ಮಹಾರಾಷ್ಟ್ರದ ಆಸ್ಪತ್ರೆಯೊಳಗೆ ಬೆತ್ತಲೆಯಾಗಿ ತಿರುಗಾಡಿದ ವೈದ್ಯ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರು ನಗ್ನವಾಗಿ ತಿರುಗಾಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕುಡಿತದ ಮತ್ತಿನಲ್ಲಿದ್ದ ವೈದ್ಯರು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳೀಯರ ಪ್ರಕಾರ ಈ ವೈದ್ಯರು ಮಾದಕ ವ್ಯಸನಿಯಾಗಿದ್ದು, ಔರಂಗಾಬಾದ್ ನಿಂದ 20 ಕಿ.ಮೀ ದೂರದಲ್ಲಿರುವ ಬಿಡ್ಕಿನ್ನ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.
ಸಿಸಿಟಿವಿ ದೃಶ್ಯಾವಳಿಗಳಲ್ಲಿ ಈ ವೈದ್ಯರು ಯಾವುದೇ ಬಟ್ಟೆಗಳಿಲ್ಲದೆ ಆಸ್ಪತ್ರೆಯ ಆವರಣದಲ್ಲಿ ಅಲೆದಾಡುತ್ತಿರುವುದನ್ನು ತೋರಿಸಿದೆ. ವಾಶ್ ರೂಮ್ ಒಳಗೆ ಹೋಗುವ ಮೊದಲು ಅವರು ಕಾರಿಡಾರ್ ನಲ್ಲಿ ಬಟ್ಟೆಯ ತುಂಡನ್ನು ಬೀಸುತ್ತಿರುವುದನ್ನು ಕಾಣಬಹುದು. ಛತ್ರಪತಿ ಸಂಭಾಜಿನಗರ ಜಿಲ್ಲೆಯ ಆರೋಗ್ಯ ಸೇವೆಗಳ ಮುಖ್ಯಸ್ಥ ದಯಾನಂದ್ ಮೋತಿಪಾವ್ಲೆ ಅವರು ಆಜ್ ತಕ್ ಟಿವಿ / ಇಂಡಿಯಾ ಟುಡೇ ಟಿವಿಗೆ ನೀಡಿದ ದೂರವಾಣಿ ಮೂಲಕ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಈ ವಿಷಯವನ್ನು ವೈದ್ಯಕೀಯ ಅಧೀಕ್ಷಕರಿಗೆ ವರದಿ ಮಾಡಲಾಗಿದ್ದು ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರತಿಪಾದಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth