ಮುಸ್ಲಿಮ್ ಮಹಿಳೆಯರ ಜೊತೆ ರಕ್ಷಾ ಬಂಧನ ಆಚರಿಸಿ: ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಸೂಚನೆ - Mahanayaka

ಮುಸ್ಲಿಮ್ ಮಹಿಳೆಯರ ಜೊತೆ ರಕ್ಷಾ ಬಂಧನ ಆಚರಿಸಿ: ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಸೂಚನೆ

modi
02/08/2023


Provided by

ಮುಂಬರುವ ರಕ್ಷಾ ಬಂಧನ ಹಬ್ಬದಲ್ಲಿ ಸಾಧ್ಯವಾದಷ್ಟು ಮುಸ್ಲಿಂ ಮಹಿಳೆಯರನ್ನು ತಲುಪುವಂತೆ ಅವರು  ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

ಬಿಜೆಪಿ ಹಾಗೂ ಎನ್ ಡಿಎ ಮಿತ್ರಕೂಟ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಪೂರ್ವಾಭಾವಿ ಸಿದ್ಧತೆಗಳನ್ನು ನಡೆಸುತ್ತಿದೆ ಇದೇ ವೇಳೆ ಮುಸ್ಲಿಮ್ ಮಹಿಳೆಯರನ್ನೊಳಗೊಂಡು ರಕ್ಷಾ ಬಂಧನ ಆಚರಿಸಲು ಪ್ರಧಾನಿ ಪಕ್ಷದ ಕಾರ್ಯಕರ್ತರಿಗೆ  ಸೂಚಿಸಿದ್ದಾರೆ.

ತ್ರಿವಳಿ ತಲಾಖ್ ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರವು ಮುಸ್ಲಿಂ ಮಹಿಳೆಯರಲ್ಲಿ ಭದ್ರತೆಯ ಭಾವನೆಯನ್ನು ಹೆಚ್ಚಿಸಿದೆ. ಈ ಬಾರಿ ಮುಸ್ಲಿಂ ಸಹೋದರಿಯರ ಜತೆ ರಕ್ಷಾ ಬಂಧನ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದಾರೆ.

ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್‌ನ ಬಿಜೆಪಿ ನೇತೃತ್ವದ ಎನ್ ಡಿಎ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿ ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ತಲುಪಲು ರಕ್ಷಾ ಬಂಧನದ ಸಂದರ್ಭದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಪ್ರಧಾನಿ ಕೇಳಿಕೊಂಡರು ಎಂದು ಸಭೆಯಲ್ಲಿದ್ದ ಕೆಲವು ಸಂಸದರು ಹೇಳಿದರು. ರಕ್ಷಾ ಬಂಧನದ ಹಬ್ಬವು ಈ ವರ್ಷ ಆಗಸ್ಟ್ 30 ರಂದು ನಡೆಯಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ