11:44 PM Thursday 21 - August 2025

ಕರ್ನಾಟಕದಲ್ಲೇ ಅತಿ ಹೆಚ್ಚು ಜಿಎಸ್ ಟಿ ಸಂಗ್ರಹ: ಜಿಎಸ್ ಟಿ ಪಾಲಿನಲ್ಲಿ ರಾಜ್ಯಕ್ಕೆ ಎಷ್ಟು ಸಿಕ್ತು ಮೊತ್ತ..?

12/06/2023

ವಿವಿಧ ಯೋಜನೆಗಳಿಗೆ ರಾಜ್ಯಗಳಲ್ಲಿ ಹಣ ಹೂಡಿಕೆ ತ್ವರಿತಗೊಳ್ಳಬೇಕೆಂಬ ಉದ್ದೇಶದ ಹಿನ್ನೆಲೆಯಲ್ಲಿ ಮುಂದಿನ ತಿಂಗಳ ಜಿಎಸ್ ಟಿ ಪಾಲನ್ನು ಸೇರಿಸಿ ಕೇಂದ್ರ ಸರ್ಕಾರ ಮೊತ್ತದ ಪಟ್ಟಿಯೊಂದನ್ನು ಬಿಡುಗಡೆ ಮಾಡಿದೆ.

ಇದರಲ್ಲಿ ತಿಂಗಳಿಗೆ 59,140 ಕೋಟಿ ರೂಪಾಯಿ ನೀಡಬೇಕಿದ್ದ ಕೇಂದ್ರ ಸರ್ಕಾರ ಈ ಬಾರಿ 1,18,280 ಕೋಟಿ ಹಣವನ್ನು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವರ್ಗಾಯಿಸಿದೆ.

ವಿವಿಧ ರಾಜ್ಯಗಳಿಗೆ ನೀಡಲಾಗಿರುವ 1,18,280 ಕೋಟಿ ರೂ. ಪೈಕಿ ಕರ್ನಾಟಕಕ್ಕೆ 4,314 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ಮಹಾರಾಷ್ಟ್ರಕ್ಕೆ 7,472 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು ಮಹಾರಾಷ್ಟ್ರ ಮತ್ತು ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹ ಮಾಡಿ ಕೇಂದ್ರಕ್ಕೆ ತಲುಪಿಸುವ ರಾಜ್ಯಗಳಾಗಿವೆ.

ಜಿಎಸ್‍ಟಿ ಪಾಲಿನಲ್ಲಿ ಉತ್ತರಪ್ರದೇಶಕ್ಕೆ ದೊಡ್ಡ ಪಾಲು ದೊರಕಿದೆ. ಉತ್ತರ ಪ್ರದೇಶಕ್ಕೆ 21,218 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಬಿಹಾರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ರಾಜ್ಯಗಳಿಗೆ 8,000 ಕೋಟಿ ರೂಪಾಯಿಗಿಂತ ಹೆಚ್ಚು ಜಿಎಸ್‍ಟಿ ಪಾಲು ಜೂನ್ ತಿಂಗಳಲ್ಲಿ ಸಿಕ್ಕಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version