ಭಾರತ ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ

ನವದೆಹಲಿ: ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಭಾರತ ಆಪರೇಷನ್ ಸಿಂಧೂರ ನಡೆಸಿತ್ತು. ಭಾರತ ಪಾಕ್ ನಡುವೆ ಯುದ್ಧದ ಸನ್ನಿವೇಶ ಸೃಷ್ಟಿಯಾಗಿತ್ತು. ಇದೀಗ ಎರಡೂ ದೇಶಗಳೂ ಕದನ ವಿರಾಮ ಘೋಷಣೆ ಮಾಡಿದ್ದು, ಈ ಮೂಲಕ ಎರಡೂ ದೇಶಗಳ ನಡುವೆ ಶಾಂತಿ ನೆಲೆಸುವ ಸಾಧ್ಯತೆ ಕಂಡು ಬಂದಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮವನ್ನು ಭಾರತ ದೃಢಪಡಿಸಿದೆ. ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಗೆ ಬರಲಿದೆ. ಎರಡು ದೇಶಗಳ ನಡುವೆ ನೇರವಾಗಿ ಒಪ್ಪಂದವಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಇನ್ನೂ ಇದಕ್ಕೂ ಮೊದಲು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ತಿಳಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: