ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ಸಿಗುತ್ತಾ..? ಕೇಂದ್ರ ಸರ್ಕಾರ ಹೇಳಿದ್ದೇನು..?

22/07/2024

ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡುವ ಯಾವುದೇ ಆಲೋಚನೆ ಇಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ. ಇದು ಬಿಜೆಪಿ ಮಿತ್ರಪಕ್ಷ ಜೆಡಿಯುದಲ್ಲಿ ಅಸಮಾಧಾನ ಮೂಡಿಸಿದ್ದು, ಈ ಹಿಂದೆ ನೀಡಿದ್ದ ಭರವಸೆಯನ್ನು ಎನ್‌ಡಿಎ ಸರ್ಕಾರಕ್ಕೆ ನೆನಪಿಸಿದೆ. ಜತೆಗೆ ಸೂಕ್ಷ್ಮ ಎಚ್ಚರಿಕೆಯನ್ನೂ ರವಾನಿಸಿದೆ.

ಆರ್ಥಿಕ ಬೆಳವಣಿಗೆ ಹಾಗೂ ಕೈಗಾರಿಕೀಕರಣವನ್ನು ಉತ್ತೇಜಿಸಲು ಬಿಹಾರ ಹಾಗೂ ಇತರೆ ಅತಿ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಉದ್ದೇಶ ಸರ್ಕಾರದ ಮುಂದೆ ಇದೆಯೇ ಎಂದು ಬಿಹಾರದ ಜಂಜಾರ್ಪುರದ ಜೆಡಿಯು ಸಂಸದ ರಾಮಪ್ರೀತ್ ಮಂಡಲ್ ಹಣಕಾಸು ಸಚಿವಾಲಯಕ್ಕೆ ಪ್ರಶ್ನೆ ಕೇಳಿದ್ದರು.

ಇದಕ್ಕೆ ಲಿಖಿತ ಉತ್ತರ ನೀಡಿರುವ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ಕಲ್ಪಿಸುವ ಯೋಚನೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

“ಕೆಲವು ತಾಂತ್ರಿಕ ಸಮಸ್ಯೆಗಳು ಇದ್ದರೆ, ಬಿಹಾರದ ಅಭಿವೃದ್ಧಿಗೆ ಸರ್ಕಾರವು ವಿಶೇಷ ಸ್ಥಾನಮಾನ ನೀಡಲೇಬೇಕು. ಬಿಹಾರದ ವಿಶೇಷ ಸ್ಥಾನಮಾನ ಮಾನ್ಯತೆ ನೀಡಲಾಗುತ್ತದೆ ಎಂಬ ಭರವಸೆಯನ್ನು ನಮಗೆ ನೀಡಿರುವ ಕಾರಣದಿಂದ ಮಾತ್ರವೇ ನಾವು ಮೈತ್ರಿಕೂಟದ ಭಾಗವಾಗಿದ್ದೇವೆ ಎನ್ನುವುದನ್ನು ಸ್ಪಷ್ಟಪಡಿಸಲು ಬಯಸುತ್ತೇವೆ” ಎಂದು ಜೆಡಿಯು ಹೇಳಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version