ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮ ಸಡಗರದ ‘ಈದುಲ್ ಫಿತ್ರ್’ ಹಬ್ಬ ಆಚರಣೆ - Mahanayaka

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮ ಸಡಗರದ ‘ಈದುಲ್ ಫಿತ್ರ್’ ಹಬ್ಬ ಆಚರಣೆ

eid
22/04/2023


Provided by

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು.

ಉಡುಪಿ ನಗರ ಕಾಪು ಬ್ರಹ್ಮಾವರ ಕುಂದಾಪುರ ಬೈಂದೂರ್ ಹೆಬ್ರಿ ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಂ ಬಾಂಧವರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು.

ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.

ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ  ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ವೌಲಾನ ಕರಾರ್ ಹುಸೇನ್  ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು.

ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ,  ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನ ಅಬ್ದುಲ್ ಮತಿನ್ ಸಿದ್ದಿಕಿ ಅವರ ನೇತೃತ್ವದಲ್ಲಿ ವಿಶೇಷ ನಮಾಝ್ ನಿರ್ವಹಿಸಲಾಯಿತು. ಇದರಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಧರ್ಮಗುರುಗಳು ಈದ್ ಸಂದೇಶ ನೀಡಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು. ನೆಲದ ಕಾನೂನನ್ನು ಗೌರವಿಸಿ ಶಾಂತಿ ಯ ವಾತಾವರಣ ಕಾಪಾಡುವಂತೆ ಕರೆ ನೀಡಿದರು. ಹಬ್ಬದ ದಿನ ಯಾವುದೇ ಅಹಿತಕರ ಘಟನೆ ನಡೆದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ