ಸಿಸಿಬಿ ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರ ಬಂಧನ

ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿರುವ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಇಬ್ಬರು ವ್ಯಕ್ತಿಗಳು ಬೈಕ್ ವೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರೆಂದು ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಅಕ್ರಮ ಪಿಸ್ತೂಲ್ ಹೊಂದಿದ ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್ ಹಾಗೂ ಯಶವಂತ್ ಕುಮಾರ್ ಎಂಬುವವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅವರಿಂದ ಪಿಸ್ತೂಲ್-1, ಮೊಬೈಲ್ ಫೋನುಗಳು-2, ಹಾಗೂ ಹೀರೋ ಹೊಂಡಾ ಫ್ಯಾಶನ್ ಪ್ಲಸ್ ಬೈಕ್ ನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,45,000/- ಆಗಬಹುದು. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಪೈಕಿ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇನ್ನೋರ್ವ ಆರೋಪಿ ಯಶವಂತ ಕುಮಾರ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಪ್ರಕರಣ ಹಾಗೂ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿದೆ. ಈ ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ, ಎಎಸ್ಐ ಮೋಹನ್ ಕೆ.ವಿ. ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw