ಸೆಂಟ್ರಲ್ ಬ್ಯಾಂಕ್ ನಲ್ಲಿ 253 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ನೇಮಕಾತಿ ಆರಂಭ: ನೀವು ಅರ್ಜಿ ಸಲ್ಲಿಸಿ - Mahanayaka
4:33 PM Thursday 5 - December 2024

ಸೆಂಟ್ರಲ್ ಬ್ಯಾಂಕ್ ನಲ್ಲಿ 253 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ನೇಮಕಾತಿ ಆರಂಭ: ನೀವು ಅರ್ಜಿ ಸಲ್ಲಿಸಿ

central bank
25/11/2024

Central Bank Specialist Officer Jobs — ದೇಶದ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿರುವಂತಹ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಖಾಲಿ ಇರುವ 253 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದೆ.

ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯ ಹಾಗೂ ಅರ್ಜಿ ಸಲ್ಲಿಸುವ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

ನಿಗದಿಪಡಿಸಿದ ಅರ್ಹತೆಗಳು :

ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ವಿಷಯದಲ್ಲಿ ಅಥವಾ ವಿಭಾಗದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆಯೊಂದಿಗೆ ಅಭ್ಯರ್ಥಿಗಳು ನಾಲ್ಕರಿಂದ ಎಂಟು ವರ್ಷದ ಸೇವಾನುಭವ ಹೊಂದಿರಬೇಕು.

ವಯೋಮಿತಿ ಅರ್ಹತೆ ನೋಡುವುದಾದರೆ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 23 ರಿಂದ 40 ವರ್ಷದ ವಯೋಮಿತಿಯಲ್ಲಿರಬೇಕು.

ಅರ್ಜಿ ಸಲ್ಲಿಕೆಗೆ ನಿಗದಿಸಿದ ಅರ್ಜಿ ಶುಲ್ಕ :

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಎಲ್ಲಾ ವರ್ಗಕ್ಕೆ ಸೇರಿದ ಮಹಿಳಾ ಅಭ್ಯರ್ಥಿಗಳು ಹಾಗೂ ಅಂಗವಿಕಲ ಅಭ್ಯರ್ಥಿಗಳು  175ರೂ. ಅರ್ಜಿ ಶುಲ್ಕ ಪಾವತಿಸಬೇಕು. ಇವರನ್ನು ಹೊರತುಪಡಿಸಿ ಉಳಿದ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 850ರೂ. ಪಾವತಿಸಬೇಕು.

ನೇಮಕಾತಿಯ ಪ್ರಮುಖ ದಿನಾಂಕಗಳು:

* ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ — 3 ಡಿಸೆಂಬರ್ 2024

* ನೇಮಕಾತಿ ಆನ್ಲೈನ್ ಪರೀಕ್ಷಾ ದಿನಾಂಕ — ಜನವರಿ 2025

ಅರ್ಜಿ ಸಲ್ಲಿಕೆಗೆ ಪ್ರಮುಖ ಲಿಂಕ್ — https://www.centralbankofindia.co.in/en


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ