5 ಮತ್ತು 8ನೇ ತರಗತಿಯಲ್ಲಿ  ವಿದ್ಯಾರ್ಥಿಯನ್ನು ಫೇಲ್ ಮಾಡಬಹುದು: ಏನಿದು ಹೊಸ ತಿದ್ದುಪಡಿ? - Mahanayaka

5 ಮತ್ತು 8ನೇ ತರಗತಿಯಲ್ಲಿ  ವಿದ್ಯಾರ್ಥಿಯನ್ನು ಫೇಲ್ ಮಾಡಬಹುದು: ಏನಿದು ಹೊಸ ತಿದ್ದುಪಡಿ?

school
23/12/2024

ನವದೆಹಲಿ: 5 ಮತ್ತು 8ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು,  ವಾರ್ಷಿಕ ಪರೀಕ್ಷೆಯಲ್ಲಿ ಈ ತರಗತಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುತ್ತದೆ.

ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು ಕಾಯ್ದೆ ನಿಯಮ—2010 ಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ಹೊಸ ನಿಯಮದ ಪ್ರಕಾರ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಅಧಿಕಾರವನ್ನ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ನೀಡಿದೆ.


ADS

ವಿದ್ಯಾರ್ಥಿ 5 ಮತ್ತು 8ನೇ ತರಗತಿಯಲ್ಲಿ ಫೇಲ್ ಆದರೆ 2 ತಿಂಗಳ ಒಳಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಆ ಪರೀಕ್ಷೆಯಲ್ಲೂ ಫೇಲ್ ಆದರೆ, ಆ ವಿದ್ಯಾರ್ಥಿ ಅದೇ ತರಗತಿಯಲ್ಲಿ ಓದಬೇಕಾಗುತ್ತದೆ. ಶಾಲಾ ಶಿಕ್ಷಣ ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾಗಿದೆ. ಹಾಗಾಗಿ ರಾಜ್ಯಗಳು ಈ ವಿಚಾರದಲ್ಲಿ ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ವರದಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ