ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ: ತುರ್ತು ಚಿಕಿತ್ಸಾ ವಾರ್ಡ್ ನಲ್ಲಿ ಚಿಕಿತ್ಸೆ - Mahanayaka
12:25 PM Saturday 23 - August 2025

ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ: ತುರ್ತು ಚಿಕಿತ್ಸಾ ವಾರ್ಡ್ ನಲ್ಲಿ ಚಿಕಿತ್ಸೆ

chaithra kundapur
15/09/2023


Provided by

ಬೆಂಗಳೂರು: ಉದ್ಯಮಿಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಕುಸಿದು ಬಿದ್ದಿರುವ ಘಟನೆ ನಡೆದಿದ್ದು, ಅವರನ್ನು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ 8 ಗಂಟೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾ ಅವರನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷಗಳ ಕಾಲ ವಿಚಾರಣೆ ವೇಳೆ ಏಕಾಏಕಿ ಪ್ರಜ್ಞೆ ಕಳೆದುಕೊಂಡ ಚೈತ್ರಾ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸದ್ಯ ಚೈತ್ರಾಗೆ ತುರ್ತು ಚಿಕಿತ್ಸಾ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚೈತ್ರಾ ಮೂರ್ಛೆ ರೋಗದಿಂದ ಬಳಲುತ್ತಿದ್ದರು ಎನ್ನಲಾಗಿದೆ. ವಿಚಾರಣೆ ವೇಳೆ ಮಾನಸಿಕ ಒತ್ತಡ ಉಂಟಾಗಿ ಮೂರ್ಛೆ ಹೋಗಿದ್ದಾರೆನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ