ಮಾರುಕಟ್ಟೆಯಲ್ಲಿ ಜನರ ಮೇಲೆ ಹರಿಯಿತು ಕಾರು: ಓರ್ವ ಸಾವು; ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯುವತಿ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ರಾಷ್ಟ್ರ ರಾಜಧಾನಿಯ ಮಯೂರ್ ವಿಹಾರ್ ಹಂತ 3 ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ಜನರ ಮೇಲೆ ಹರಿದಿದೆ. ರಾತ್ರಿ ೯.೩೦ ರ ಸುಮಾರಿಗೆ ಈ ಘಟನೆ ನಡೆದಿದೆ.
ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಶಾಪಿಂಗ್ ನಲ್ಲಿ ನಿರತರಾಗಿದ್ದ ಜನರಿಗೆ ಅತಿವೇಗದ ಕಾರು ಡಿಕ್ಕಿ ಹೊಡೆಯುವುದನ್ನು ತೋರಿಸಿದೆ. ಈ ಘಟನೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಏಳು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲಿ ಅವರು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಕಾರಿನ ಚಾಲಕನಿಗೂ ಗಾಯಗಳಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ವರ್ಷ ನವೆಂಬರ್ ನಲ್ಲಿ ವೇಗವಾಗಿ ಚಲಿಸುತ್ತಿದ್ದ ಬಿಎಂಡಬ್ಲ್ಯು ಕಾರು ನಿಯಂತ್ರಣ ಕಳೆದುಕೊಂಡು ದಕ್ಷಿಣ ದೆಹಲಿಯ ಮಸ್ಜಿದ್ ಮೋತ್ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth