ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು! - Mahanayaka

ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು!

manglore
09/06/2023

ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಮಂಗಳೂರಲ್ಲಿ ಬಂಧಿಸಿದ್ದಾರೆ. ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಹೊಂದಿಕೊಂಡು ಕಾರಿನಲ್ಲಿ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ವನ್ನು ಕಾರಿನಲ್ಲಿ ಖರೀದಿಸಿಕೊಂಡು ಮಂಗಳೂರಿಗೆ ಬಂದು ಮಂಗಳೂರು ನಗರದ ನೆಹರೂ ಮೈದಾನ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ಮಂಗಳೂರು ನಗರದ ನೆಹರೂ ಮೈದಾನ ಪರಿಸರದಲ್ಲಿ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಮಹಮ್ಮದ್ ಆಶ್ರಫ್ @ ಚೋಟಾ ಆಶ್ರಫ್(43) ಹಾಗೂ
ದಾವೂದ್ ಫರ್ವೆಝ್ ಎಂಬುವವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಒಟ್ಟು 55.5 ಗ್ರಾಂ ತೂಕದ ರೂ. 2,77,500 ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್, ನಗದು 3230, ಸಿಲ್ವರ್ ಬಣ್ಣದ ಮಾರುತಿ ಬೆಲೆನೊ ಕಾರು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಗಳು, ನಗದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರಿನ ಒಟ್ಟು ಮೌಲ್ಯ 13,06,230 ಆಗಬಹುದು. ಈ ಬಗ್ಗೆ ಆರೋಪಿಗಳ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ಅಶ್ರಫ್ @ ಛೋಟಾ ಅಶ್ರಫ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆ ಹಾಗೂ ಬಂಟ್ವಾಳ ಠಾಣೆಯಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿದೆ.

ಇನ್ನೋರ್ವ ಆರೋಪಿ ದಾವೂದ್ ಪರ್ವೇಸ್ ವಿರುದ್ದ ಮಂಗಳೂರು ಉತ್ತರ, ಮಂಗಳೂರು ಗ್ರಾಮಾಂತರ, ಕಾರ್ಕಳ, ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ