ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ನಾಳೆ ಮಲೆನಾಡಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಮಲೆನಾಡು ಭಾಗದ ಆರು ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜು, ಪದವಿ ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷ...
ಚಿಕ್ಕಮಗಳೂರು: ಮಲೆನಾಡಿನಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ನಾನಾ ಅವಾಂತರಗಳು ಸೃಷ್ಟಿಯಾಗಿದ್ದು, ಎಸ್ಟೇಟ್ ನ ಕೆರೆ ಏರಿ ಹೊಡೆದು ಭಾರೀ ಪ್ರಮಾಣದ ನೀರು ಹೊರಕ್ಕೆ ಬಂದ ಪರಿಣಾಮ ಜಮೀನುಗಳು ಜಲಾವೃತಗೊಂಡಿವೆ. ಕೊಪ್ಪ ತಾಲೂಕಿನ ಹೇರೂರು ಸಮೀಪದ ದೇವಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾರು ಎರಡು ಎಕರೆ ವಿಸ್ತೀರ್ಣದ ಕೆರೆ ಏರಿ ಹೊಡೆದು...
ಹಾಸನ: ರಾಜ್ಯದ ಹಲವೆಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ಜೊತೆಗೆ ಭೀಕರವಾದ ಗಾಳಿ ಎದೆ ಝಲ್ಲೆನಿಸುವಂತೆ ಬೀಸುತ್ತಿದೆ. ಇತ್ತ ಹಾಸನದಲ್ಲಿ ಮಳೆಯಿಂದಾಗಿ ಬೃಹತ್ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಕುಂಬರಡಿ ಸಮೀಪ ರಸ್ತೆ 200 ಮೀಟರ್ಗೂ ಹೆಚ್ಚು ದೂರ ಕುಸಿದು ಹೋಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದ...
ಕಾರವಾರ: ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ದುರಂತದಲ್ಲಿ 8 ಮಂದಿಯ ಮೃತದೇಹ ಪತ್ತೆಯಾಗಿದೆ. ಕೇರಳ ಮೂಲದ ಲಾರಿ ಚಾಲಕ ಸೇರಿದಂತೆ ಹಲವರ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಈ ನಡುವೆ ಕಾರವಾರದಲ್ಲಿ ಹಾಸ್ಯಕರ ಘಟನೆಯೊಂದು ನಡೆದಿದ್ದು, ಸ್ಥಳಕ್ಕೆ ಸ್ವಾಮೀಜಿಯೊಬ್ಬರು ಆಗಮಿಸಿ ಭವಿಷ್ಯ ನು...
ಕೊಟ್ಟಿಗೆಹಾರ. ಒಂದು ತಿಂಗಳಿಂದ ಎಡಬಿಡದೆ ಸುರಿಯುತ್ತಿರುವ ಮಹಾಮಳೆಗೆ ಮಲೆನಾಡು ಅಕ್ಷರಸಹ ಸ್ತಬ್ಧವಾಗಿ ಹೋಗಿದೆ. ಅದರಲ್ಲೂ ಮೂಡಿಗೆರೆ ತಾಲೂಕಿನ ಹೊಳೆ ಕೊಡುಗೆ ಗ್ರಾಮದ ಮಲೆಕುಡಿಯ ಕುಟುಂಬ ಒಂದು ಆಹಾರಕ್ಕಾಗಿ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಗ್ರಾಮದಲ್ಲಿ ನಾಲ್ಕೈದು ಮನೆಗಳಿದ್ದು ಈ ಮನೆಗಳಿಗೆ ಭದ್ರಾ ನದಿಯ ನೀರು ಮೂರು ಕಡೆ ...
ಮಂಡ್ಯ: ಕೆಆರ್ ಎಸ್ ಡ್ಯಾಂನಿಂದ 1,30,000 ಕ್ಯುಸೆಕ್ ನೀರನ್ನು ಹರಿ ಬಿಡಲಾಗಿದೆ. ಇದರಿಂದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಭ ದೇವಸ್ಥಾನದ ಮುಂಭಾಗ ಸಂಪೂರ್ಣ ಜಲಾವೃತಗೊಂಡಿದೆ. ನಿನ್ನೆ ದೇವಸ್ಥಾನದ ಸ್ನಾನಘಟ್ಟ ಮುಳುಗಡೆಯಾಗಿತ್ತು. ಇಂದು ದೇವಸ್ಥಾನದ ಮುಂಭಾಗ, ಪಾರ್ಕಿಂಗ್ ಸ್ಥಳ, ನವಗ್ರಹ, ಅರಳಿಕಟ್ಟೆ, ಶಿವನ ದೇಗ...
ಚಿಕ್ಕಮಗಳೂರು: ಮಳೆಗಾಲದಲ್ಲಿ ಕರೆಂಟ್ ಹೋದ್ರೆ ಥೋ.... ಅಂತ ವಿದ್ಯುತ್ ಇಲಾಖೆಯವ್ರಿಗೆ ಬೈತೀರಾ..? 2--3 ದಿನ ಕರೆಂಟ್ ಬರ್ದಿದ್ರಂತು ಅವರ ಕಥೆ ಮುಗೀತು... ವಂಶವನ್ನೇ ಜಾಲಾಡಿರ್ತೀರಾ? ಆದ್ರೆ, ಈ ದೃಶ್ಯ ನೋಡಿದ್ರೆ ಕರೆಂಟ್ ಹೋದ್ರು ವಿದ್ಯುತ್ ಇಲಾಖೆಯವ್ರಿಗೆ ಯಾರೂ ಬೈಯಲ್ಲ. ಮಳೆಗಾಲದಲ್ಲಿ ಪ್ರಕೃತಿ ಜೊತೆ ವಿದ್ಯುತ್ ಇಲಾಖೆಯವರ ಹೋರಾ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ—ಮಳೆ ಹಿನ್ನೆಲೆಯಲ್ಲಿ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಳೆ ಮಾತ್ರ ಅಂಗನವಾಡಿ, ಪ್ರಾಥಮಿಕ--ಪ್ರೌಢ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 27 ಶನಿವಾರ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ...
ಚಿಕ್ಕಮಗಳೂರು: ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮುಂಭಾಗ ಬ್ಯಾರಿಕೇಡ್ ಅಳವಡಿಸಿದ್ದರೂ ಕ್ಯಾರೇ ಮಾಡದೇ ಸೇತುವೆ ಮೇಲೆ ಜೀಪ್ ಚಲಾಯಿಸಿ ಸ್ವಲ್ಪದಲ್ಲೇ ಪಾರಾದ ಘಟನೆಗೆ ಸಂಬಂಧಿಸಿದಂತೆ ಜೀಪ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳಸ ಪೊಲೀಸರು ಜೀಪ್ ನ್ನು ವಶಕ್ಕೆ ಪಡೆದುಕೊಂಡಿದ್ದು, ಜೀಪ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ...
ಮಂಗಳೂರು: ಬಡಪಾಯಿ ಬೀದಿಬದಿ ವ್ಯಾಪಾರಸ್ಥರು ಜೀವನೋಪಾಯಕ್ಕಾಗಿ ತಲಪಾಡಿ ಟೋಲ್ ಗೇಟ್ ಪರಿಸರದಲ್ಲಿ ವ್ಯಾಪಾರ ನಡೆಸುತ್ತಿದ್ದು, ಅವರ ಮೇಲೆ ಏಕಾಏಕಿ ದಾಳಿ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕ್ರಮ ತೀರಾ ಖಂಡನೀಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿ ಎಕರೆಗಟ್ಟಲೆ ಭೂಮಿಯನ್ನು ಕಬಳಿಸಿದ ಅತಿಕ್ರಮಣದಾರರ ವಿರುದ್ಧ ಎಳ್ಳಷ್ಟೂ ಕ್ರಮ ...