ಅಂತರಾಷ್ಟ್ರೀಯ, ಅಂತರರಾಜ್ಯ ಹಾಗೂ ಸ್ಥಳೀಯ ಡ್ರಗ್‌ ಜಾಲ ಬೇಧಿಸಿದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ

ccb police
08/05/2023

ಬೆಂಗಳೂರು:ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದಿಂದ ಅಂತರಾಷ್ಟ್ರೀಯ, ಅಂತರರಾಜ್ಯ ಹಾಗೂ ಸ್ಥಳೀಯ ಡ್ರಗ್‌ ಜಾಲವನ್ನು ಭೇದಿಸಿ ಸುಮಾರು 7 ಕೋಟಿ 6 ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ರೀತಿಯ ನಿಷೇಧಿತ
ಮಾದಕ ವಸ್ತುಗಳ ವಶ ಪಡಿಸಿಕೊಳ್ಳಲಾಗಿದೆ.

ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು, ವಿಲ್ಸನ್‌ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಡಗ್ ಪೆಡ್ಡಿಂಗ್‌ನಲ್ಲಿ ತೊಡಗಿದ್ದ ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಪಶ್ಚಿಮ ಬಂಗಾಳದ ಆರೋಪಿಯು ಸುಮಾರು 19 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿ ಮೋರ್ಟರ್ ಮತ್ತು ಉಬರ್‌ನಲ್ಲಿ ಕೆಲಸ ಮಾಡುತ್ತಿದ್ದು, ಈ ಪ್ರಕರಣದ ಇತರೆ ಆರೋಪಿಗಳು ಆಂದ್ರಪ್ರದೇಶದಿಂದ ತಂದುಕೊಡುವ ಹ್ಯಾಂಡ್ ಆಯಿಲ್ ಮತ್ತು ಗಾಂಜಾವನ್ನು ಅವರು ವಿಳಾಸಕ್ಕೆ ತಲುಪಿಸಿದರೆ ಪ್ರತಿ ಡೆಲಿವರಿಗೆ 1 ಸಾವಿರ ರೂ. ನಂತೆ ಈತನಿಗೆ ಕಮೀಷನರ್ ರೂಪದಲ್ಲಿ ಹಣವನ್ನು ನೀಡುತ್ತಿದ್ದರು, ಆರೋಪಿಗಳ ವಿರುದ್ಧ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.

ಮಾದಕ ದ್ರವ್ಯ ನಿಗ್ರಹ ದಳವು ಡ್ರಗ್ ಪಡ್ತರ್‌ಗಳ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿ, ಕಳೆದ ಒಂದು ತಿಂಗಳಿನಿಂದ ಸಂಗ್ರಹಿಸಲಾದ ಮಾಹಿತಿಗಳ ಆಧಾರದ ಮೇಲೆ ನೈಜೀರಿಯಾದ ಇಬ್ಬರು, ಐವರಿಕೋಸ್ಟ್ ದೇಶದ ಒಬ್ಬರು, ಕೇರಳದ 12 ಜನ, ಪಶ್ಚಿಮ ಬಂಗಾಳದ ಒಬ್ಬ ಆಂಧ್ರಪ್ರದೇಶದ ಒಬ್ಬ ಮತ್ತು ಬೆಂಗಳೂರಿನ ಇಬ್ಬರು ವ್ಯಕ್ತಿಗಳು ಸೇರಿದಂತೆ ಒಟ್ಟು 19 ಜನ ಡ್ರಗ್ ಪಡ್ತರ್‌ಗಳನ್ನು ಬಂಧಿಸಿ, ಅಂದಾಜು 7,06.00.000/-ರೂ ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಿಸಿಬಿಯ ಮಾದಕದ್ರವ್ವ ನಿಗ್ರಹ ದಳದ ಅಧಿಕಾರಿಗಳು ಬೇಗೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಡ್ರಗ್ಸ್ ಪೆಕ್ಲಿಂಗ್ ನಲ್ಲಿ ತೊಡಗಿದ್ದ ಕೇರಳದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದು, ಈ ಪ್ರಕರಣದ 1ನೇ ಆರೋಪಿಯು ಮೂಲತಃ ಕೇರಳದವನಾಗಿದ್ದು 6 ತಿಂಗಳ ಹಿಂದೆ ಬೆಂಗಳೂರಿನಲ್ಲಿ ಹೆಚ್‌ಡಿಎಫ್‌ಸಿ ಲೈಫ್ ಇನ್ಸೂರೆನ್ಸ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿರುತ್ತಾನೆ. ಆರೋಪಿಗಳು ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಆಂಧ್ರಪ್ರದೇಶದ ವೈಜಾಕ್‌ನಲ್ಲಿ ಅಕ್ರಮವಾಗಿ ಬೆಳೆಯಲಾಗುವ ವ್ಯಕ್ತಿಗಳನ್ನು ಸಂಪರ್ಕದಲ್ಲಿಟ್ಟುಕೊಂಡು ಅಲ್ಲಿಂದ ಕಡಿಮೆ ಬೆಲೆಗೆ ಗಾಂಡಾ ಮತ್ತು ಪ್ಯಾಫಿಕ್ ಆಯಿಲ್ ಅನ್ನು ಖರೀದಿಸಿ ಅವುಗಳನ್ನು ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ತಮ್ಮ ಕಾರಿನ ಡಿಕ್ಕಿಯಲ್ಲಿ ಇಟ್ಟುಕೊಂಡು ಬೆಂಗಳೂರಿಗೆ ಸಾಗಿಸಿ ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುತ್ತಾರೆ. ಇವರ ವಿರುದ್ಧ ಬೇಗೂರು ತನಿಖೆಯಲ್ಲಿರುತ್ತದೆ. ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿ

ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೆಸಿ ಆಶೋಕ್‌ನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಡ್ರಗ್ ಪೆಡ್ಡಿಂಗ್‌ನಲ್ಲಿ ತೊಡಗಿದ್ದ ಕೇರಳ ಮೂಲದ 7ಜನ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿದ್ದು, ಆರೋಪಿಗಳು ಬೆಂಗಳೂರಿನಲ್ಲಿ ನೆಲೆಸಿರುವ ಆಫ್ರಿಕನ್‌ ಪ್ರಜೆಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್‌ಗಳನ್ನು ಖರೀಧಿಸಿ, ಡೆಂಜೋ ಮತ್ತು ಪೋರ್ಟರ್ ಅಪ್ಲಿಕೇಷನ್ ಮುಖಾಂತರ ಗಿರಾಕಿಗಳನ್ನು ಬುಕ್ ಮಾಡಿಕೊಂಡು ಜಿಲೆಟ್ ಮತ್ತು ಇತರೆ ವಸ್ತುಗಳ ಗಿಫ್ಟ್‌ಬಾಕ್‌ನ ಒಳಗೆ ಡಸ್ಟ್ ಅನ್ನು ಪ್ಯಾಕ್ ಮಾಡಿ ತಮ್ಮ ಗಿರಾಕಿಗಳಿಗೆ ಕಳುಹಿಸುತ್ತಿದ್ದರು. ಡಕ್ಸ್‌ಗಳನ್ನು ಪಡೆದುಕೊಂಡ ಗಿರಾಕಿಗಳು ಅದೇ ಬಾಕ್ಸ್‌ಗಳಲ್ಲಿ ಹಣವನ್ನು ಇಟ್ಟು ಪ್ಯಾಕ್ ಮಾಡಿ DUNZO PORTER ಮಾಡಿದ ವಿಳಾಸಕ್ಕೆ ವಾಪಸ್‌ ಕಳುಹಿಸುತ್ತಿದ್ದರು ಇವರ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಸ್.ಡಿ.ಪಿಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ಸಿಸಿಬಿಯ ಮಾದಕದ್ರಪ್ಪ ನಿಗ್ರಹ ದಳದ ಅಧಿಕಾರಿಗಳು ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ನೈಜೀರಿಯಾ ಮತ್ತು ಐವರಿಕೋಸ್ಟ್ ಮೂಲದ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದು ಸದರಿ ಆರೋಪಿಗಳು ಟೂರಿಸ್ಟ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು ಆಫ್ರಿಕನ್‌ ಕಿಚನ್‌ಗಳ ಬಳಿ ಬರುವ ವಿದೇಶಿ ಪ್ರಜೆಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್‌ಗಳನ್ನು ಖರೀಧಿ ಮಾಡಿ ಪರಿಚಯಸ್ಥ ಗಿರಾಕಿಗಳಿಗೆ ಮಾರಾಟ ಮಾಡಿ ಆಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುತ್ತಾರೆ. ಇವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿಎಸ್‌ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿದ್ದು ತನಿಖೆಯಲ್ಲಿರುತ್ತದೆ.

ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಸಿದ್ದಾಪರ ಪೊಲೀಸ್ ಪಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಡಗ್ ಪೆಡ್ಡಿಂಗ್‌ನಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಬಂಧಿತ ಆರೋಪಿಯು 4 ವರ್ಷಗಳ ಹಿಂದೆ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು ತಿಂಗಳಿನಿಂದ ಬೆಂಗಳೂರಿನಲ್ಲಿ ನೆಲೆಸಿರುತ್ತಾನೆ. ಈತನು ಆಫ್ರಿಕನ್ ಪ್ರಜೆಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್‌ಗಳನ್ನು ಖರೀಧಿಸಿ ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುತ್ತಾನೆ. ಈತನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿರುತ್ತದೆ.

ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಪುಲಿಕೇಶಿನಗರ ಪೊಲೀಸ್ ತಾಕಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಡಗ್‌ ಪೆಡ್ಡಿಂಗ್‌ನಲ್ಲಿ ತೊಡಗಿದ್ದ ಸ್ಥಳೀಯ ವ್ಯಕ್ತಿಯನ್ನು ಬಂಧಿಸಿದ್ದು, ಬೆಂಗಳೂರಿನಲ್ಲಿ ನೆಲೆಸಿರುವ ಆಫ್ರಿಕ ಮೂಲದ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಡ್ರಗ್ಸ್‌ಗಳನ್ನು ಖರೀಧಿಸಿ ಅವುಗಳನ್ನು ಹೆಚ್ಚಿನ ಬೆಲೆಗೆ ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುತ್ತಾನೆ, ಈತನ ವಿರುದ್ಧ ಪುಲಿಕೇಶಿನಗರ ಪೊಲೀಸ್‌ ಠಾಣೆಯಲ್ಲಿ ಎಸ್.ಡಿ.ಪಿಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೆಸಿ ಹೆಣ್ಣೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಡಗ್ ಪೆಡ್ಲಿಂಗ್‌ ನಲ್ಲಿ ತೊಡಗಿದ್ದ ಕೇರಳ ಮೂಲದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಬೆಂಗಳೂರಿನಲ್ಲಿ ನೆಲೆಸಿರುವ ಕೇರಳ ರಾಜ್ಯದ ಮತ್ತೊಬ್ಬ ವ್ಯಕ್ತಿಯಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀಧಿ ಮಾಡಿ ಡ್ರಗ್ ಪೆಡ್ಲ್ನಲ್ಲಿ ತೊಡಗಿರುತ್ತಾರೆ. ಇವರ ವಿರುದ್ಧ ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ಎಸ್.ಡಿ.ಪಿಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಕೆ.ಆರ್.ಪುರ ಪೊಲೀಸ್ ತಾಕಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಕೇರಳದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಇವರು ಬೆಂಗಳೂರಿನ ಸ್ಥಳೀಯ ಐಟಿ/ಬಿಟಿ ಉದ್ಯೋಗಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡಿಸುತ್ತಿದ್ದರು.

ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಕೇರಳದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಇವರು ಬೆಂಗಳೂರಿನ ಸ್ಥಳೀಯ ಐಟಿ ಬಿಟಿ ಉದ್ಯೋಗಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡಿಸುತ್ತಿದ್ದರು. ಇವರ ವಿರುದ್ಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.
ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಡ್ರಗ್ಸ್ ಶೆಡ್ಡಿಂಗ್ ನಲ್ಲಿ ತೊಡಗಿದ್ದ ಕೇರಳ ಮೂಲದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು,

ಈತನು ಮೂಲತಃ ಕೊಡಗು ಜಿಲ್ಲೆಯವನಾಗಿದ್ದು 6 ತಿಂಗಳ ಹಿಂದೆ ZOMATO ಡೆಲಿವರಿ ಬಾಯ್ ಆಗಿ ಕೆಲಸಕ್ಕೆ
ಸೇರಿದ್ದು, ಈತನು ಕೇರಳದ ಮತ್ತೊಬ್ಬ ವ್ಯಕ್ತಿಯಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀಧಿ ಮಾಡಿ
ಅವುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುತ್ತಾನೆ. ಅವರ ವಿರುದ್ಧ
ಯಲಹಂಕ ಪೊಲೀಸ್‌ ಠಾಣೆಯಲ್ಲಿ ಎನ್.ಡಿ.ಪಿಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಆರ್.ಟಿ.ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಸ್ಥಳೀಯ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು ಈತನು ತನ್ನ ಸ್ನೇಹಿತನೊಂದಿಗೆ ಸೇರಿ ಕಡಿಮೆ ಬೆಲೆಗೆ ಡ್ರಗ್ಸ್ ಅನ್ನು ಖರೀಧಿಸಿ ಪರಿಚಯಸ್ಥ ಗಿರಾಕಿಗಳಿಗೆ ಸರಬರಾಜು ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದನು ಈತನ ವಿರುದ್ಧ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿಎಸ್‌ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ಮೇಲ್ಕಂಡ ಪ್ರಕರಣಗಳಲ್ಲಿ ಬಂಧಿತ ಆರೋಪಿಗಳು ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀಧಿ ಮಾಡಿ ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ ವಿದ್ಯಾರ್ಥಿಗಳಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾನೆಯಲ್ಲಿ ತೊಡಗಿರುತ್ತಾರೆ. ಬಂಧಿತ ಆರೋಪಿಗಳ ವಿರುದ್ಧ ಬೆಂಗಳೂರಿನ ಅಶೋಕ್‌ ನಗರ, ಹೆಣ್ಣೂರು, ಮಲಿಕೇಶಿನಗರ, ಕೆ.ಆರ್.ಪುರ, ಯಲಹಂಕ, ಬೇಗೂರು, ಆರ್.ಟಿ.ನಗರ, ಬಾಣಸವಾಡಿ, ವಿಲ್ಸನ್‌ಗಾರ್ಡನ್‌ ಮತ್ತು ಸಿದ್ದಾಪುರ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ-1985 ರೀತ್ಯಾ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version