ ಮಾಡಿ ಸುಗ್ರಿವಾಜ್ಞೆಗೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದೆ. ಧರಣಿ ಸತ್ಯಾಗ್ರಹದ ಮೂರನೇ ದಿನವಾದ ಬ...
ಚೆನ್ನೈ: ತೂಕ ಇಳಿಸುವ ಮಾತ್ರೆ ಸೇವಿಸಿ ಯುವಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದ್ದು, ಮೃತ ವ್ಯಕ್ತಿ ಹಾಲಿನ ಸಂಸ್ಥೆಯಲ್ಲಿ ವಿತರಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಪಿ.ಸೂರ್ಯ(21) ಮೃತಪಟ್ಟ ಯುವಕನಾಗಿದ್ದಾನೆ. ಸ್ಥೂಲಕಾಯದಿಂದ ಬಳಲುತ್ತಿದ್ದ ಸೂರ್ಯನಿಗೆ ಕಳೆದ ತಿಂಗಳುಗಳಿಂದ ತೂಕ ಕಡಿಮ...
ಬಾಲಕಿಯೊಬ್ಬಳ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾದ ಬಳಿಕ ಗರ್ಭಪಾತ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿ ಪರಿಸರದಿಂದ ವರದಿಯಾಗಿದೆ. ಬಾಲಕಿಯು ತನ್ನ ಹತ್ತಿರದ ಸುಧೀರ್ ಎಂಬವನ ಮನೆಗೆ ಭಾನುವಾರ ಹಾಗೂ ಇತರ ರಜಾ ದಿನಗಳಲ್ಲಿ ಟಿವಿ ವೀಕ್ಷಣೆಗೆಂದು ಹೋಗುತ್ತಿದ್ದು, ಈ ಸಮಯ ಸುಧೀರನು ಸಮೀಪದ...
ಬೆಂಗಳೂರು: ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಘೋಷಿಸಿದ್ದು, ವಯಸ್ಸಿಗೆ ಬೆಲೆ ಕೊಟ್ಟು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಈ ವಿಚಾರ ತಿಳಿಸಿದ ಎಸ್.ಎಂ.ಕೃಷ್ಣ ತಮ್ಮ ರಾಜಕೀಯ ನಿವೃತ್ತಿಯನ್ನು ತಿಳಿಸಿದರು. ಈ ವೇಳೆ ...
ಚಿಕ್ಕಮಗಳೂರು: ನಾಯಿಯಂತೆ ಬಾಲ ಅಲ್ಲಾಡಿಸಿ ಕುಂಯಿ...ಕುಂಯಿ.. ಅಂತ ಬರೋದು ಕಾಂಗ್ರೆಸ್ ಕಲ್ಚರ್, ಕಾಂಗ್ರೆಸ್ಸಿಗರು ಯಾವ ಪದ ಬಳಸಿದ್ದಾರೋ ಅದು ಕಾಂಗ್ರೆಸ್ಸಿಗೆ ಅನ್ವಯವಾಗುತ್ತೆ ಎಂದು ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ಮೋದಿಯವರ ಮುಂದೆ ಸಿಎಂ ಬಸವರ...
ಮಂಗಳೂರು: ಪ್ರತೀ ವರ್ಷ ಅಬ್ಬಕ್ಕ ಉತ್ಸವಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿ ಬಿಡುಗಡೆ ಮಾಡುತ್ತಿತ್ತು. ಆದರೆ ಈ ಸಲ ಸುನೀಲ್ ಕುಮಾರ್ ಕನ್ನಡ ಸಂಸ್ಕೃತಿ ಸಚಿವರಾಗಿದ್ದರೂ ಸಹ ಕೇವಲ 10 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತ...