ಸಿಮೆಂಟ್ ಲಾರಿ—ಬುಲೆರೋ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಜೀವ ದಹನ

ಕೊಪ್ಪಳ: ಸಿಮೆಂಟ್ ಮಿಕ್ಸರ್ ಯಂತ್ರದ ಲಾರಿ ಮತ್ತು ಬುಲೆರೋ ಪಿಕಪ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬುಲೆರೋ ವಾಹನಕ್ಕೆ ಬೆಂಕಿ ಹತ್ತಿಕೊಂಡು ಇಬ್ಬರು ಸಜೀವ ದಹನವಾದ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಕ್ರಾಸ್ ಬಳಿ ನಡೆದಿದೆ.
ಲಿಂಗಸಗೂರು ತಾಲೂಕಿನ ತೊಡಕಿ ಗ್ರಾಮದ ಸಿದ್ದಪ್ಪ ಪೊಲೀಸಗೌಡರ(25) ಹಾಗೂ ಅಂಜನಪ್ಪ ಪೊಲೀಸ್ ಗೌಡರ(26) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಗುರುವಾರ ಬೆಳಗ್ಗೆ 4 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಸಿಮೆಂಟ್ ಮಿಕ್ಸರ್ ಯಂತ್ರದ ಲಾರಿ ಕುಷ್ಟಗಿ ಕಡೆ ಹೊರಟಿತ್ತು. ಇದೇ ವೇಳೆ ಕುಷ್ಟಗಿ ತರಕಾರಿ ಮಾರುಕಟ್ಟೆಗೆ ತರಕಾರಿ ಹಾಕಿ ಲಿಂಗಸಗೂರು ಕಡೆಗೆ ಬುಲೆರೋ ಹೊರಟಿತ್ತು. ಈ ನಡುವೆ ಎರಡೂ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಬುಲೆರೊ ವಾಹನಕ್ಕೆ ಬೆಂಕಿ ಹತ್ತಿಕೊಂಡು ಇಬ್ಬರು ಸಜೀವ ದಹನವಾಗಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ ಯಶವಂತ ಬಿಸನಳ್ಳಿ, ತಾವರಗೇರಾ ಪಿಎಸ್ ಐ ಸೇರಿದಂತೆ ಅಗ್ನಿಶಾಮಕ ದಳ ಅಧಿಕಾರಿ ತಿಮ್ಮಾರೆಡ್ಡಿ ಭೇಟಿ ನೀಡಿ, ಪರಿಶೀಲಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: