ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಘಟನೆ ನಡೆದು 1 ಗಂಟೆಯಲ್ಲಿ ಬಂಧಿಸಿದ ಬೆಂಗಳೂರು ಪೊಲೀಸರು - Mahanayaka
9:19 PM Wednesday 11 - September 2024

ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಘಟನೆ ನಡೆದು 1 ಗಂಟೆಯಲ್ಲಿ ಬಂಧಿಸಿದ ಬೆಂಗಳೂರು ಪೊಲೀಸರು

28/10/2020

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಬೆಂಗಳೂರು ಪೊಲೀಸರು ಕೇವಲ 1 ಗಂಟೆಯೊಳಗೆ ಬಂಧಿಸಿದ ಘಟನೆ ನಡೆದಿದ್ದು, ಸಿಸಿ ಕ್ಯಾಮರ ದೃಶ್ಯಗಳು ಆರೋಪಿಯ ಬಂಧನಕ್ಕೆ ಸಹಕಾರಿಯಾಯಿತು.


ಬೆಂಗಳೂರಿನ ಜೆ.ಸಿ.ನಗರದ ಕಿರಿದಾದ ಪ್ರದೇಶದಲ್ಲಿ 40 ವರ್ಷದ ಮಹಿಳೆಯೊಬ್ಬರು ನಡೆಯುತ್ತಾ ಹೋಗುತ್ತಿದ್ದ ಸಂದರ್ಭದಲ್ಲಿ 20 ವರ್ಷದ ಆರೋಪಿ ರತನ್ ದತ್ ಎಂಬಾತ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಮುಂದಾಗಿದ್ದಾನೆ. ಈ ವೇಳೆ ಮಹಿಳೆ ಆತನಿಗೆ ಚಪ್ಪಳಿ ತೋರಿಸಿದ್ದಾಳೆ. ಈ ವೇಳೆ ಆರೋಪಿ ಅವಳು ಮುಂದೆ ಹೋಗದಂತೆ ದಾರಿಗೆ ಅಡ್ಡವಾಗಿ ನಿಂತಿದ್ದಾನೆ. ಮತ್ತು ಮಹಿಳೆಯನ್ನು ಹಿಂದಕ್ಕೆ ತಳ್ಳಿದ್ದಾನೆ. ಈ ವೇಳೆ ಮಹಿಳೆ ಸಹಾಯಕ್ಕಾಗಿ ಕಿರುಚುತ್ತಲೇ ಆರೋಪಿಗೆ ಚಪ್ಪಳಿಯಲ್ಲಿ ಹೊಡೆದಿದ್ದಾರೆ. ಮಹಿಳೆಯ ಕಿರುಚಾಟ ಕೇಳಿ ಅಕ್ಕಪಕ್ಕ ಮನೆಯವರು ಕಿಟಕಿ ಬಾಗಿಲು ತೆರೆದಿದ್ದು, ಈ ವೇಳೆ ಆರೋಪಿ ಓಡಿ ಹೋಗಿದ್ದಾನೆ. ಇದರ ದೃಶ್ಯಾವಳಿಗಳು ಸಿಸಿ ಕ್ಯಾಮರದಲ್ಲಿ ಸೆರೆಯಾಗಿವೆ.


ಘಟನೆಯ ಬಗ್ಗೆ ಮಹಿಳೆ ದೂರು ನೀಡಿದ ತಕ್ಷಣವೇ ಪೊಲೀಸರು ಘಟನಾ ಸ್ಥಳದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಗಳನ್ನು ಪರಿಶೀಲಿಸಿದ್ದಾರೆ.  ಆರೋಪಿಗಳ ಚೆಹರೆ ಪತ್ತೆ ಹಚ್ಚಿದ ಬಳಿಕ ಜೆ.ಸಿ.ನಗರ ಬಸ್ ನಿಲ್ದಾಣದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಆರೋಪಿಗಳನ್ನು ಗುರುತಿಸಿದ್ದಾರೆ. ತಕ್ಷಣವೇ ಮಾಹಿತಿ ಪಡೆದ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ನಡೆದು ಒಂದು ಗಂಟೆಯಲ್ಲಿಯೇ ಆರೋಪಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರಿಗೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.



Provided by

ಇತ್ತೀಚಿನ ಸುದ್ದಿ