ಅಟ್ಯಾಕ್: ಆಸ್ಪತ್ರೆಯಲ್ಲಿ ವೈದ್ಯನ ಮೇಲೆ ಮದ್ಯವ್ಯಸನಿ ರೋಗಿಯಿಂದ ಹಲ್ಲೆ - Mahanayaka

ಅಟ್ಯಾಕ್: ಆಸ್ಪತ್ರೆಯಲ್ಲಿ ವೈದ್ಯನ ಮೇಲೆ ಮದ್ಯವ್ಯಸನಿ ರೋಗಿಯಿಂದ ಹಲ್ಲೆ

14/09/2024

ತೆಲಂಗಾಣದ ಸಿಕಂದರಾಬಾದ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಕಿರಿಯ ವೈದ್ಯರ ಮೇಲೆ ರೋಗಿಯೊಬ್ಬರು ಹಲ್ಲೆ ನಡೆಸಿದ ಘಟನೆ ನಡೆದಿದೆ.

ದಾಳಿಕೋರನು ವೈದ್ಯರ ಕೈಯನ್ನು ಹಿಡಿದು ಅವಳ ಏಪ್ರನ್ ಅನ್ನು ಎಳೆದು ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ವೈದ್ಯಕೀಯ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ, ವೈದ್ಯರನ್ನು ಪರಿಸ್ಥಿತಿಯಿಂದ ರಕ್ಷಿಸಿದ್ದಾರೆ. ಈ ಘಟನೆಯು ವೈದ್ಯರು ಮತ್ತು ವೈದ್ಯಕೀಯ ರಂಗದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಗಾಂಧಿ ಆಸ್ಪತ್ರೆಯ ಉಪ ಅಧೀಕ್ಷಕ ಸುನಿಲ್ ಕುಮಾರ್ ಅವರ ಪ್ರಕಾರ, ಬನ್ಸಿಲಾಲ್ ಪೇಟೆಯ ಪ್ರಕಾಶ್ ಎಂಬ ರೋಗಿಯು ಸ್ನಾಯು ಸೆಳೆತದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಬಂದಿದ್ರು. ಪರೀಕ್ಷೆಗೆ ಮಾಡುತ್ತಿರುವಾಗ ಪ್ರಕಾಶ್ ಇದ್ದಕ್ಕಿದ್ದಂತೆ ಆಕ್ರಮಣಕಾರಿಯಾಗಿ ಮಹಿಳಾ ವೈದ್ಯರ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದ್ದಾನೆ ಎಂದು ಹೇಳಿದ್ದಾರೆ.

ಈ ಘಟನೆಯ ವೀಡಿಯೊ ಈಗ ವೈರಲ್ ಆಗಿದೆ. ಮದ್ಯಪಾನ ಮಾಡಿ ದಾಳಿ ಮಾಡಿರಬಹುದೆಂದು ಶಂಕಿಸಲಾಗಿದೆ.

ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ನಂತರ ಹಲ್ಲೆಕೋರನನ್ನು ವಶಕ್ಕೆ ಪಡೆಯಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ