ಬೆಂಗಳೂರು: ಅಂಬರೀಶ್ ಅಂದರೆ ಒಂದು ಶಕ್ತಿ. ಅವರ ವ್ಯಕ್ತಿತ್ವದಲ್ಲೇ ಆ ಶಕ್ತಿ ಇತ್ತು. ಅಂಬರೀಶ್ ಎಲ್ಲಿಯೇ ಹೋದರೂ ಸಂತೋಷ ಇರುತ್ತಿತ್ತು. ಗಂಭೀರ ಚರ್ಚೆ ಸಮಯದಲ್ಲೂ ಅಂಬರೀಶ್ ಬಂದರೆ ಸಮಸ್ಯೆಗೆ ಪರಿಹಾರ ಸಿಗುತ್ತೆ ಅನ್ನೋ ಸಂತೋಷ ಇರುತ್ತಿತ್ತು ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ದಿವಂಗತ ರೆಬಲ್ ಸ್ಟಾರ್...
ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ಬಿಜೆಪಿ ಬಣ ರಾಜಕೀಯ ತಾರಕಕ್ಕೇರಿದ್ದು, ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹಾಗೂ ಎಂ.ಎಲ್.ಸಿ. ಪ್ರಾಣೇಶ್ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಹಲವು ದಿನಗಳಿಂದ ಇಬ್ಬರು ನಾಯಕರ ನಡುವೆ ಇದ್ದ ಮುಸುಕಿನ ಗುದ್ದಾಟ ಸ್ಫೋಟಗೊಂಡಿದೆ. ಸ್ಟೇಷನ್ ಎದುರಿನ ಆಟೋ ನಿಲ್ದಾಣದ ವಿಚಾರದಲ್ಲಿ ಕಿರಿಕ್ ನಡೆದಿದ್ದು, ಪೊಲೀ...
ಬೆಂಗಳೂರು: ಶಿಕಾರಿಪುರದಲ್ಲಿ ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲೆಸೆತದ ದುಷ್ಕೃತ್ಯ ಖಂಡನೀಯ. ಕಿಡಿಗೇಡಿಗಳ ಈ ಕುಕೃತ್ಯವನ್ನು ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂಥ ದುಷ್ಕೃತ್ಯಕ್ಕೆ ಯಾರೂ ಬೆಂಬಲ ಕೊಡಬಾರದು. ಪ್ರಜಾಪ್ರಭುತ...
ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿರುವ ಪಿಎಫ್ ಐ ಕಚೇರಿಯನ್ನು ಜಪ್ತಿ ಮಾಡಿದೆ. ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಪಿಎಫ್ ಐ ಕಚೇರಿ ಇದ್ದು ಇದನ್ನು ವಶಕ್ಕೆ ಪಡೆದಿ...
ಬೆಂಗಳೂರು: ನೈಸ್ ಸಂಸ್ಥೆಯು ಟೌನ್ ಶಿಪ್ ಗೆಂದು ಭೂಮಿ ಸ್ವಾಧೀನಪಡಿಸಿಕೊಂಡ ರೈತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು. 2013ರಲ್ಲಿ ಕೆಐಎಡಿಬಿ ನಿಗದಿಪಡಿಸಿದ ದರದಲ್ಲಿ ಸಂಸ್ಥೆ ಪರಿಹಾರ ನೀಡದಿದ್ದರೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿ ಭೂಮಿ ವಾಪಸ್ ಕೊಡಿಸಲು ಕ್ರಮವಹಿಸಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು...
ಶಿಕಾರಿಪುರ: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಸರ್ಕಾರದ ನಿರ್ಧಾರ ವಿರೋಧಿಸಿ ಪಟ್ಟಣದಲ್ಲಿ ಸೋಮವಾರ ಬಂಜಾರ ಸಮಾಜದವರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಸರ್ಕಲ್ ಇನ್ ಸ್ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರು ಕಲ್ಲೇಟಿನಿಂದ ಗಾಯಗೊಂಡಿದ್ದಾರೆ. ಉದ್ರಿಕ್ತರು ಬಿಜೆಪಿ ಸಂಸದೀಯ ಮಂಡಳಿ ...
ಪರಿಶಿಷ್ಟ ಸಮುದಾಯಗಳಲ್ಲಿ ಒಳ ಮೀಸಲಾತಿ ನೀಡಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ವರದಿಯನ್ನು ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡುವ ನಿರ್ಧಾರವನ್ನು ವಿರೋಧಿಸಿ ಶಿಕಾರಿಪುರದಲ್ಲಿ ಸೋಮವಾರ ಬಂಜಾರ ಸಮಾಜದವರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಲಗೈ ಭಂಟನಂತೆ ಇದ್ದ ಶಿಗ್ಗಾಂವ್ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಸಂಸದ ಹಾಗೂ ಮಾಜಿ ಶಾಸಕ ಮಂಜುನಾಥ್ ಕುನ್ನೂರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಬಿಜೆಪಿಯ ಶೋಚನೀಯ ಸ್ಥಿತಿಗೆ ಇದು ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಚಿಂತಾಮಣಿ, ಕೆ ಆರ್ ಪೇಟ...
ಚಿಕ್ಕಬಳ್ಳಾಪುರ: ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆಗಬೇಕು ಎನ್ನುವ ಅಭಿಲಾಷೆಯಿಂದ ನಮ್ಮ ಪ್ರಧಾನಿಗಳು ನಿಯಮ ಸರಳಿಕರಣಗೊಳಿಸಿದ್ದರಿಂದ, ಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿಕ್ಕಬಳ್ಳಾಪುರ ಹೆಲಿಪ್ಯಾಡಿನಲ್ಲಿ ಮಾಧ್ಯಮದವ...
ತುಮಕೂರು: ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ವಿಧಾನಸಭಾ ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉಲ್ಲೇಖಿಸಿ ಸ್ಪೀಕರ್ ಕಾಗೇರಿ ಅವರಿಗಿಂದು ರಾಜೀನಾಮೆ ಸಲ್ಲಿಸಿದರು. ಕೆಲದಿನ...