ಸೆಂಟ್ರಲ್ ಬ್ಯಾಂಕ್ ನಲ್ಲಿ ಖಾಲಿ ಇದೆ 1,000 ಹುದ್ದೆಗಳು: ಅರ್ಜಿ ಸಲ್ಲಿಸುವುದು ಹೇಗೆ? - Mahanayaka

ಸೆಂಟ್ರಲ್ ಬ್ಯಾಂಕ್ ನಲ್ಲಿ ಖಾಲಿ ಇದೆ 1,000 ಹುದ್ದೆಗಳು: ಅರ್ಜಿ ಸಲ್ಲಿಸುವುದು ಹೇಗೆ?

Central Bank Job
01/02/2025

Central Bank Credit Officer Recruitment 2025 — ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಟ್ಟು 1,000 ಕ್ರೆಡಿಟ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಅಧಿಸೂಚನೆ ಹೊರಡಿಸಿದೆ.

ಈ ಹುದ್ದೆಗಳ ನೇಮಕಾತಿಗೆತಿಗೆ ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕೂಡ ಆರಂಭವಾಗಿದ್ದು, ಫೆಬ್ರವರಿ 20ನೇ ತಾರೀಕು ಕೊನೆಯ ದಿನಾಂಕವಾಗಿದೆ. ಸೆಂಟ್ರಲ್ ಬ್ಯಾಂಕ್ ನ ಈ ಒಂದು ಬೃಹತ್ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಯಾವೆಲ್ಲ ಅಭ್ಯರ್ಥಿಗಳು ಅರ್ಹರಿರುತ್ತಾರೆ ಮತ್ತು ಅರ್ಜಿ ಸಲ್ಲಿಸಲು ಬೇಕಾದ ಪ್ರಕ್ರಿಯೆಯ ವಿವರ ಇಲ್ಲಿದೆ..

ಅರ್ಜಿ ಸಲ್ಲಿಸಲಿಕ್ಕೆ ಇರಬೇಕಾದ ಅರ್ಹತೆಗಳು :

ಸೆಂಟ್ರಲ್ ಬ್ಯಾಂಕಿನಲ್ಲಿ ಖಾಲಿ ಇರುವ ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸುವುದಾದರೆ, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ನೀವು ಪದವಿ ಶಿಕ್ಷಣ ಮುಗಿಸಿರಬೇಕು. ಅದೇ ರೀತಿ ನಿಮ್ಮ ವಯೋಮಿತಿಯು ಕನಿಷ್ಠ 20 ವರ್ಷದಿಂದ 30 ವರ್ಷದ ಒಳಗಿರಬೇಕು.

ನೀವು ಮೀಸಲಾತಿ ವರ್ಗದವರಾಗಿದ್ದರೆ ನಿಮಗೆ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆಯಾದರೆ ಸಿಗುವ ಸಂಬಳ : 48,480ರೂ.ಯಿಂದ 85,920ರೂ. ವರೆಗೆ ಸಿಗಲಿದೆ.

ಅರ್ಜಿ ಶುಲ್ಕ :

* ಪ.ಜಾತಿ,  ಪ.ಪಂಗಡ, ಅಂಗವಿಕಲ ಹಾಗೂ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ –- ರೂ. 150

* ಮೇಲಿನ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ -– ರೂ. 750

ಅರ್ಜಿ ಸಲ್ಲಿಸಲು ಬೇಕಾದ ಲಿಂಕ್:  https://ibpsonline.ibps.in/cbicojan25/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ