ಮಂಗಳೂರು: ನಿನ್ನೆ ರಾತ್ರಿ ಕೊಲೆಯಾದ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ಅಬ್ದುಲ್ ಜಲೀಲ್ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸ್ಥಳೀಯರು ಸ್ಥಳದಲ್ಲೇ ಧರಣಿ ನಡೆಸಿದರು. ಇಂದು ಮಧ್ಯಾಹ್ನ ವೇಳೆ 9ನೇ ಬ್ಲಾಕ್ ಜುಮಾ ಮಸೀದಿಯಲ್ಲಿ ಮಯ್ಯತ್ ನಮಾಝ್ ನಿರ್ವಹಿಸಿದ ಬಳಿಕ ನೆರೆದಿದ್ದ ಸಾವಿರಾರು ಮಂದಿ ಜಲೀಲ್ ಅವರ ಮೃತದೇಹವನ್ನು ಕೊಂಡೊಯ್ಯುತ್ತಿದ...
ಮಂಗಳೂರು: ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಜಲೀಲ್ ಅವರ ಮೃತದೇಹ ಮನೆಗೆ ತಲುಪಿದ್ದು, ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಮೃತದೇಹದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಕೃಷ್ಣಾಪುರ 9ನೇ ಬ್ಲಾಕ್ ನಲ್ಲಿರವ ಜಲೀಲ್ ಅವರ ಮನೆಗೆ ರವಾನೆ ಮಾಡಲಾಗಿದೆ. ಅಂತಿಮ ವಿಧಿ...
ಮಂಗಳೂರು: ನಗರದ ಸುರತ್ಕಲ್ ನಲ್ಲಿ ಜಲೀಲ್ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಾದ ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ದ ವಾತಾವರಣ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಮೂರು ಪುಂಡಾನೆಗಳನ್ನು ಸ್ಥಳಾಂತರ ನಡೆಸಿದರೂ ಇದೀಗ ಮತ್ತೊಂದು ಕಾಡಾನೆ ಪುಂಡಾಟ ಮೆರೆದಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನನ್ನು ಕೊಂದು ಹಾಕಿದೆ. ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ದಾಳಿ ನಡೆಸಿದ ಆನೆ ಹತ್ಯೆ...
ಸುರತ್ಕಲ್ ನ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಕೊಲೆಯಾದವರು ಫ್ಯಾನ್ಸಿ ಅಂಗಡಿ ನಡೆಸಿಕೊಂಡಿದ್ರು. ಇಂದು ಇಬ್ಬರು ಬಂದು ಚೂರಿ ಇರಿದು ಪರಾರಿಯಾಗಿದ್ದಾರೆ. ಈ ಪ್ರಕರಣದ ಹಿಂದಿರುವ ಉದ್ದೇಶ ಏನು ಅನ್ನೋದು ಗೊತ್ತಿಲ್ಲ. ಸ್ಥಳೀಯರು ಕೆಲವು ಅನುಮಾನಗಳನ್...
ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಗೆ ಚೂರಿ ಇರಿದು ಪರಾರಿಯಾದ ಘಟನೆ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿ ಬಳಿ ರಾತ್ರಿ ನಡೆದಿದೆ. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಮೃತ ವ್ಯಕ್ತಿಯನ್ನು ಜಲೀಲ್ ಎಂದು ಗುರುತಿಸಲಾಗಿದೆ. ...
ಬೆಂಗಳೂರು: ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಾಡದ ತಪ್ಪಿಗೆ ಪುನೀತ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಪುನೀತ್ ಕೆರೆಹಳ್ಳಿ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ತೀವ್ರ...
ಬೆಂಗಳೂರು: ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಕಾರೊಂದು ಕಂದಕಕ್ಕೆ ಉರುಳಿದ ಪರಿಣಾಮ 8 ಭಕ್ತರು ಮೃತಪಟ್ಟಿರುವ ಘಟನೆ ಕೇರಳ ತಮಿಳುನಾಡು ಗಡಿಯಲ್ಲಿರುವ ಥೇಣಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಎಲ್ಲ ಪ್ರಯಾಣಿಕರು ಥೇಣೀ—ಅಂಡಿಪೆಟ್ಟಿ ನಿವಾಸಿಗಳಾಗಿದ್ದರು ಎಂದು ಜಿಲ್ಲಾಧಿಕಾರಿ ಕೆ.ವಿ.ಮುರಳೀಧರನ್ ತಿಳಿಸಿದ್ದಾ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪಿಜಿ, ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಮಂಗಳೂರು ನಗರದ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್ಮೆಂಟ್, ವಾಣಿಜ್ಯ ಉದ್ದೇಶದ ಗೆಸ್ಟ್ ಹೌಸ್...
ಅಪಘಾತ ಮಾಡಿ ಎಸ್ಕೇಪ್ ಆಗಲು ಯತ್ನ ಮಾಡಿದ ಕಾರು ಚಾಲಕನನ್ನು ಹಿಡಿದಿರುವ ಘಟನೆ ಮಂಗಳೂರು ನಗರದ ತಲಪಾಡಿ ದೇವಿಪುರದಲ್ಲಿ ನಡೆದಿದೆ. ಕೇರಳ ಮೂಲದ ಕಾರು ಚಾಲಕನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕ ಮುಬಾರಿಷ್ ಎಂಬುವವರು ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸುತ್ತಿದ್ದರು. ರಾಷ್ಟ್ರೀಯ ಹ...