ರೈತರ ಖಾತೆಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ: ಟ್ವಿಟ್ಟರ್ ಎಕ್ಸ್ ಅಸಮಾಧಾನ

ನವದೆಹಲಿ: ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ ಖಾತೆಗಳು ಮತ್ತು ಪೋಸ್ಟ್ ಗಳನ್ನು ನಿರ್ಬಂಧಿಸುವ ಭಾರತ ಸರ್ಕಾರದ ಆದೇಶಕ್ಕೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಅಸಮಾಧಾನ ವ್ಯಕ್ತಪಡಿಸಿದೆ.
ರೈತರ ಪ್ರತಿಭಟನೆಗೆ ಸಂಬಂಧಿಸಿದ 177 ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಆದೇಶಿಸಿದೆ ಎನ್ನಲಾಗಿದೆ. ಈ ನಿರ್ದೇಶನಗಳನ್ನು ಅನುಸರಿಸಲು ವಿಫಲವಾದರೆ, ಭಾರಿ ದಂಡ ಮತ್ತು ಜೈಲು ಶಿಕ್ಷೆ ಸೇರಿದಂತೆ ತೀವ್ರ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಎಕ್ಸ್, ಭಾರತದಲ್ಲಿ ಮಾತ್ರ ಈ ಖಾತೆಗಳು ಮತ್ತು ಪೋಸ್ಟ್ ಗಳಿಗೆ ನಿರ್ಬಂಧ ವಿಧಿಸುತ್ತೇವೆ. ಆದರೆ, ಈ ಕ್ರಮವನ್ನು ನಾವು ಒಪ್ಪುವುದಿಲ್ಲ ಮತ್ತು ಈ ಪೋಸ್ಟ್ ಗಳಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವಿಸ್ತರಿಸಬೇಕು ಎಂದು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಭಾರತ ಸರ್ಕಾರದ ಯಾವುದೇ ಖಾತೆಗಳು ಅಥವಾ ಪೋಸ್ಟ್ ಗಳನ್ನು ನಿರ್ಬಂಧಿಸುವ ಆದೇಶವನ್ನು ಪ್ರಶ್ನಿಸುವ ರಿಟ್ ಮೇಲ್ಮನವಿ ಬಾಕಿ ಉಳಿದಿದೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಸರ್ಕಾರದ ಈ ಆದೇಶವನ್ನು ಸಾರ್ವಜನಿಕಗೊಳಿಸುವಂತೆ ಎಕ್ಸ್ ಕರೆ ನೀಡಿದೆ.
ಸಾಮಾಜಿಕ ಮಾಧ್ಯಮ ಸಂಸ್ಥೆಯು ತನ್ನ ಬಳಕೆದಾರರಿಗೆ ಕಂಪನಿಯ ನೀತಿಗಳಿಗೆ ಅನುಗುಣವಾಗಿ ಸರ್ಕಾರದ ಕ್ರಮಗಳ ಸೂಚನೆಯನ್ನು ಒದಗಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth