ವಾರ್ಷಿಕ ಆದಾಯ 1.20 ಲಕ್ಷ ರೂ. ಮೇಲ್ಪಟ್ಟವರ BPL ಕಾರ್ಡ್ ರದ್ದು ಕೇಂದ್ರ ಸರ್ಕಾರದ ತೀರ್ಮಾನ: ಸಚಿವ ಕೆ.ಹೆಚ್. ಮುನಿಯಪ್ಪ

ದಾವಣಗೆರೆ: ವಾರ್ಷಿಕ ಆದಾಯ 1 ಲಕ್ಷದ 20 ಸಾವಿರ ರೂಪಾಯಿಗಿಂತ ಮೇಲ್ಪಟ್ಟವರ ಬಿಪಿಎಲ್ ಕಾರ್ಡ್ ರದ್ದು ಮಾಡಬೇಕು ಎಂಬುದು ಕೇಂದ್ರ ಸರ್ಕಾರದ ತೀರ್ಮಾನ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವೇ ಒಂದು ಸರ್ವೆ ಮಾಡಿಸಿದೆ. ಆ ಸರ್ವೆ ಪ್ರಕಾರ 1 ಲಕ್ಷದ 20 ಸಾವಿರಕ್ಕಿಂತ ಹೆಚ್ಚು ವಾರ್ಪಿಕ ಆದಾಯ ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡಬೇಕು ಎಂದು ಹೇಳಿದ್ದಾರೆ. ಅದರ ಬಗ್ಗೆ ನಾವು ಯೋಚನೆ ಮಾಡುತ್ತಿದ್ದೇವೆ, ಅದನ್ನು ಮಾಡಬೇಕಾಗುತ್ತದೆ ಎಂದು ತಿಳಿಸಿದರು.
ಇನ್ನೂ ಒಳ ಮೀಸಲಾತಿ ಕುರಿತು ಮಾತನಾಡಿ, ಒಳ ಮೀಸಲಾತಿ ಜಾರಿಯಾದ ಮೇಲೆ ಮೊಟ್ಟ ಮೊದಲ ಸಭೆ ದಾವಣಗೆರೆಯಲ್ಲಿ ಮಾತನಾಡುತ್ತಿದ್ದೇವೆ. ಐತಿಹಾಸಿಕ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ನಾವೆಲ್ಲರೂ ಮಾಡಿದ್ದೇವೆ. 35 ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿದೆ. 101 ಜಾತಿಗಳಿಗೆ ಸಮಾನವಾಗಿ ಹಂಚಿಕೆ ಮಾಡಲಾಗಿದೆ. ಸಮುದಾಯಗಳು ಇದರ ಸದುಪಯೋಗ ಮಾಡಿಕೊಳ್ಳಬೇಕು. ಒಳ ಮೀಸಲಾತಿಯಿಂದ ಯಾರಿಗೂ ಅನ್ಯಾಯವಾಗಿಲ್ಲ, ಆಗೋದು ಇಲ್ಲ. ಅಂತಹದ್ದೇನಾದರೂ ಇದ್ದರೆ, ಸರಿ ಮಾಡುವ ಕೆಲಸ ಮಾಡೋಣ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD