ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ಬಿಜೆಪಿಗೂ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿ

basavaraj bomayi
14/09/2023

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿರುವ ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೆ ಸಂಬಂಧ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಲ್ಲಿ ಪ್ರತಿಕ್ರಿಯಿಸಿದ್ದಾರೆ.

ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಲೇಬೇಕು. ಯಾರೇ ಇದ್ದರೂ ಕಠಿಣ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಟಿಕೆಟ್ ಕೊಡಿಸುತ್ತೇವೆ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ ಎಂದರು.

ಇತ್ತೀಚಿನ ಸುದ್ದಿ

Exit mobile version