ಇ-ಸಿಗರೇಟ್, ಬಿಡಿಭಾಗಗಳ ಅಕ್ರಮ ಮಾರಾಟ: 5 ಲಕ್ಷ ರೂ. ಮೌಲ್ಯದ ವಸ್ತು ವಶಪಡಿದ ಸಿಸಿಬಿ ಮಹಿಳಾ ಸಂರಕ್ಷಣಾ ದಳ

ಬೆಂಗಳೂರು ನಗರ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ನಿಷೇದಿತವಾಗಿರುವ ಇ-ಸಿಗರೇಟ್ ಕಂಪನಿಯ ಸಿಗರೇಟ್, ಇ-ಸಿಗರೇಟ್, ಸಿಗರೇಟ್ ಕಂಪನಿಯ ಪಾಡ್, ಬ್ಯಾಟರಿ ಮತ್ತು ಇತರೆ ಬಿಡಿಭಾಗಗಳನ್ನು, ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ನಗರದ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಖಚಿತ ಮಾಹಿತಿಯನ್ನಾಧರಿಸಿ ಬೆಂಗಳೂರಿನ ಎಂ.ಜಿ.ರಸ್ತೆಯ ಚರ್ಚ್ ಸ್ಟ್ರೀಟ್ ಎಂಪೈರ್ ಹೋಟೆಲ್ ಎದುರು ಭಾಗದಲ್ಲಿರುವ ಸ್ಟೋಕ್ ಶಾಪ್ ಅಂಗಡಿಯಲ್ಲಿ ಭಾರತದಲ್ಲಿ ಮಾರಾಟವನ್ನು ನಿಷೇದಿಸಿರುವ ಎಲೆಕ್ನಿಕ್ ಸಿಗರೇಟ್ ಮತ್ತು ಇದಕ್ಕೆ ಭರ್ತಿ ಮಾಡುವ ಇತರೆ ಫಿಲಿಂಗ್ ವಸ್ತುಗಳು ಹಾಗೂ ವಿದೇಶಿ ಸಿಗರೇಟ್ ಮಾರಾಟಗಾರರ ಮೇಲೆ ದಾಳಿ ನಡೆಸಿದ್ದಾರೆ.
ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ಟೋಕ್ ಶಾಪ್ ಅಂಗಡಿಯ ಮೇಲೆ ದಾಳಿ ಮಾಡಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿಕೊಂಡು ಆರೋಪಿಗಳಿಂದ 5 ಲಕ್ಷ ಮೌಲ್ಯ ಬೆಲೆಬಾಳುವ ಇ ಸಿಗರೇಟ್ ಮತ್ತು ಅದರ ಬಿಡಿಭಾಗಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಕೇಂದ್ರ ಸರ್ಕಾರದಿಂದ ನಿಷೇದವಾಗಿರುವ ಇ ಸಿಗರೇಟ್, ಇ ಸಿಗರೇಟ್ ಲಿಕ್ವಿಡ್ ಮತ್ತು ಅದರ ಬಿಡಿಭಾಗಗಳನ್ನು ಹೊರ ದೇಶದಿಂದ ಅಕ್ರಮವಾಗಿ ಭಾರತಕ್ಕೆ ತಂದು ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದು, ಆರೋಪಿಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw