ಸಿಸಿಬಿ ಇನ್ಸ್ ಪೆಕ್ಟರ್ ತಿಮ್ಮೇಗೌಡ ಸಾವಿಗೆ ಶರಣು

ಬೆಂಗಳೂರು: ಸಿಸಿಬಿ ಇನ್ಸ್ ಪೆಕ್ಟರ್ ತಿಮ್ಮೇಗೌಡ(Inspector Thimmegowda) ಬಿಡದಿ ಬಳಿ ಸಾವಿಗೆ ಶರಣಾಗಿರುವ ಮಾಹಿತಿ ಲಭ್ಯವಾಗಿದೆ. ಇವರು ಸಿಸಿಬಿ (CCB) ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಯಾವ ಕಾರಣಕ್ಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಿಎಸ್ ಐ ಪರಶುರಾಮ್(PSI Parashuram) ಸಾವಿನ ಬಗ್ಗೆ ಸಾಕಷ್ಟು ವಿವಾದಗಳು ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಮತ್ತೋರ್ವ ಅಧಿಕಾರಿ ಸಾವಿಗೆ ಶರಣಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97