ಸಿಸಿಬಿ ಕಾರ್ಯಾಚರಣೆ: ಅನಧಿಕೃತವಾಗಿ ಸಂಗ್ರಹಿಸಿಡಲಾಗಿದ್ದ ಫಾರಿನ್ ಸಿಗರೇಟ್ ಗೋಡೌನ್ ಮೇಲೆ ದಾಳಿ - Mahanayaka
12:51 AM Wednesday 22 - October 2025

ಸಿಸಿಬಿ ಕಾರ್ಯಾಚರಣೆ: ಅನಧಿಕೃತವಾಗಿ ಸಂಗ್ರಹಿಸಿಡಲಾಗಿದ್ದ ಫಾರಿನ್ ಸಿಗರೇಟ್ ಗೋಡೌನ್ ಮೇಲೆ ದಾಳಿ

17/06/2023

ಸುಮಾರು 14,90,500/-ರೂ ಮೌಲ್ಯದ ವಿವಿಧ ಕಂಪನಿಗಳ 4650 ಫಾರಿನ್ ಸಿಗರೇಟ್ ಪ್ಯಾಕ್‌ ಗಳ ವಶಪಡಿಸಲಾಗಿದೆ.

ನಗರ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ದಿನಾಂಕ 14- 2023 ರಂದು ಉಪ್ಪಾರಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಿಷೇಧವಾಗಿರುವ ವಿದೇಶಿ ಕಂಪನಿಗಳ ಸಿಗರೇಟ್‌ಗಳನ್ನು ಅನಧಿಕೃತವಾಗಿ ಸಂಗ್ರಹಿಸಿಡಲಾಗಿದ್ದ ಗೋಡೌನ್‌ ಮೇಲೆ ದಾಳಿ ಕಾರ್ಯಾಚರಣೆ ನಡೆಸಿ ಸುಮಾರು 14,00,500/-ರೂ ಮೌಲ್ಯದ ವಿವಿಧ ಕಂಪನಿಗಳ 1650 ಪ್ಯಾಕ್ ಫಾರಿನ್ ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಯು ಭಾರತ ಸರ್ಕಾರದಿಂದ ನಿಷೇಧವಾಗಿರುವ ವಿದೇಶಿ ಸಿಗರೇಟ್‌ಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಾ ಅಕ್ರಮ ಲಾಭಗಳಿಸುತ್ತಿದುದ್ದಲ್ಲದೇ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುತ್ತಿದ್ದನು. ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಉಪ್ಪಾರ ಪೇಟೆ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ